AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Today: ಸತತ 13ನೇ ದಿನದಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಯಾವ ಯಾವ ನಗರಗಳಲ್ಲಿ ದರ ಎಷ್ಟಿದೆ?

Petrol Price | Diesel Price Today, 19-04-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. ಇಂದು (ಏ.19) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Petrol Diesel Price Today: ಸತತ 13ನೇ ದಿನದಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಯಾವ ಯಾವ ನಗರಗಳಲ್ಲಿ ದರ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 19, 2022 | 9:30 AM

Share

Petrol Diesel Price Today | ದೆಹಲಿ: ಭಾರತದಲ್ಲಿ ಕಳೆದ ಹದಿಮೂರು ದಿನಗಳಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಾಣದೆ ಸ್ಥಿರವಾಗಿದೆ. ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿತ್ತು. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇತ್ತು. ಪರಿಣಾಮವಾಗಿ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿತ್ತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗುತ್ತಿತ್ತು. ಆದರೆ ಕಳೆದ ಹದಿಮೂರು ದಿನದಿಂದ ದರ ಸ್ಥಿರವಾಗಿದೆ. ಇಂದು (ಏಪ್ರಿಲ್ 19, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ