AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ

Petrol Price | Diesel Price Today, 05-05-2022: ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ.

Petrol Price Today: ಇಂದು ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 05, 2022 | 9:23 AM

Share

Petrol Diesel Price Today: ದೇಶದಲ್ಲಿ ಕಳೆದ 29 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಆದರೆ ಕಳೆದ 29 ದಿನಗಳಿಂದ ದರ ಸ್ಥಿರವಾಗಿದೆ. ಇಂದು (ಗುರುವಾರ, ಮೇ 05, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ
Image
ಬೆಂಗಳೂರು- ಚೆನ್ನೈ ಪಂದ್ಯದ ವೇಳೆ ವಿಶೇಷ ಕ್ಷಣ; ಆರ್​ಸಿಬಿ ಜೆರ್ಸಿ ತೊಟ್ಟ ಗೆಳೆಯನಿಗೆ ಪ್ರೇಮ ನಿವೇದನೆ ಮಾಡಿದ ಯುವತಿ- ವಿಡಿಯೋ ಇಲ್ಲಿದೆ
Image
Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ ಹೆಚ್ಚಳ
Image
ರೆಪೊ ದರ ಹೆಚ್ಚಳದ ಅಚ್ಚರಿಯ ನಿರ್ಧಾರ ಪ್ರಕಟಿಸಿದ ಆರ್​ಬಿಐ: ಸೆನ್ಸೆಕ್ಸ್ 1306, ನಿಫ್ಟಿ 391 ಅಂಶಗಳಷ್ಟು ಕುಸಿತ
Image
LIC IPO: ಎಲ್​ಐಸಿ ಐಪಿಒ ಇಂದಿನಿಂದ ಆರಂಭ: ನಿಮಗೆ ತಿಳಿದಿರಲೇ ಬೇಕು ಈ ಸಂಗತಿಗಳು

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್