
ನವದೆಹಲಿ, ನವೆಂಬರ್ 5: ಆಧಾರ್ ಕಾರ್ಡ್ ಜೊತೆ ಪ್ಯಾನ್ (PAN linked to Aadhaar) ಅನ್ನು ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಹೀಗೆ ಆಧಾರ್ಗೆ ಲಿಂಕ್ ಆಗದ ಪ್ಯಾನ್ ಕಾರ್ಡ್ಗಳು ಮುಂದಿನ ವರ್ಷದಿಂದ ನಿಷ್ಕ್ರಿಯಗೊಳ್ಳಲಿವೆ. ಅಂದರೆ, 2026ರ ಜನವರಿ 1ರಿಂದ ಇಂಥ ಪ್ಯಾನ್ ಸಂಖ್ಯೆ ಇನಾಪರೇಟಿವ್ ಆಗಲಿವೆ. ಪ್ಯಾನ್ ಇಲ್ಲದಿದ್ದರೆ ಬಹಳಷ್ಟು ಹಣಕಾಸು ಸೇವೆಗಳನ್ನು ಪಡೆಯಲು ಸಾಧ್ಯವಾಗದೇ ಹೋಗಬಹುದು.
2025ರ ಅಕ್ಟೋಬರ್ 1ಕ್ಕೆ ಮುನ್ನ ಪ್ಯಾನ್ ಕಾರ್ಡ್ಗಳನ್ನು ಪಡೆದವರು ಆಧಾರ್ಗೆ ಅದನ್ನು ಲಿಂಕ್ ಮಾಡಲು 2025ರ ಡಿಸೆಂಬರ್ 31ರವರೆಗೂ ಕಾಲಾವಕಾಶ ಕೊಡಲಾಗಿದೆ. ಅಷ್ಟರಲ್ಲಿ ಲಿಂಕ್ ಮಾಡದೇ ಹೋದರೆ ಪ್ಯಾನ್ ಅನ್ನು ಅನೂರ್ಜಿತಗೊಳಿಸಲಾಗುತ್ತದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹೇಳಿದೆ.
ಪ್ಯಾನ್ ಅಥವಾ ಪರ್ಮನೆಂಟ್ ಅಕೌಂಟ್ ನಂಬರ್ ಎಂಬುದು ಪ್ರತೀ ವ್ಯಕ್ತಿಗೂ ಆದಾಯ ತೆರಿಗೆ ಇಲಾಖೆ ನೀಡುವ ಗುರುತಿನ ಸಂಖ್ಯೆಯಾಗಿದೆ. ತೆರಿಗೆ ಉದ್ದೇಶದಿಂದ ಇದನ್ನು ನೀಡಲಾಗುತ್ತದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು, ದೊಡ್ಡ ಮೊತ್ತದ ಕ್ಯಾಷ್ ಡೆಪಾಸಿಟ್ವರೆಗೆ ಅನೇಕ ಹಣಕಾಸು ಕಾರ್ಯಗಳಿಗೆ ಪ್ಯಾನ್ ಕಡ್ಡಾಯವಾಗಿರುತ್ತದೆ. ಹೀಗಾಗಿ, ವ್ಯಕ್ತಿಯ ಬಹುತೇಕ ಹಣಕಾಸು ಚಟುವಟಿಕೆಗಳು ಪ್ಯಾನ್ ಮೂಲಕ ಡಿಜಿಟಲ್ ಆಗಿ ದಾಖಲಾಗುತ್ತವೆ.
ಇದನ್ನೂ ಓದಿ: ಭಾರತೀಯ ಮಹಿಳಾ ಕ್ರಿಕೆಟಿಗರಿಗೆ ಹಣದ ಹೊಳೆ; ಇವರಿಗೆ ಎಷ್ಟು ಟ್ಯಾಕ್ಸ್ ಹೊರೆ ಬೀಳುತ್ತೆ ಗೊತ್ತಾ?
ಹೀಗೆ ನಿಮ್ಮ ಹೆಚ್ಚಿನ ಹಣಕಾಸು ಚಟುವಟಿಕೆಗಳು ನಿಷ್ಕ್ರಿಯಗೊಳ್ಳುತ್ತವೆ.
ಇದನ್ನೂ ಓದಿ: ನಿಮ್ಮ ಸೇವಿಂಗ್ಸ್ ಅಕೌಂಟ್ ಮೇಲೆ ಐಟಿ ಕಣ್ಣು? ಈ ಟ್ರಾನ್ಸಾಕ್ಷನ್ಗಳನ್ನು ಮಾಡುವಾಗ ಹುಷಾರ್
ಒಂದು ವೇಳೆ, ನೀವು ಡಿಸೆಂಬರ್ 31ರ ನಂತರ ಲಿಂಕ್ ಮಾಡುತ್ತಿದ್ದಲ್ಲಿ 1,000 ರೂ ಪೆನಾಲ್ಟಿ ಕಟ್ಟಬೇಕಾಗಬಹುದು. ಪ್ಯಾನ್ ಮತ್ತು ಆಧಾರ್ ಸಂಖ್ಯೆ ನಮೂದಿಸಿ ವ್ಯಾಲಿಡೇಟ್ ಆಧಾರ್ ಅನ್ನು ಕ್ಲಿಕ್ ಮಾಡಿದಾಗ ನಿಮಗೆ ಪೆನಾಲ್ಟಿ ಕಟ್ಟಬೇಕಿದ್ದರೆ ಅದರ ಸೂಚನೆ ನೀಡಲಾಗುತ್ತದೆ.
ಆಗ ‘ಕಂಟಿನ್ಯೂ ಟು ಪೇ ತ್ರೂ ಇ-ಪೇ ಟ್ಯಾಕ್ಸ್’ ಕ್ಲಿಕ್ ಮಾಡಿದರೆ ದಂಡ ಪಾವತಿಸುವ ಕ್ರಮಗಳನ್ನು ತೋರಿಸಲಾಗುತ್ತದೆ. ಅದರಂತೆ ಪೆನಾಲ್ಟಿ ಕಟ್ಟಿ, ನಂತರ ಮತ್ತೆ ಇಫೈಲಿಂಗ್ ವೆಬ್ಸೈಟ್ಗೆ ಬಂದು ಪ್ಯಾನ್ ಹಾಗೂ ಆಧಾರ್ ಅನ್ನು ಲಿಂಕ್ ಮಾಡಬಹುದು.
ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ