PPF Investment Plan: ಪಿಪಿಎಫ್​ನಲ್ಲಿ ವಾರ್ಷಿಕ 1.5 ಲಕ್ಷ ರೂಪಾಯಿಗಿಂತ ಹೆಚ್ಚಿನ ಹೂಡಿಕೆಗೆ ಅವಕಾಶ ಇದೆಯೇ?

Public Provident Fund: ವಾರ್ಷಿಕ ಗರಿಷ್ಠ 1,50,000 ರೂ. ಮಾತ್ರ ಹೂಡಿಕೆ ಮಾಡಲು ಅವಕಾಶ ಇರುವುದರಿಂದ ಒಂದಕ್ಕಿಂತ ಹೆಚ್ಚು ಪಿಪಿಎಫ್ ಖಾತೆ ತೆರೆದು ಹೆಚ್ಚು ಮೊತ್ತ ಹೂಡಿಕೆ ಮಾಡಬಹುದೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ನಿಯಮಗಳು ಏನು ಹೇಳುತ್ತವೆ? ಇಲ್ಲಿದೆ ಮಾಹಿತಿ.

PPF Investment Plan: ಪಿಪಿಎಫ್​ನಲ್ಲಿ ವಾರ್ಷಿಕ 1.5 ಲಕ್ಷ ರೂಪಾಯಿಗಿಂತ ಹೆಚ್ಚಿನ ಹೂಡಿಕೆಗೆ ಅವಕಾಶ ಇದೆಯೇ?
SBI vs ICICI vs HDFC vs PPF FD Rates 2023 Comparison of Latest Fixed Deposit Interest Rate Image Credit source: PTI
Follow us
| Updated By: Digi Tech Desk

Updated on:Dec 27, 2022 | 2:14 PM

ಸಾರ್ವಜನಿಕ ಭವಿಷ್ಯ ನಿಧಿ (PPF) ತೆರಿಗೆ ಪ್ರಯೋಜನಗಳ ಜೊತೆಗೆ ಉತ್ತಮ ರಿಟರ್ನ್ಸ್ ಒದಗಿಸುವ ಸರ್ಕಾರಿ ಉಳಿತಾಯ ಯೋಜನೆಗಳಲ್ಲಿ ಪ್ರಮುಖವಾದದ್ದು. ಆದಾಯ ತೆರಿಗೆ ಕಾಯ್ದೆಯ (Income Tax Act) ಸೆಕ್ಷನ್ 80ಸಿ ಅಡಿ ತೆರಿಗೆ ವಿನಾಯಿತಿ ಪಡೆಯಲು ಇದೊಂದು ಉತ್ತಮ ಹೂಡಿಕೆ ಆಯ್ಕೆಯಾಗಿದೆ. ಪಿಪಿಎಫ್​ ಖಾತೆಯಲ್ಲಿ ಹೂಡಿಕೆ ಮಾಡಿರುವ ಸಂಚಿತ ಮೊತ್ತಕ್ಕೆ ನೀಡಲಾಗುವ ಬಡ್ಡಿಗೆ ತೆರಿಗೆ ವಿನಾಯಿತಿ ಇದ್ದು, ಮೆಚ್ಯೂರಿಟಿ ಅವಧಿಯ ಬಳಿಕ ಹಿಂಪಡೆಯುವ ಬಡ್ಡಿಗೆ ತೆರಿಗೆ ಇರುವುದಿಲ್ಲ. ಆದರೆ, ಒಂದು ಹಣಕಾಸು ವರ್ಷದಲ್ಲಿ ಕನಿಷ್ಠ 500 ರೂ.ಗಳಿಂದ ಗರಿಷ್ಠ 1,50,000 ರೂ.ವರೆಗೆ ಮಾತ್ರ ಹೂಡಿಕೆಗೆ ಅವಕಾಶವಿದೆ.

ಒಂದಕ್ಕಿಂತ ಹೆಚ್ಚು ಪಿಪಿಎಫ್​ ಖಾತೆ ತೆರೆಯಬಹುದೇ?

ವಾರ್ಷಿಕ ಗರಿಷ್ಠ 1,50,000 ರೂ. ಮಾತ್ರ ಹೂಡಿಕೆ ಮಾಡಲು ಅವಕಾಶ ಇರುವುದರಿಂದ ಒಂದಕ್ಕಿಂತ ಹೆಚ್ಚು ಪಿಪಿಎಫ್ ಖಾತೆ ತೆರೆದು ಹೆಚ್ಚು ಮೊತ್ತ ಹೂಡಿಕೆ ಮಾಡಬಹುದೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಆದರೆ, ಈ ರೀತಿಯ ಹೂಡಿಕೆಯನ್ನು ಸರ್ಕಾರ ನಿರ್ಬಂಧಿಸಿದೆ. 2019ರ ನಂತರ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚಿನ ಪಿಪಿಎಫ್ ಖಾತೆ ತೆರೆದಿದ್ದರೆ ಅಂಥ ಖಾತೆಗಳನ್ನು ವಿಲೀನಗೊಳಿಸುವಂತಿಲ್ಲ ಎಂದು ಹಣಕಾಸು ಮತ್ತು ಆರ್ಥಿಕ ವ್ಯವಹಾರಗಳ ಸಚಿವಾಲಯ ಈ ಹಿಂದೆಯೇ ನಿರ್ದೇಶನ ನೀಡಿದೆ. 2019ರ ಪಿಪಿಎಫ್ ನಿಯಮಗಳ ಅಡಿಯಲ್ಲಿ ಒಂದಕ್ಕಿಂತ ಹೆಚ್ಚು ಪಿಪಿಎಫ್​ ಖಾತೆಗಳನ್ನು ವಿಲೀನಗೊಳಿಸುವಂತಿಲ್ಲ. ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪಿಪಿಎಫ್ ಖಾತೆ ಹೊಂದಿದ್ದರೆ ಅಂಥ ಖಾತೆಗಳನ್ನು ಬಡ್ಡಿ ನೀಡದೇ ಮುಚ್ಚಬೇಕು ಎಂದು ಸಚಿವಾಲಯ 2022ರ ಮಾರ್ಚ್​​ನಲ್ಲಿ ಸ್ಪಷ್ಟಪಡಿಸಿತ್ತು. ಇಂಥ ಖಾತೆಗಳ ವಿಲೀನಕ್ಕೆ ಪ್ರಸ್ತಾವ ಕಳುಹಿಸಬಾರದು ಎಂದೂ ಸಚಿವಾಲಯ ಹೇಳಿತ್ತು.

ಬಜೆಟ್​​ನಲ್ಲಿ ಪಿಪಿಎಫ್ ಹೂಡಿಕೆ ಮಿತಿ ಹೆಚ್ಚಿಸುವ ನಿರೀಕ್ಷೆ

ಪಿಪಿಎಫ್ ಹೂಡಿಕೆ ಮಿತಿಯನ್ನು ಹೆಚ್ಚಿಸಬೇಕು ಎಂಬ ಬೇಡಿಕೆ ಈಗಾಗಲೇ ಸರ್ಕಾರದ ಮುಂದಿದೆ. ಉದ್ಯೋಗಿಗಳ ಅನೇಕ ಸಂಘಟನೆಗಳು ಈ ವಿಚಾರವಾಗಿ ಸರ್ಕಾರವನ್ನು ಆಗ್ರಹಿಸಿವೆ. ಪಿಪಿಎಫ್ ಹೂಡಿಕೆಯ ವಾರ್ಷಿಕ ಮಿತಿಯನ್ನು 1.5 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹೆಚ್ಚಳ ಮಾಡಬೇಕು ಎಂದು ಇನ್​ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಇತ್ತೀಚೆಗಷ್ಟೇ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿತ್ತು. ಪಿಪಿಎಫ್​ ಮಿತಿಯನ್ನು ಹೆಚ್ಚಿಸುವುದರಿಂದ ದೇಶೀಯ ಉಳಿತಾಯ ಹೆಚ್ಚಾಗಲಿದೆ. ಖಾತೆದಾರರಿಗೂ ಪ್ರಯೋಜನವಾಗಲಿದೆ ಎಂದು ಐಸಿಎಐ ಹೇಳಿತ್ತು.

ಇದನ್ನೂ ಓದಿ: PPF: ಪಿಪಿಎಫ್​ ಹೂಡಿಕೆ ಮಿತಿ ಹೆಚ್ಚಿಸಿ; ಸರ್ಕಾರಕ್ಕೆ ಬಜೆಟ್​​ ಬೇಡಿಕೆ ಸಲ್ಲಿಸಿದ ಐಸಿಎಐ

ಪಿಪಿಎಫ್​ ಖಾತೆಯಲ್ಲಿ ವಾರ್ಷಿಕ ಹೂಡಿಕೆಗೆ 1 ಲಕ್ಷ ರೂ. ಮಿತಿ ಇತ್ತು. 2014ರಲ್ಲಿ ಕೇಂದ್ರ ಸರ್ಕಾರ ಮಿತಿಯನ್ನು 1.5 ಲಕ್ಷ ರೂ.ಗೆ ಹೆಚ್ಚಿಸಿತ್ತು. ಇದೀಗ 3 ಲಕ್ಷ ರೂ.ವರೆಗೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ. 2023ರ ಫೆಬ್ರವರಿ 1ರಂದು 2023-24ನೇ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಈ ಬೇಡಿಕೆಯನ್ನು ಸರ್ಕಾರ ಈಡೇರಿಸುವ ನಿರೀಕ್ಷೆ ಇದೆ ಎನ್ನಲಾಗಿದೆ. ಆದರೆ, ಈ ವಿಚಾರವಾಗಿ ಸರ್ಕಾರ ಅಧಿಕೃತ ಹೇಳಿಕೆ ನೀಡಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:12 pm, Tue, 27 December 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ