Petrol Diesel Price Today: ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಬೆಂಗಳೂರಿನಲ್ಲಿ ಇಂಧನ ದರ ಹೀಗಿದೆ

Petrol Price | Diesel Price Today, 20-04-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

Petrol Diesel Price Today: ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಬೆಂಗಳೂರಿನಲ್ಲಿ ಇಂಧನ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
Edited By: sandhya thejappa

Updated on: Apr 20, 2022 | 9:26 AM

Petrol Diesel Price Today | ಪೆಟ್ರೋಲ್ (Petrol), ಡೀಸೆಲ್ (Diesel) ಬೆಲೆ ಏರಿಕೆಯಾದರೆ ಜನರಿಗೆ ತಲೆ ನೋವು ಶುರುವಾಗುತ್ತದೆ. ಏಕೆಂದರೆ ದಿನನಿತ್ಯ ಜೀವನಕ್ಕೆ ವಾಹನಗಳ ಬಳಕೆ ಅನಿವಾರ್ಯ ಆಗಿದೆ. ಹೀಗಾಗಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾದರೆ ಜನ ಸಾಮಾನ್ಯರಿಗೆ ಹೊಡೆತ ಬೀಳುತ್ತದೆ. ಈಗಾಗಲೇ ದೇಶದಲ್ಲಿ ಇಂಧನ ಬೆಲೆ ಹೆಚ್ಚಾಗಿದೆ. ಆದರೆ 14 ದಿನಗಳಿಂದ ಹೆಚ್ಚಾದ ಬೆಲೆ ಸ್ಥಿರವಾಗಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇತ್ತು. ಆದರೆ ಇಂದು(ಏಪ್ರಿಲ್ 20) ಕೂಡಾ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಕಂಡುಬಂದಿಲ್ಲ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

ನಟಿ ಆಗ್ಬೇಕು ಅಂತ ಮನೆ ಬಿಟ್ಟು ಓಡಿಬಂದಿದ್ದ ಯುವತಿ: ಇಂದು ಏನಾಗಿದ್ದಾರೆ ನೋಡಿ; ಇದು ಶಾಲಿನಿ ಸಿನಿಜರ್ನಿ

ದೇವರಾಜ ಮಾರುಕಟ್ಟೆ ಹೊಸದಾಗಿ ನಿರ್ಮಾಣಕ್ಕೆ ವಿರೋಧಿಸಿ ಮೈಸೂರಿನ ಚಿಕ್ಕಗಡಿಯಾರ ಬಳಿ ಇಂದು ಪ್ರತಿಭಟನೆ

Published On - 9:24 am, Wed, 20 April 22

TV9 Web

TV9 Kannada

Read More
Loading...
Unable to load recommendations.
Follow Us