Petrol Price on August 6: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 6ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಕಾಣುತ್ತಿದೆ. ಇಂದು, ಅಂತಾರಾಷ್ಟ್ರೀಯ ಮಾನದಂಡ ಬ್ರೆಂಟ್ ಕಚ್ಚಾ ಪ್ರತಿ ಬ್ಯಾರೆಲ್‌ಗೆ 86.24ಡಾಲರ್​​ನಲ್ಲಿ ವಹಿವಾಟು ನಡೆಸುತ್ತಿದೆ, ಇದು 1.29 ಪ್ರತಿಶತದಷ್ಟು ಏರಿಕೆಯಾಗಿದೆ.

Petrol Price on August 6: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 6ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್
Image Credit source: Telegraph India

Updated on: Aug 06, 2023 | 7:44 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಕಾಣುತ್ತಿದೆ. ಇಂದು, ಅಂತಾರಾಷ್ಟ್ರೀಯ ಮಾನದಂಡ ಬ್ರೆಂಟ್ ಕಚ್ಚಾ ಪ್ರತಿ ಬ್ಯಾರೆಲ್‌ಗೆ 86.24ಡಾಲರ್​​ನಲ್ಲಿ ವಹಿವಾಟು ನಡೆಸುತ್ತಿದೆ, ಇದು 1.29 ಪ್ರತಿಶತದಷ್ಟು ಏರಿಕೆಯಾಗಿದೆ. ಮತ್ತೊಂದೆಡೆ, WTI ಕಚ್ಚಾ ಬೆಲೆಯಲ್ಲಿ 1.56 ಶೇಕಡಾ ಜಿಗಿತದ ನಂತರ, ಪ್ರತಿ ಬ್ಯಾರೆಲ್‌ಗೆ 82.82 ಡಾಲರ್​ಇದೆ. ಇದೇ ವೇಳೆ ತೈಲ ಕಂಪನಿಗಳು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆಗಸ್ಟ್​ 6ರಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ತೈಲ ಕಂಪನಿಗಳು 6 ಆಗಸ್ಟ್ 2023 ರಂದು ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸ್ಥಿರವಾಗಿರಿಸಿಕೊಂಡಿವೆ.

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು
ಭಾನುವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ 89.62 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪೆಟ್ರೋಲ್ ಲೀಟರ್‌ಗೆ 106.31 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 94.27 ರೂ.ಗೆ ಲಭ್ಯವಿದೆ. ಇದಲ್ಲದೇ, ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.24 ರೂ. ಅದೇ ಸಮಯದಲ್ಲಿ, ಕೋಲ್ಕತ್ತಾದಲ್ಲಿ ಶನಿವಾರ ಪೆಟ್ರೋಲ್ ಲೀಟರ್‌ಗೆ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ.ಗೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ, ಡೀಸೆಲ್ 87.89 ರೂ ಇದೆ.

ಮತ್ತಷ್ಟು ಓದಿ: Petrol Price on August 4: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 4ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಇತರ ನಗರಗಳಲ್ಲಿನ ಬೆಲೆಗಳು

ಭಾನುವಾರ ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ 89.96 ರೂ.ಗೆ ಮಾರಾಟವಾಗುತ್ತಿದೆ. ಗುರುಗ್ರಾಮದಲ್ಲಿ ಲೀಟರ್‌ಗೆ ಪೆಟ್ರೋಲ್ 97.18 ರೂ ಮತ್ತು ಡೀಸೆಲ್ ಲೀಟರ್‌ಗೆ 90.05 ರೂ.ಗೆ ಲಭ್ಯವಿದೆ. ಇದಲ್ಲದೇ ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ರೂ ಮತ್ತು ಡೀಸೆಲ್ 84.26 ರೂ.ಗೆ ಲಭ್ಯವಿದೆ. ಆದರೆ, ಲಕ್ನೋದಲ್ಲಿ ಪೆಟ್ರೋಲ್ ಬೆಲೆ 96.57 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.76 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

 SMS ಮೂಲಕ ಇತ್ತೀಚಿನ ದರವನ್ನು ತಿಳಿಯಿರಿ

ಪೆಟ್ರೋಲ್-ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ ಮತ್ತು ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ. ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು (ಪ್ರತಿದಿನ ಡೀಸೆಲ್ ಪೆಟ್ರೋಲ್ ಬೆಲೆಯನ್ನು ಹೇಗೆ ಪರಿಶೀಲಿಸುವುದು). ಇಂಡಿಯನ್ ಆಯಿಲ್‌ನ ಗ್ರಾಹಕರು RSP ಸ್ಪೇಸ್ ಪೆಟ್ರೋಲ್ ಪಂಪ್ ಕೋಡ್ ಅನ್ನು 9224992249 ಗೆ ಸಂದೇಶ ಕಳುಹಿಸುವ ಮೂಲಕ ಮತ್ತು BPCL ನ ಗ್ರಾಹಕರು RSP ಗೆ 9223112222 ಗೆ ಸಂದೇಶ ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಆದರೆ, HPCL ನ ಗ್ರಾಹಕರು HPPrice ಅನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿಯಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us