AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

Petrol Diesel Price Today, 30-12-2021: ಜಾರ್ಖಂಡ್ ಬುಧವಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ ₹ 25 ರೂ ಕಡಿತವನ್ನು ಘೋಷಿಸಿದೆ. ಇದು ಜನವರಿ 26ರಿಂದ ಜಾರಿಗೆ ಬರಲಿದೆ.

Petrol Rate: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 30, 2021 | 7:58 AM

Share

Petrol Diesel Price Today| ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ಗುರುವಾರ (ಡಿಸೆಂಬರ್​ 30) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಇಂದು ಕೂಡ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4ರಿಂದ ಇಂಧನ ದರ ಸ್ಥಿರವಾಗಿದೆ. ಜಾರ್ಖಂಡ್​ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ ₹ 25 ಕಡಿತಗೊಳಿಸುವುದಾಗಿ ಬುಧವಾರ ಘೋಷಿಸಿದೆ. ಇದು ಜನವರಿ 26ರಿಂದ ಜಾರಿಗೆ ಬರಲಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ (Diesel Price) ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಪ್ರಮುಖ ನಗರಗಳಲ್ಲಿ ಇಂಧನ ದರ ಹೀಗಿದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.50 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:56 am, Thu, 30 December 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ