SBI Interest Hike: ನೀವು ಎಸ್​ಬಿಐ ಗ್ರಾಹಕರೇ? ಹೆಚ್ಚು ಮೊತ್ತದ ಇಎಂಐ ಪಾವತಿಸಲು ಸಿದ್ಧರಾಗಿ

ಎಲ್ಲ ಅವಧಿಯ ಸಾಲಗಳಿಗೆ ಪರಿಷ್ಕೃತ ಬಡ್ಡಿ ದರ ಅನ್ವಯವಾಗಲಿದೆ. ನೂತನ ಬಡ್ಡಿ ದರ ಅಕ್ಟೋಬರ್ 15ರಿಂದಲೇ ಪೂರ್ವಾನ್ವಯವಾಗಲಿದೆ.

SBI Interest Hike: ನೀವು ಎಸ್​ಬಿಐ ಗ್ರಾಹಕರೇ? ಹೆಚ್ಚು ಮೊತ್ತದ ಇಎಂಐ ಪಾವತಿಸಲು ಸಿದ್ಧರಾಗಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Oct 18, 2022 | 4:59 PM

ನವದೆಹಲಿ: ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು (MCLR) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸೋಮವಾರ 25 ಮೂಲಾಂಶಗಳಷ್ಟು (BPS) ಹೆಚ್ಚಿಸಿದೆ. ಇದು ಎಲ್ಲ ಅವಧಿಯ ಸಾಲಗಳಿಗೆ ಅನ್ವಯವಾಗಲಿದೆ. ನೂತನ ಬಡ್ಡಿ ದರ ಅಕ್ಟೋಬರ್ 15ರಿಂದಲೇ ಪೂರ್ವಾನ್ವಯವಾಗಲಿದೆ. ಚಿಲ್ಲರೆ ಸಾಲದ ವಿಚಾರದಲ್ಲಿ ಒಂದು ವರ್ಷದ ಕನಿಷ್ಠ ಬಡ್ಡಿ ದರವನ್ನು ಮಹತ್ವದ್ದೆಂದು ಪರಿಗಣಿಸಲಾಗಿದೆ. ಯಾಕೆಂದರೆ, ಗೃಹ ಸಾಲವೂ ಸೇರಿದಂತೆ ದೀರ್ಘಾವಧಿಯ ಸಾಲಗಳು ಕನಿಷ್ಠ ಬಡ್ಡಿ ದರ ವ್ಯಾಪ್ತಿಗೆ ಬರುತ್ತವೆ ಎಂದು ಬ್ಯಾಂಕ್ ತಿಳಿಸಿದೆ.

ಒಂದು ದಿನದಿಂದ ಮೂರು ತಿಂಗಳ ಅವಧಿಯ ಎಸ್​ಬಿಐ ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು ಶೇಕಡಾ 7.60 ಯಿಂದ 7.35ಕ್ಕೆ ಹೆಚ್ಚಿಸಲಾಗಿದೆ. ಆರು ತಿಂಗಳ ಅವಧಿಯ ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು ಶೇಕಡಾ 7.65ರಿಂದ 7.90ಕ್ಕೆ ಹೆಚ್ಚಿಸಲಾಗಿದೆ. ಒಂದು ವರ್ಷ ಅವಧಿಯ ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು ಶೇಕಡಾ 7.7ರಿಂದ 7.95ಕ್ಕೆ ಹೆಚ್ಚಿಸಲಾಗಿದೆ. 2 ವರ್ಷ ಅವಧಿಯ ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು ಶೇಕಡಾ 7.9ರಿಂದ 8.15ಕ್ಕೆ ಮತ್ತು 3 ವರ್ಷ ಅವಧಿಯ ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು ಶೇಕಡಾ 8ರಿಂದ 8.25ಕ್ಕೆ ಹೆಚ್ಚಳ ಮಾಡಲಾಗಿದೆ.

ಎಸ್​ಬಿಐ ಸಾಲದ ಮೇಲಿನ ಪರಿಷ್ಕೃತ ಕನಿಷ್ಠ ಬಡ್ಡಿ ದರ ಪಟ್ಟಿ:

ಇದನ್ನೂ ಓದಿ
Image
Credit Score: ಕ್ರೆಡಿಟ್ ಸ್ಕೋರ್ ಉತ್ತಮಗೊಳಿಸುವುದು ಹೇಗೆ? ಇಲ್ಲಿದೆ ಸಲಹೆ
Image
Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ 270 ರೂ. ಏರಿಕೆ; ಇಂದಿನ ಬೆಳ್ಳಿ ದರವೆಷ್ಟು ಗೊತ್ತಾ?
Image
ರೂಪಾಯಿ ಕುಸಿತವಲ್ಲ, ಡಾಲರ್​​ ಬಲಗೊಳ್ಳುತ್ತಿದೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Image
SBI Interest Rate on FD: ಎಫ್​ಡಿ ಬಡ್ಡಿ ಹೆಚ್ಚಿಸಿದ ಎಸ್​ಬಿಐ, ಇಲ್ಲಿದೆ ಪರಿಷ್ಕೃತ ಬಡ್ಡಿ ದರ ಮಾಹಿತಿ

ಒಂದು ದಿನದಿಂದ 1 ತಿಂಗಳ ಅವಧಿ – 7.60%

ಮೂರು ತಿಂಗಳ ಅವಧಿ – 7.60%

ಆರು ತಿಂಗಳ ಅವಧಿ – 7.90%

ಒಂದು ವರ್ಷ – 7.95%

ಎರಡು ವರ್ಷ – 8.15%

2 ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತದ ಸ್ಥಿರ ಠೇವಣಿಗಳ ಬಡ್ಡಿ ದರವನ್ನು ಎಸ್​ಬಿಐ 20 ಮೂಲಾಂಶಗಳ ವರೆಗೆ ಹೆಚ್ಚಿಸಿ ಅಕ್ಟೋಬರ್ 15ರಂದು ಪ್ರಕಟಣೆ ಹೊರಡಿಸಿತ್ತು. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಬಡ್ಡಿ ದರವನ್ನೂ ಹೆಚ್ಚಿಸಲಾಗಿದೆ.

ಇದನ್ನೂ ಓದಿ: SBI Interest Rate on FD: ಎಫ್​ಡಿ ಬಡ್ಡಿ ಹೆಚ್ಚಿಸಿದ ಎಸ್​ಬಿಐ, ಇಲ್ಲಿದೆ ಪರಿಷ್ಕೃತ ಬಡ್ಡಿ ದರ ಮಾಹಿತಿ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ರೆಪೊ ದರ ಹೆಚ್ಚಿಸಿದಾಗಲೆಲ್ಲ ಸಾಮಾನ್ಯವಾಗಿ ಬ್ಯಾಂಕ್​ಗಳು ಮತ್ತು ಹಣಕಾಸು ಸಂಸ್ಥೆಗಳು ಬಡ್ಡಿ ದರ ಪರಿಷ್ಕರಿಸುತ್ತವೆ. ಅದೇ ರೀತಿ ಎಸ್​ಬಿಐ ಸಾಲದ ಮೇಲಿನ ಕನಿಷ್ಠ ಬಡ್ಡಿ ದರ ಪರಿಷ್ಕರಣೆ ಮಾಡಿದೆ. ಸೆಪ್ಟೆಂಬರ್ 30ರಂದು ಆರ್​ಬಿಐ ರೆಪೊ ದರವನ್ನು ಶೇಕಡಾ 0.50 ಹೆಚ್ಚಿಸಿ, 5.9ಕ್ಕೆ ನಿಗದಿಪಡಿಸಿತ್ತು. ಇದಕ್ಕೂ ಮುನ್ನ ಸತತ 3 ಬಾರಿ ಆರ್​ಬಿಐ ರೆಪೊ ದರ ಹೆಚ್ಚಳ ಮಾಡಿತ್ತು. ಆವಾಗಲೂ ಪ್ರಮುಖ ಬ್ಯಾಂಕ್​ಗಳು ಬಡ್ಡಿ ದರವನ್ನು ಹೆಚ್ಚಿಸಿದ್ದವು.

Published On - 1:44 pm, Mon, 17 October 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ