AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದಿನ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ನೋಡಿ

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

Petrol Price Today: ಇಂದಿನ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ನೋಡಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 02, 2022 | 8:41 AM

Share

ಕಿಲೋಮೀಟರ್ ಗಟ್ಟಲೆ ನಡೆದು ಹೋಗುವ ಕಾಲವಿತ್ತು. ಆದರೆ ಈಗ ಹಾಗಲ್ಲ. ಪಕ್ಕದ ಅಂಗಡಿಗೆ ಹೋಗಬೇಕು ಅಂದರೂ ವಾಹನಗಳ ಮೇಲೆಯೇ ಹೋಗುವ ಅಭ್ಯಾಸವನ್ನು ರೂಢಿಸಿಕೊಂಡಿದ್ದಾರೆ. ಜನರು ವಾಹನಗಳಿಗೆ ಹೆಚ್ಚು ಅವಲಂಬಿತವಾಗಿರುವುದರಿಂದ ಇಂಧನ (Fuel) ದರ ಎಷ್ಟೇ ಹೆಚ್ಚಾದರೂ ಖರೀದಿಸುವ ಅನಿವಾರ್ಯ ಇದೆ. ದೇಶದಲ್ಲಿ ಕಳೆದ 26 ದಿನಗಳಿಂದ ಪೆಟ್ರೋಲ್ (Petrol), ಡೀಸೆಲ್ (Diesel) ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಆದರೆ ಕಳೆದ 26 ದಿನಗಳಿಂದ ದರ ಸ್ಥಿರವಾಗಿದೆ.

ಇಂದು (ಸೋಮವಾರ, ಮೇ 02, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.71ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ದರ ಹೀಗಿದೆ: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

ಬಾಗಲಕೋಟೆಯಲ್ಲಿ ಆಸ್ತಿ ವಿಚಾರಕ್ಕೆ ಸಹೋದರಿ ಮೇಲೆ ಸಹೋದರರಿಂದ ಹಲ್ಲೆ; ಶಿವಮೊಗ್ಗದಲ್ಲಿ ವೃದ್ಧೆ ತಲೆ ಒಡೆದಿದ್ದ ಆರೋಪಿ ಆತ್ಮಹತ್ಯೆಗೆ ಶರಣು

ಅಕ್ಷಯ ತೃತೀಯಕ್ಕೆ ಮತ್ತೊಂದು ಧರ್ಮ ಯುದ್ಧ; ಮುಸ್ಲಿಮರ ಅಂಗಡಿಗಳಲ್ಲಿ ಬಂಗಾರ ಖರಿದಿಸ್ಬೇಡಿ ಎಂದ ಪ್ರಮೋದ್ ಮುತಾಲಿಕ್

Published On - 8:39 am, Mon, 2 May 22

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ