AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2026ರ ಜನವರಿ 1ರಿಂದ ನಿಷ್ಕ್ರಿಯಗೊಳ್ಳಲಿವೆ ಈ ಪ್ಯಾನ್ ಕಾರ್ಡ್​ಗಳು; ಕಾರಣವೇನು, ಪರಿಹಾರವೇನು ಇತ್ಯಾದಿ ವಿವರ ಇಲ್ಲಿದೆ

PAN not linked with Aadhaar will become inoperative from Jan 1st: ಆಧಾರ್ ಜೊತೆ ಪ್ಯಾನ್ ಲಿಂಕ್ ಮಾಡಬೇಕು ಎಂದು ಆದಾಯ ತೆರಿಗೆ ಇಲಾಖೆ ಹೇಳುತ್ತಲೇ ಬಂದಿದೆ. ಇದೀಗ ಡಿಸೆಂಬರ್ 31ಕ್ಕೆ ಡೆಡ್​ಲೈನ್ ಕೊಟ್ಟಿದೆ. 2025ರ ಡಿಸೆಂಬರ್ 31ರೊಳಗೆ ಆಧಾರ್​ಗೆ ಲಿಂಕ್ ಆಗದಿರುವ ಪ್ಯಾನ್ ನಂಬರ್​ಗಳು ನಿಷ್ಕ್ರಿಯಗೊಳ್ಳಲಿವೆ ಎಂದು ಸಿಬಿಡಿಟಿ ಹೇಳಿದೆ. ನಿಷ್ಕ್ರಿಯಗೊಂಡ ಪ್ಯಾನ್ ಇದ್ದೂ ಇಲ್ಲದಂತಾಗುತ್ತದೆ. ಹೆಚ್ಚಿನ ಬ್ಯಾಂಕಿಂಗ್ ಚಟುವಟಿಕೆ ಅಸಾಧ್ಯವಾಗುತ್ತದೆ.

2026ರ ಜನವರಿ 1ರಿಂದ ನಿಷ್ಕ್ರಿಯಗೊಳ್ಳಲಿವೆ ಈ ಪ್ಯಾನ್ ಕಾರ್ಡ್​ಗಳು; ಕಾರಣವೇನು, ಪರಿಹಾರವೇನು ಇತ್ಯಾದಿ ವಿವರ ಇಲ್ಲಿದೆ
ಪ್ಯಾನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 05, 2025 | 4:15 PM

Share

ನವದೆಹಲಿ, ನವೆಂಬರ್ 5: ಆಧಾರ್ ಕಾರ್ಡ್ ಜೊತೆ ಪ್ಯಾನ್ (PAN linked to Aadhaar) ಅನ್ನು ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಹೀಗೆ ಆಧಾರ್​ಗೆ ಲಿಂಕ್ ಆಗದ ಪ್ಯಾನ್ ಕಾರ್ಡ್​ಗಳು ಮುಂದಿನ ವರ್ಷದಿಂದ ನಿಷ್ಕ್ರಿಯಗೊಳ್ಳಲಿವೆ. ಅಂದರೆ, 2026ರ ಜನವರಿ 1ರಿಂದ ಇಂಥ ಪ್ಯಾನ್ ಸಂಖ್ಯೆ ಇನಾಪರೇಟಿವ್ ಆಗಲಿವೆ. ಪ್ಯಾನ್ ಇಲ್ಲದಿದ್ದರೆ ಬಹಳಷ್ಟು ಹಣಕಾಸು ಸೇವೆಗಳನ್ನು ಪಡೆಯಲು ಸಾಧ್ಯವಾಗದೇ ಹೋಗಬಹುದು.

2025ರ ಅಕ್ಟೋಬರ್ 1ಕ್ಕೆ ಮುನ್ನ ಪ್ಯಾನ್ ಕಾರ್ಡ್​ಗಳನ್ನು ಪಡೆದವರು ಆಧಾರ್​ಗೆ ಅದನ್ನು ಲಿಂಕ್ ಮಾಡಲು 2025ರ ಡಿಸೆಂಬರ್ 31ರವರೆಗೂ ಕಾಲಾವಕಾಶ ಕೊಡಲಾಗಿದೆ. ಅಷ್ಟರಲ್ಲಿ ಲಿಂಕ್ ಮಾಡದೇ ಹೋದರೆ ಪ್ಯಾನ್ ಅನ್ನು ಅನೂರ್ಜಿತಗೊಳಿಸಲಾಗುತ್ತದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹೇಳಿದೆ.

ಪ್ಯಾನ್ ಅಥವಾ ಪರ್ಮನೆಂಟ್ ಅಕೌಂಟ್ ನಂಬರ್ ಎಂಬುದು ಪ್ರತೀ ವ್ಯಕ್ತಿಗೂ ಆದಾಯ ತೆರಿಗೆ ಇಲಾಖೆ ನೀಡುವ ಗುರುತಿನ ಸಂಖ್ಯೆಯಾಗಿದೆ. ತೆರಿಗೆ ಉದ್ದೇಶದಿಂದ ಇದನ್ನು ನೀಡಲಾಗುತ್ತದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು, ದೊಡ್ಡ ಮೊತ್ತದ ಕ್ಯಾಷ್ ಡೆಪಾಸಿಟ್​ವರೆಗೆ ಅನೇಕ ಹಣಕಾಸು ಕಾರ್ಯಗಳಿಗೆ ಪ್ಯಾನ್ ಕಡ್ಡಾಯವಾಗಿರುತ್ತದೆ. ಹೀಗಾಗಿ, ವ್ಯಕ್ತಿಯ ಬಹುತೇಕ ಹಣಕಾಸು ಚಟುವಟಿಕೆಗಳು ಪ್ಯಾನ್ ಮೂಲಕ ಡಿಜಿಟಲ್ ಆಗಿ ದಾಖಲಾಗುತ್ತವೆ.

ಇದನ್ನೂ ಓದಿ: ಭಾರತೀಯ ಮಹಿಳಾ ಕ್ರಿಕೆಟಿಗರಿಗೆ ಹಣದ ಹೊಳೆ; ಇವರಿಗೆ ಎಷ್ಟು ಟ್ಯಾಕ್ಸ್ ಹೊರೆ ಬೀಳುತ್ತೆ ಗೊತ್ತಾ?

ಆಧಾರ್​ಗೆ ಪ್ಯಾನ್ ಲಿಂಕ್ ಆಗದೇ ಇದ್ದರೆ ಏನಾಗುತ್ತೆ?

  • ಆಧಾರ್​​ಗೆ ಪ್ಯಾನ್ ಲಿಂಕ್ ಆಗದೇ ಹೋದರೆ ಅದು ಇನಾಪರೇಟಿವ್ ಆಗುತ್ತದೆ.
  • ಪ್ಯಾನ್ ಇನಾಪರೇಟಿವ್ ಆದರೆ ಪ್ಯಾನ್ ಇದ್ದೂ ಇಲ್ಲದಂತಾಗುತ್ತದೆ
  • ಐಟಿ ರಿಟರ್ನ್ ಸಲ್ಲಿಸಲು ಆಗುವುದಿಲ್ಲ
  • ಸಲ್ಲಿಸಲಾಗಿರುವ ಐಟಿಆರ್​ಗಳನ್ನು ಪ್ರೋಸಸಿಂಗ್ ಮಾಡಲಾಗುವುದಿಲ್ಲ.
  • ಐಟಿಆರ್​ಗಳು ಪ್ರೋಸಸಿಂಗ್ ಆಗಿದ್ದರೂ ಅವಗಳಿಂದ ರೀಫಂಡಿಂಗ್ ಸಿಗುವುದಿಲ್ಲ.
  • ಟಿಡಿಎಸ್ ಮುರಿದುಕೊಳ್ಳುವುದಿದ್ದರೆ ಶೇ. 10 ಬದಲು ಶೇ. 20ರಷ್ಟು ಟ್ಯಾಕ್ಸ್ ಅನ್ನು ಹಿಡಿದುಕೊಳ್ಳಲಾಗುತ್ತದೆ.
  • ಹೊಸ ಬ್ಯಾಂಕ್ ಅಕೌಂಟ್ ತೆರೆಯಲು ಆಗುವುದಿಲ್ಲ.
  • ದೊಡ್ಡ ಮೊತ್ತದ ಕ್ಯಾಷ್ ಡೆಪಾಸಿಟ್ ಸಾಧ್ಯವಾಗುವುದಿಲ್ಲ.
  • ಉದ್ಯೋಗಿಗಳಿಗೆ ಸಂಬಳ ಕ್ರೆಡಿಟ್ ಆಗಲ್ಲ
  • ಎಸ್​ಐಪಿಗಳಿದ್ದರೆ ವರ್ಕ್ ಆಗಲ್ಲ.

ಹೀಗೆ ನಿಮ್ಮ ಹೆಚ್ಚಿನ ಹಣಕಾಸು ಚಟುವಟಿಕೆಗಳು ನಿಷ್ಕ್ರಿಯಗೊಳ್ಳುತ್ತವೆ.

ಆಧಾರ್​ಗೆ ಪ್ಯಾನ್ ಲಿಂಕ್ ಮಾಡುವುದು ಹೇಗೆ?

  • ಇನ್ಕಮ್ ಟ್ಯಾಕ್ಸ್ ಇಫೈಲಿಂಗ್ ವೆಬ್​ಸೈಟ್​ಗೆ ಭೇಟಿ ನೀಡಿ. ಇದರ ವಿಳಾಸ ಇಂತಿದೆ: www.incometax.gov.in
  • ವೆಬ್​ಸೈಟ್​ನ ಮುಖ್ಯಪುಟದಲ್ಲಿ ಕ್ವಿಕ್ ಲಿಂಕ್ಸ್ ಸೆಕ್ಷನ್ ಅಡಿಯಲ್ಲಿ ‘ಲಿಂಕ್ ಆಧಾರ್’ ಅನ್ನು ಕ್ಲಿಕ್ ಮಾಡಿ.
  • ನಿಮ್ಮ 10 ಸಂಖ್ಯೆಯ ಪ್ಯಾನ್ ನಂಬರ್ ಮತ್ತು 12 ಅಂಕಿಗಳ ಆಧಾರ್ ನಂಬರ್ ಅನ್ನು ಹಾಕಿ.
  • ಆಧಾರ್​ನಲ್ಲಿರುವ ಹೆಸರನ್ನು ನಮೂದಿಸಿ.
  • ‘ಐ ಅಗ್ರೀ ಟು ವ್ಯಾಲಿಡೇಟ್ ಮೈ ಆಧಾರ್ ಡೀಟೇಲ್ಸ್’ ಬಾಕ್ಸ್ ಅನ್ನು ಚೆಕ್ ಮಾಡಿ.
  • ಆಧಾರ್​ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಮೂಲಕ ಒಟಿಪಿ ಪಡೆದು ಹಾಕಿರಿ
  • ವ್ಯಾಲಿಡೇಟ್ ಕ್ಲಿಕ್ ಮಾಡಿ

ಇದನ್ನೂ ಓದಿ: ನಿಮ್ಮ ಸೇವಿಂಗ್ಸ್ ಅಕೌಂಟ್ ಮೇಲೆ ಐಟಿ ಕಣ್ಣು? ಈ ಟ್ರಾನ್ಸಾಕ್ಷನ್​ಗಳನ್ನು ಮಾಡುವಾಗ ಹುಷಾರ್

ಒಂದು ವೇಳೆ, ನೀವು ಡಿಸೆಂಬರ್ 31ರ ನಂತರ ಲಿಂಕ್ ಮಾಡುತ್ತಿದ್ದಲ್ಲಿ 1,000 ರೂ ಪೆನಾಲ್ಟಿ ಕಟ್ಟಬೇಕಾಗಬಹುದು. ಪ್ಯಾನ್ ಮತ್ತು ಆಧಾರ್ ಸಂಖ್ಯೆ ನಮೂದಿಸಿ ವ್ಯಾಲಿಡೇಟ್ ಆಧಾರ್ ಅನ್ನು ಕ್ಲಿಕ್ ಮಾಡಿದಾಗ ನಿಮಗೆ ಪೆನಾಲ್ಟಿ ಕಟ್ಟಬೇಕಿದ್ದರೆ ಅದರ ಸೂಚನೆ ನೀಡಲಾಗುತ್ತದೆ.

ಆಗ ‘ಕಂಟಿನ್ಯೂ ಟು ಪೇ ತ್ರೂ ಇ-ಪೇ ಟ್ಯಾಕ್ಸ್’ ಕ್ಲಿಕ್ ಮಾಡಿದರೆ ದಂಡ ಪಾವತಿಸುವ ಕ್ರಮಗಳನ್ನು ತೋರಿಸಲಾಗುತ್ತದೆ. ಅದರಂತೆ ಪೆನಾಲ್ಟಿ ಕಟ್ಟಿ, ನಂತರ ಮತ್ತೆ ಇಫೈಲಿಂಗ್ ವೆಬ್​ಸೈಟ್​ಗೆ ಬಂದು ಪ್ಯಾನ್ ಹಾಗೂ ಆಧಾರ್ ಅನ್ನು ಲಿಂಕ್ ಮಾಡಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು