AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on July 9: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 9ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಜಾಗತಿಕ ಮಾರುಕಟ್ಟೆಯ ಸೂಚನೆಗಳನ್ನು ಅನುಸರಿಸಿ ಭಾರತೀಯ ತೈಲ ಕಂಪನಿಗಳು ಭಾನುವಾರ(ಜುಲೈ 9)ದ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರವನ್ನು ಬಿಡುಗಡೆ ಮಾಡಿವೆ.

Petrol Price on July 9: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 9ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: ReAgent Chemical Service
ನಯನಾ ರಾಜೀವ್
|

Updated on: Jul 09, 2023 | 7:44 AM

Share

ಜಾಗತಿಕ ಮಾರುಕಟ್ಟೆಯ ಸೂಚನೆಗಳನ್ನು ಅನುಸರಿಸಿ ಭಾರತೀಯ ತೈಲ ಕಂಪನಿಗಳು ಭಾನುವಾರ(ಜುಲೈ 9)ದ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರವನ್ನು ಬಿಡುಗಡೆ ಮಾಡಿವೆ. ಹಣದುಬ್ಬರದ ಹಿನ್ನೆಲೆಯಲ್ಲಿ ಕಂಪನಿಗಳು ಶುಕ್ರವಾರ ಇಂಧನ ದರವನ್ನು ಯಥಾಸ್ಥಿತಿಯಲ್ಲಿಟ್ಟಿವೆ. ಭಾನುವಾರ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಇದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 94.27 ರೂ. ಇತರ ನಗರಗಳಲ್ಲಿ ಪೆಟ್ರೋಲ್ ದರ 106.03 ರೂ ಮತ್ತು ಡೀಸೆಲ್ ಬೆಲೆ ಕೋಲ್ಕತ್ತಾದಲ್ಲಿ 92.76 ರೂ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ 94.24 ರೂ.ಗೆ ಮಾರಾಟವಾಗುತ್ತಿದೆ.

ಮತ್ತಷ್ಟು ಓದಿ: Petrol Price on July 6: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 6ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ನೋಯ್ಡಾದಲ್ಲಿ ಪೆಟ್ರೋಲ್ ಲೀಟರ್‌ಗೆ 96.79 ರೂ ಮತ್ತು ಡೀಸೆಲ್ ಲೀಟರ್‌ಗೆ 89.96 ರೂ.ಗೆ ಮಾರಾಟವಾಗುತ್ತಿದೆ. ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 97.18 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 90.05 ರೂ. ಆಗ್ರಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.20 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.37 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ 

ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ದರ ಲೀಟರ್ ಗೆ 84.26 ರೂ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.57 ಮತ್ತು ಡೀಸೆಲ್ 89.76 ರೂ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 108.48 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 93.72 ರೂ. ಪಾಟ್ನಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 107.24 ಮತ್ತು ಡೀಸೆಲ್ ಲೀಟರ್‌ಗೆ 94.04 ಆಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 101.94 ರೂ ಮತ್ತು ಡೀಸೆಲ್ ಬೆಲೆ 87.89 ರೂ. ಇದೆ.

ಹೊಸ ದರಗಳು ಬೆಳಗ್ಗೆ 6 ಗಂಟೆಗೆ ಬದಲಾಗುತ್ತದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ ಮತ್ತು ಬೆಳಿಗ್ಗೆ 6 ಗಂಟೆಗೆ ನವೀಕರಿಸಲ್ಪಡುತ್ತವೆ ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ದರವನ್ನು ಸಹ ನೀವು ತಿಳಿದುಕೊಳ್ಳಬಹುದು.

ಇಂಡಿಯನ್ ಆಯಿಲ್ ಗ್ರಾಹಕರು ಆರ್‌ಎಸ್‌ಪಿ ಜೊತೆಗೆ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಮತ್ತು ಬಿಪಿಸಿಎಲ್ ಗ್ರಾಹಕರು 9223112222 ಸಂಖ್ಯೆಗೆ ಆರ್‌ಎಸ್‌ಪಿ ಎಂದು ಬರೆಯುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ ಎಚ್‌ಪಿಸಿಎಲ್ ಗ್ರಾಹಕರು ಎಚ್‌ಪಿ ಬೆಲೆಯನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ಕಂಡುಹಿಡಿಯಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ