Petrol Diesel Price on July 04: ಕಚ್ಚಾತೈಲ ದುಬಾರಿ, ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಏರಿಕೆಯಾಗಿದೆ. ಬ್ರೆಂಟ್ ಕಚ್ಚಾತೈಲವು ಪ್ರತಿ ಬ್ಯಾರೆಲ್ಗೆ 86.70 ಡಾಲರ್ನಂತೆ ವಹಿವಾಟು ನಡೆಸುತ್ತಿದೆ. ಆದರೆ ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್ಗೆ 83.03 ಡಾಲರ್ನಂತೆ ವಹಿವಾಟು ನಡೆಸುತ್ತಿದೆ. ಭಾರತದ ಪೆಟ್ರೋಲ್, ಡೀಸೆಲ್ ದರಗಳ ಬಗ್ಗೆ ಮಾತನಾಡುವುದಾದರೆ ಸರ್ಕಾರಿ ತೈಲ ಕಂಪನಿಗಳು ಜುಲೈ 4, ಗುರುವಾರದ ಬೆಲೆಯನ್ನು ಬಿಡುಗಡೆ ಮಾಡಿದ್ದು, ಎಲ್ಲೆಡೆ ಇಂಧನ ದರ ಸ್ಥಿರವಾಗಿದೆ.
ಸರ್ಕಾರಿ ತೈಲ ಕಂಪನಿಗಳು ಪ್ರತಿ ದಿನವೂ ಪೆಟ್ರೋಲ್(Petrol), ಡೀಸೆಲ್(Diesel) ಬೆಲೆಗಳನ್ನು ನವೀಕರಿಸುತ್ತವೆ. ಜುಲೈ 4ರ ಬೆಲೆಯಲ್ಲಿ ಹೆಚ್ಚಿನ ಬದಲಾವಣೆಗಳು ಆಗಿಲ್ಲ. ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯಲ್ಲಿ ಏರಿಳಿತ ಮುಂದುವರೆದಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಂತಾದ ಕಂಪನಿಗಳು ತಮ್ಮ ವೆಬ್‌ಸೈಟ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ. ಮನೆಯಲ್ಲಿ ಕುಳಿತು ತೈಲ ಬೆಲೆಯನ್ನು ಪರಿಶೀಲಿಸಬಹುದು. ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು.
ಇದಕ್ಕಾಗಿ ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಬೇಕು ಅಥವಾ ಎಸ್‌ಎಂಎಸ್ ಕಳುಹಿಸಬೇಕು. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು RSP ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.
ಮತ್ತಷ್ಟು ಓದಿ: Petrol Diesel Price on July 03: ಬೆಂಗಳೂರು, ಚೆನ್ನೈ ಸೇರಿದಂತೆ ದೇಶದ ಬಹುತೇಕ ಕಡೆ ಇಂಧನ ಬೆಲೆ ಸ್ಥಿರ
ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ., ಡೀಸೆಲ್ 87.62 ರೂ., ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ, ಡೀಸೆಲ್ ಬೆಲೆ 92.15 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 103.94 ರೂ., ಡೀಸೆಲ್ ಬೆಲೆ 90.76 ರೂ., ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.75 ರೂ., ಡೀಸೆಲ್ ಬೆಲೆ 92.34 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯನ್ನು ಪರಿಶೀಲಿಸಿದ ಬಳಿಕ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ