AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂನಿಯನ್ ಬ್ಯಾಂಕ್​ನಲ್ಲಿ ಎಫ್​ಡಿ ದರ ಹೆಚ್ಚಳ; ಫಿಕ್ಸೆಡ್ ಇಟ್ಟರೆ ಶೇ. 8.15ರವರೆಗೆ ಬಡ್ಡಿ

Union Bank of India fixed deposit rates: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ ತನ್ನ ವಿವಿಧ ಫಿಕ್ಸೆಡ್ ಡೆಪಾಸಿಟ್ ದರಗಳನ್ನು ಪರಿಷ್ಕರಿಸಿದೆ. ಶೇ. 8.15ರವರೆಗೂ ಅದರ ಠೇವಣಿ ದರಗಳಿವೆ. 333 ದಿನಗಳ ಠೇವಣಿಗೆ ಗರಿಷ್ಠ ಬಡ್ಡಿ ಸಿಗುತ್ತದೆ. 80 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಹೆಚ್ಚಿನ ಬಡ್ಡಿ ಸಿಗುತ್ತದೆ.

ಯೂನಿಯನ್ ಬ್ಯಾಂಕ್​ನಲ್ಲಿ ಎಫ್​ಡಿ ದರ ಹೆಚ್ಚಳ; ಫಿಕ್ಸೆಡ್ ಇಟ್ಟರೆ ಶೇ. 8.15ರವರೆಗೆ ಬಡ್ಡಿ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 08, 2024 | 6:52 PM

Share

ಬ್ಯಾಂಕುಗಳಿಗೆ ಈಗ ಠೇವಣಿಗಳ ಅವಶ್ಯಕತೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಹೀಗಾಗಿ, ಠೇವಣಿ ದರಗಳನ್ನು ಎಲ್ಲಾ ಬ್ಯಾಂಕುಗಳೂ ಹೆಚ್ಚಿಸುತ್ತಿವೆ. ಹೆಚ್ಚಿನ ಬ್ಯಾಂಕುಗಳು ಈಗ ಶೇ. 8ರವರೆಗೆ ಬಡ್ಡಿದರ ಆಫರ್ ಮಾಡುತ್ತಿವೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ ವಿವಿಧ ಠೇವಣಿಗಳ ರೇಟ್ ಹೆಚ್ಚಿಸಿದೆ. ಶೇ. 8.15ರವರೆಗೆ ವಾರ್ಷಿಕ ಬಡ್ಡಿ ಕೊಡುತ್ತಿದೆ. ಇದು ಇಪಿಎಫ್​ಗೆ ನೀಡುವ ಬಡ್ಡಿಗೆ ಸಮ. 333 ದಿನಗಳ ಠೇವಣಿಗೆ ಗರಿಷ್ಠ ಬಡ್ಡಿ ಆಫರ್ ಮಾಡುತ್ತಿದೆ ಯುಬಿಐ.

ಯೂನಿಯನ್ ಬ್ಯಾಂಕ್​ನಲ್ಲಿ ಒಂದು ವರ್ಷಕ್ಕಿಂತ ತುಸು ಕಡಿಮೆ ಅವಧಿಯ ಈ 333 ದಿನಗಳ ಫಿಕ್ಸೆಡ್ ಡೆಪಾಸಿಟ್​ಗೆ ಸಾಮಾನ್ಯ ಗ್ರಾಹಕರಿಗೆ ಶೇ. 7.4ರಷ್ಟು ಬಡ್ಡಿ ಆಫರ್ ಮಾಡಲಾಗಿದೆ. 60 ವರ್ಷ ಮೇಲ್ಪಟ್ಟ ಮತ್ತು 80 ವರ್ಷ ಒಳಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ 50 ಮೂಲಾಂಕಗಳಷ್ಟು ಹೆಚ್ಚು ಬಡ್ಡಿ ಸಿಗುತ್ತದೆ. 80 ವರ್ಷ ಮೇಲ್ಪಟ್ಟ ವಯಸ್ಸಿನ ಸೂಪರ್ ಸೀನಿಯರ್ ಸಿಟಿಜನ್​ಗಳಿಗೆ ಇನ್ನೂ ಹೆಚ್ಚಿನ ಬಡ್ಡಿ ಸಿಗುತ್ತದೆ. ಇವರ 333 ದಿನಗಳ ಡೆಪಾಸಿಟ್​ಗೆ ಶೇ 8.15ರಷ್ಟು ಬಡ್ಡಿಯನ್ನು ಯೂನಿಯನ್ ಬ್ಯಾಂಕ್ ಒದಗಿಸುತ್ತದೆ.

ಇದನ್ನೂ ಓದಿ: ಯುವಜನರಿಗೆಂದು ಎಲ್​ಐಸಿಯಿಂದ ಎರಡು ಹೊಸ ಟರ್ಮ್ ಇನ್ಷೂರೆನ್ಸ್ ಪಾಲಿಸಿ ಬಿಡುಗಡೆ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇತರ ಅವಧಿಗಳಿಗೆ ಠೇವಣಿ ದರ ಎಷ್ಟಿದೆ ಎಂದು ನೋಡುವುದಾದರೆ 399 ದಿನದ ಡೆಪಾಸಿಟ್​ಗೆ ಶೇ. 7.25ರಿಂದ ಶೇ. 8ರವರೆಗೆ ಬಡ್ಡಿ ಸಿಗುತ್ತದೆ. ಸಾಮಾನ್ಯ ಗ್ರಾಹಕರ 399 ದಿನದ ಠೇವಣಿಗೆ ಶೇ. 7.25ರಷ್ಟು ಬಡ್ಡಿ ಸಿಗುತ್ತದೆ. ಹಿರಿಯ ನಾಗರಿಕರು ಮತ್ತು ಅತಿ ಹಿರಿಯ ನಾಗರಿಕರಿಗೆ ಕ್ರಮವಾಗಿ ಶೇ. 7.75 ಮತ್ತು ಶೇ. 8 ಬಡ್ಡಿ ಸಿಗುತ್ತದೆ.

ಸಾಮಾನ್ಯ ಗ್ರಾಹಕರ 3 ವರ್ಷದ ಫಿಕ್ಸೆಡ್ ಡೆಪಾಸಿಟ್​ಗೆ ಯೂನಿಯನ್ ಬ್ಯಾಂಕ್ ಶೇ. 6.7 ಬಡ್ಡಿ ಆಫರ್ ಮಾಡುತ್ತದೆ. 3ರಿಂದ 10 ವರ್ಷದ ಅವಧಿಯ ಠೇವಣಿಗಳಿಗೆ ಶೇ. 6.5ರಷ್ಟು ಮಾತ್ರವೇ ಬಡ್ಡಿ ಸಿಗುತ್ತದೆ.

ಇದನ್ನೂ ಓದಿ: ಚಿನ್ನ ಖರೀದಿಸಬೇಕೆನ್ನುವವರಿಗೆ ಗೋಲ್ಡ್ ಇಟಿಎಫ್ ಉತ್ತಮ ಆಯ್ಕೆ; ಇಲ್ಲಿವೆ ಕಾರಣಗಳು…

ಈ ಮೇಲಿನವು ಸೇರಿದಂತೆ ವಿವಿಧ ಠೇವಣಿ ದರಗಳನ್ನು ಯುಬಿಐ ಪರಿಷ್ಕರಣೆ ನಡೆಸಿದೆ. ಆಗಸ್ಟ್ 2ರಿಂದ ಈ ನೂತನ ದರಗಳು ಜಾರಿಗೆ ಬಂದಿವೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ