Savings: ಏಪ್ರಿಲ್​ನಿಂದ ಜೂನ್​ವರೆಗಿನ ಅವಧಿಗೆ ವಿವಿಧ ಪೋಸ್ಟ್ ಆಫೀಸ್ ಸ್ಕೀಮ್​ಗಳಿಗೆ ಇರುವ ಬಡ್ಡಿದರ ಪಟ್ಟಿ

Small Savings Schemes Interest Rates: ಅಂಚೆ ಕಚೇರಿಯಲ್ಲಿ ಹಲವು ಉಳಿತಾಯ ಯೋಜನೆಗಳು ಲಭ್ಯ ಇವೆ. ಫಿಕ್ಸೆಡ್ ಡೆಪಾಸಿಟ್​ಗಳಿಂದ ಹಿಡಿದು ಸುಕನ್ಯ ಸಮೃದ್ಧಿ ಯೋಜನೆವರೆಗೂ ವಿವಿಧ ಸ್ಕೀಮ್​ಗಳನ್ನು ಪೋಸ್ಟ್ ಆಫೀಸ್​ನಲ್ಲಿ ಪಡೆಯಬಹುದು. ಪ್ರತೀ ಕ್ವಾರ್ಟರ್ ಅಥವಾ ಮೂರು ತಿಂಗಳಿಗೆ ಬಡ್ಡಿದರವನ್ನು ಪರಿಷ್ಕರಿಸಲಾಗುತ್ತದೆ. ಎಪ್ರಿಲ್​ನಿಂದ ಜೂನ್​ವರೆಗಿನ ಕ್ವಾರ್ಟರ್​ಗೆ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಮಾರ್ಚ್ 8ರಂದು ಪ್ರಕಟಿಸಲಾಗಿತ್ತು. ಹಿಂದಿನ ಕ್ವಾರ್ಟರ್​ನಲ್ಲಿ ಇದ್ದ ಬಡ್ಡಿದರಗಳನ್ನೇ ಮುಂದುವರಿಸಲಾಗಿದೆ.

Savings: ಏಪ್ರಿಲ್​ನಿಂದ ಜೂನ್​ವರೆಗಿನ ಅವಧಿಗೆ ವಿವಿಧ ಪೋಸ್ಟ್ ಆಫೀಸ್ ಸ್ಕೀಮ್​ಗಳಿಗೆ ಇರುವ ಬಡ್ಡಿದರ ಪಟ್ಟಿ
ಉಳಿತಾಯ ಯೋಜನೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 29, 2024 | 3:40 PM

ಸರ್ಕಾರದ ವತಿಯಿಂದ ನಡೆಸಲಾಗುವ ವಿವಿಧ ಸಣ್ಣ ಉಳಿತಾಯ ಯೋಜನೆಗಳಿಗೆ ಕಾಲ ಕಾಲಕ್ಕೆ ಬಡ್ಡಿದರಗಳನ್ನು ಪರಿಷ್ಕರಿಸಲಾಗುತ್ತದೆ. ಸಾಮಾನ್ಯವಾಗಿ ಪ್ರತೀ ಕ್ವಾರ್ಟರ್​ಗೂ ಬಡ್ಡಿದರಗಳ ಪರಿಷ್ಕರಣೆ ಆಗುತ್ತದೆ. 2024ರ ಜನವರಿಯಿಂದ ಮಾರ್ಚ್​ವರೆಗಿನ ತ್ರೈಮಾಸಿಕ ಅವಧಿಯಲ್ಲಿ ಅಂಚೆ ಕಚೇರಿಯ ವಿವಿಧ ಸೇವಿಂಗ್ಸ್ ಸ್ಕೀಮ್​ಗಳಿಗೆ ಇರಿಸಲಾಗಿದ್ದ ಬಡ್ಡಿದರಗಳನ್ನು ಏಪ್ರಿಲ್​ನಿಂದ ಜೂನ್​ವರೆಗಿನ ಕ್ವಾರ್ಟರ್​ಗೂ ಮುಂದುವರಿಸಲಾಗಿದೆ.

2024-25ರ ಹಣಕಾಸು ವರ್ಷದಲ್ಲಿ ಏಪ್ರಿಲ್ 1ರಿಂದ ಆರಂಭವಾಗಿ ಜೂನ್ 30ರವರೆಗೆ ಇರುವ ಮೊದಲ ಕ್ವಾರ್ಟರ್​ನಲ್ಲಿ ವಿವಿಧ ಸಣ್ಣ ಉಳಿತಾಯ ಯೋಜನೆಗಳ (small savings schemes) ಬಡ್ಡಿದರದಲ್ಲಿ ವ್ಯತ್ಯಯ ಆಗಿಲ್ಲ. 2023-24ರ ಕೊನೆಯ ಕ್ವಾರ್ಟರ್​ನಲ್ಲಿ ಇರಿಸಲಾಗಿದ್ದ ಬಡ್ಡಿದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಮಾರ್ಚ್ 8ರಂದು ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಂಚೆ ಕಚೇರಿ ಮಾಸಿಕ ಆದಾಯ ಯೋಜನೆಗೆ ಬಡ್ಡಿ ಶೇ. 7.4; ಅಧಿಕ ಬಡ್ಡಿ ಜೊತೆಗೆ ತೆರಿಗೆ ಲಾಭವೂ ಇದೆ ಎಂಐಎಸ್​ನಲ್ಲಿ

2024ರ ಎಪ್ರಿಲ್​ನಿಂದ ಜೂನ್ ಕ್ವಾರ್ಟರ್​ನಲ್ಲಿ ಪೋಸ್ಟ್ ಆಫೀಸ್ ಸ್ಕೀಮ್​​ಗಳಿಗೆ ಬಡ್ಡಿದರ

  • ಪೋಸ್ಟ್ ಆಫೀಸ್ ಸೇವಿಂಗ್ಸ್ ಅಕೌಂಟ್: ಶೇ. 4
  • ಒಂದು ವರ್ಷದ ಠೇವಣಿ: ಶೇ. 6.9
  • ಎರಡು ವರ್ಷದ ಠೇವಣಿ: ಶೇ. 7
  • ಮೂರು ವರ್ಷದ ಠೇವಣಿ: ಶೇ. 7.1
  • ಐದು ವರ್ಷದ ಠೇವಣಿ: ಶೇ. 7.5
  • ಸೀನಿಯರ್ ಸಿಟಿಜನ್ ಸೇವಿಂಗ್ಸ್ ಸ್ಕೀಮ್: ಶೇ. 8.2
  • ಮಾಸಿಕ ಆದಾಯ ಖಾತೆ: ಶೇ. 7.4
  • ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್: ಶೇ. 7.7
  • ಪಿಪಿಎಫ್ ಸ್ಕೀಮ್: ಶೇ. 7.1
  • ಕಿಸಾನ್ ವಿಕಾಸ್ ಪತ್ರ: ಶೇ. 7.5
  • ಮಹಿಳಾ ಸಮ್ಮಾನ್ ಸೇವಿಂಗ್ಸ್ ಸರ್ಟಿಫಿಕೇಟ್: ಶೇ. 7.5
  • ಸುಕನ್ಯ ಸಮೃದ್ಧಿ ಯೋಜನೆ: ಶೇ. 8.2ರಷ್ಟು ಬಡ್ಡಿ

ಇದನ್ನೂ ಓದಿ: ಎನ್​ಪಿಎಸ್ ಖಾತೆಗೆ ಲಾಗಿನ್ ಆಗಲು ಡಬಲ್ ಸೆಕ್ಯೂರಿಟಿ; ನ್ಯಾಷನಲ್ ಪೆನ್ಷನ್ ಸ್ಕೀಮ್ ಯಾರು ತೆರೆಯಬಹುದು, ಏನಿದರ ಲಾಭ

ಪಬ್ಲಿಕ್ ಪ್ರಾವಿಡೆಂಟ್ ಫಂಡ್, ಸುಕನ್ಯ ಸಮೃದ್ದಿ ಯೋಜನೆ, ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ, ಹಿರಿಯ ನಾಗರಿಕರ ಉಳಿತಾ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಮೊದಲಾದ ಸ್ಕೀಮ್​ಗಳು ಸಾಕಷ್ಟು ಜನಪ್ರಿಯವಾಗಿವೆ. ಪಿಪಿಎಫ್ ಟ್ಯಾಕ್ಸ್ ಡಿಡಕ್ಷನ್ ಕ್ಲೈಮ್ ಮಾಡಲು ಬಹಳ ಸೂಕ್ತವಾದ ಹೂಡಿಕೆ ಆಗಿದೆ. ಬಡ್ಡಿದರ ಕಡಿಮೆ ಆದರೂ ತೆರಿಗೆ ಲಾಭದ ಕಾರಣಕ್ಕೆ ಅದಕ್ಕೆ ಜನಪ್ರಿಯತೆ ಇದೆ. ವರ್ಷಕ್ಕೆ ಒಂದೂವರೆ ಲಕ್ಷ ರೂವರೆಗೂ ಇದರಲ್ಲಿ ಹೂಡಿಕೆ ಮಾಡಲು ಸಾಧ್ಯ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್