AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PhonePe: ಫೋನ್​ಪೇ ಆ್ಯಪ್​ನಲ್ಲಿ ಇನ್ಕಮ್ ಟ್ಯಾಕ್ಸ್ ಹೊಸ ಫೀಚರ್; ಇಲಾಖೆ ಪೋರ್ಟಲ್​ಗೆ ಹೋಗೋ ಅಗತ್ಯ ಇಲ್ಲ

Income Tax Feature in PhonePe: ಡಿಜಿಟಲ್ ಪಾವತಿ ಪ್ಲಾಟ್​ಫಾರ್ಮ್ ಫೋನ್ ಪೇನಲ್ಲಿ ಈಗ ಇನ್ಕಮ್ ಟ್ಯಾಕ್ಸ್ ಎಂಬ ಹೊಸ ಫೀಚರ್ ಆರಂಭಿಸಲಾಗಿದೆ. ಬಹಳ ಸುಲಭವಾಗಿ ತೆರಿಗೆ ಪಾವತಿಸಲು ಇದು ಸಹಾಯವಾಗುತ್ತದೆ.

PhonePe: ಫೋನ್​ಪೇ ಆ್ಯಪ್​ನಲ್ಲಿ ಇನ್ಕಮ್ ಟ್ಯಾಕ್ಸ್ ಹೊಸ ಫೀಚರ್; ಇಲಾಖೆ ಪೋರ್ಟಲ್​ಗೆ ಹೋಗೋ ಅಗತ್ಯ ಇಲ್ಲ
ಫೋನ್ ಪೇ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 25, 2023 | 6:14 PM

Share

ಸರ್ಕಾರ ಆದಾಯ ತೆರಿಗೆ ಪಾವತಿ ವ್ಯವಸ್ಥೆಯನ್ನು (Income Tax Payment) ಹೆಚ್ಚೆಚ್ಚು ಸರಳಗೊಳಿಸುತ್ತಾ ಬರುತ್ತಿದೆ. ಈಗ ಫೋನ್ ಪೇನಲ್ಲಿ ಇನ್ಕಮ್ ಟ್ಯಾಕ್ಸ್ ಪೇಮೆಂಟ್ ಎಂಬ ಹೊಸ ಫೀಚರ್ ಆರಂಭವಾಗಿದೆ. ಇದರಲ್ಲಿ ಸೆಲ್ಫ್ ಅಸೆಸ್ಮೆಂಟ್ ಮತ್ತು ಅಡ್ವಾನ್ಸ್ ಟ್ಯಾಕ್ಸ್ ಅನ್ನು ಪಾವತಿಸಬಹುದು. ಇನ್ಕಮ್ ಟ್ಯಾಕ್ಸ್ ಪೋರ್ಟಲ್​ಗೆ ಲಾಗಿನ್ ಆಗದೇ ಫೋನ್​ಪೇ ಆ್ಯಪ್​ನಲ್ಲಿರುವ ಈ ಹೊಸ ಫೀಚರ್ ಮೂಲಕವೇ ನೇರವಾಗಿ ತೆರಿಗೆ ಪಾವತಿಸಲು ಸಾಧ್ಯವಾಗಲಿದೆ.

ಇನ್ಕಮ್ ಟ್ಯಾಕ್ಸ್ ಪೇಮೆಂಟ್ ಎಂಬ ಹೊಸ ಫೀಚರ್​ಗಾಗಿ ಪೇಮೇಟ್ ಎಂಬ ಡಿಜಿಟಲ್ ಬಿ2ಬಿ ಬ್ಯುಸಿನೆಸ್ ಸಂಸ್ಥೆ ಜೊತೆ ಫೋನ್ ಪೇ ಸಹಭಾಗಿತ್ವ ಹೊಂದಿದೆ. ಇನ್ಕಮ್ ಟ್ಯಾಕ್ಸ್ ಇಲಾಖೆಯ ಪೋರ್ಟಲ್​ನಲ್ಲಿ ಐಟಿಆರ್ ಫೈಲಿಂಗ್ ಮಾಡಲು ಲೋಡಿಂಗ್ ಸಮಸ್ಯೆಗಳಿವೆ ಎಂದು ಬಹಳ ಮಂದಿ ದೂರುವುದಿದೆ. ಇದನ್ನು ತಪ್ಪಿಸಲು ಫೋನ್ ಪೇನಲ್ಲಿರುವ ಇನ್ಕಮ್ ಟ್ಯಾಕ್ಸ್ ಫೀಚರ್ ಅನ್ನು ಬಳಸಿಕೊಳ್ಳಬಹುದು.

ಫೋನ್ ಪೇನಲ್ಲಿ ಕ್ರೆಡಿಟ್ ಕಾರ್ಡ್ ಅಥವಾ ಯುಪಿಐ ಬಳಸಿ ತೆರಿಗೆ ಹಣ ಪಾವತಿಸಬಹುದು. ಕೆಲ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಿದರೆ ರಿವಾರ್ಡ್ ಕೂಡ ಸಿಗಬಹುದು.

ಇದನ್ನೂ ಓದಿ: Tax Collection: ತೆರಿಗೆ ದರ ಹೆಚ್ಚಿಸಿಲ್ಲ, ಆದರೂ ತೆರಿಗೆ ಸಂಗ್ರಹ ಹೆಚ್ಚಿಸಿದ್ದೇವೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಫೋನ್ ಪೇನಲ್ಲಿ ತೆರಿಗೆ ಪಾವತಿಸುವುದು ಹೇಗೆ?

  • ಮೊಬೈಲ್​ನಲ್ಲಿ ಫೋನ್ ಪೇ ಆ್ಯಪ್ ತೆರೆಯಿರಿ
  • ಮುಖ್ಯಪುಟದಲ್ಲಿ ರೀಚಾರ್ಜ್ ಅಂಡ್ ಪೇ ಬಿಲ್ಸ್ ಸ್ಲಾಟ್​ನಲ್ಲಿ ಇನ್ಕಮ್ ಟ್ಯಾಕ್ಸ್ ಫೀಚರ್ ಕಾಣಬಹುದು. ಅದನ್ನು ಕ್ಲಿಕ್ ಮಾಡಿ
  • ನೀವು ಪ್ರಸಕ್ತ ಅಸೆಸ್ಮೆಂಟ್ ವರ್ಷದಲ್ಲಿ ಯಾವ ತೆರಿಗೆ ಪಾವತಿಸಬೇಕು ಎಂಬುದನ್ನು ಆಯ್ದುಕೊಳ್ಳಿ
  • ಪ್ಯಾನ್ ಕಾರ್ಡ್ ವಿವರ ನೀಡಿ
  • ತೆರಿಗೆ ಮೊತ್ತ ನಮೂದಿಸಿ ಕ್ರೆಡಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಹಣ ಪಾವತಿಸಿ
  • ಎರಡು ಕಾರ್ಯ ದಿನಗಳೊಳಗೆ ನೀವು ಪಾವತಿಸಿದ ಹಣ ಆದಾಯ ತೆರಿಗೆ ಇಲಾಖೆಗೆ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: ITR Deadline: ಐಟಿ ರಿಟರ್ನ್ ಫೈಲ್ ಮಾಡುವ ಗಡುವು ವಿಸ್ತರಣೆಯಾಗುತ್ತಾ? ಇಲ್ಲಿಯವರೆಗೆ ಐಟಿಆರ್ ಸಲ್ಲಿಸಿದವರೆಷ್ಟು? ಇಲ್ಲಿದೆ ಡೀಟೇಲ್ಸ್

ಏಳು ಕೋಟಿಗೂ ಹೆಚ್ಚು ಮಂದಿಯಿಂದ ಐಟಿಆರ್ ಸಲ್ಲಿಕೆ

ಆದಾಯ ತೆರಿಗೆ ಪೋರ್ಟಲ್​ನಲ್ಲಿ ಒಟ್ಟು 11.39 ಕೋಟಿ ವೈಯಕ್ತಿಕ ನೊಂದಾಯಿತರು ಇದ್ದಾರೆ. ಎರಡು ದಿನಗಳ ಹಿಂದೆ ಕೇಂದ್ರ ಸರ್ಕಾರ ನೀಡಿದ ಮಾಹಿತಿ ಪ್ರಕಾರ 7.40 ಕೋಟಿಗೂ ಹೆಚ್ಚು ಮಂದಿ ಐಟಿಆರ್ ಸಲ್ಲಿಕೆ ಮಾಡಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಐಟಿಆರ್​ಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಇದರಲ್ಲಿ 5 ಕೋಟಿಗೂ ಹೆಚ್ಚು ಮಂದಿ ತೆರಿಗೆ ಬಾಧ್ಯತೆ ಇಲ್ಲವೆಂದು ಘೋಷಿಸಿದವರೇ ಇದ್ದಾರೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ