Petrol Price Today: ಇಂದು ಪೆಟ್ರೋಲ್ ಹಾಗೂ ಡೀಸೆಲ್​ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಕರ್ನಾಟಕದಲ್ಲಿ ಬೆಲೆ ಸ್ಥಿರವಾಗಿದೆ.

Petrol Price Today: ಇಂದು ಪೆಟ್ರೋಲ್ ಹಾಗೂ ಡೀಸೆಲ್​ ದರ ಎಷ್ಟಿದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Edited By:

Updated on: Oct 16, 2021 | 8:43 AM

Petrol Diesel Price Today | ದೆಹಲಿ: ದೇಶಾದ್ಯಂತ ಇಂದು (ಅಕ್ಟೋಬರ್ 16, ಶನಿವಾರ) ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ನಿನ್ನೆ ಸಹ ಇಂದನ ದರದಲ್ಲಿ (Fuel Price) ಏರಿಕೆ ಕಂಡು ಬಂದಿತ್ತು. ಆ ಬಳಿಕ ಇಂದು ಸಹ ಪೆಟ್ರೋಲ್ (Petrol Price), ಡೀಸೆಲ್ ಬೆಲೆಗಳಲ್ಲಿ (Diesel Price) ಏರಿಕೆ ಆಗಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಏರಿಕೆಯಿಂದ 105.49 ರೂಪಾಯಿ ನಿಗದಿಯಾಗಿದೆ. ಡೀಸೆಲ್ ದರದಲ್ಲಿಯೂ 35 ಪೈಸೆ ಹೆಚ್ಚಳವಾಗಿದ್ದು, ಲೀಟರ್ ಡೀಸೆಲ್ ಬೆಲೆ 93.22 ರೂಪಾಯಿಗೆ ಏರಿಕೆಯಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 34 ಪೈಸೆ ಹೆಚ್ಚಳವಾಗಿದ್ದು, 111.43 ರೂಪಾಯಿಗೆ ಏರಿಕೆಯಾಗಿದೆ.  ಲೀಟರ್ ಡೀಸೆಲ್ ದರ 102.15 ರೂಪಾಯಿ ನಿಗದಿಯಾಗಿದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 106.11 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.33 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.59 ರೂಪಾಯಿ ಇದೆ.

ಇನ್ನು, ಕರ್ನಾಟಕದಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.80 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 99.63 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೊಲ್ ದರ 109.37 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.42 ರೂಪಾಯಿ ನಿಗದಿಯಾಗಿದೆ. ಕಳೆದ 2 ವಾರಗಳಲ್ಲಿ ಗಮನಿಸಿದರೆ ಪೆಟ್ರೋಲ್ ಬೆಲೆಯಲ್ಲಿ 15 ಬಾರಿ ಹಾಗೂ ಡೀಸೆಲ್ ದರವನ್ನು 18 ಬಾರಿ ಏರಿಕೆ ಮಾಡಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

TV9 Web

TV9 Kannada

Read More
Loading...
Unable to load recommendations.
Follow Us