AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಕಳೆದ 25 ದಿನಗಳಿಂದ ಇಂಧನ ದರ ಸ್ಥಿರ; ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

Petrol Price | Diesel Price Today, 01-05-2022: ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ.

Petrol Price Today: ಕಳೆದ 25 ದಿನಗಳಿಂದ ಇಂಧನ ದರ ಸ್ಥಿರ; ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 01, 2022 | 9:14 AM

Share

Petrol Diesel Price Today: ದೇಶದಲ್ಲಿ ಕಳೆದ 25 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಆದರೆ ಕಳೆದ 25 ದಿನಗಳಿಂದ ದರ ಸ್ಥಿರವಾಗಿದೆ. ಇಂದು (ಭಾನುವಾರ, ಮೇ 01, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.71ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Follow Us
TV9 Web
TV9 Web

TV9 Kannada

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ