AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

Petrol price in Bengaluru | Diesel Price on 30.05.2022: ಇಳಿಕೆಯಾಗಿರುವ ಇಂಧನ ದರ ಸದ್ಯ ಸ್ಥಿರವಾಗಿದೆ. ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್​ಗೆ 87.89 ರೂ ದಾಖಲಾಗಿದೆ.

Petrol Price Today: ಇಂದು ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಪ್ರಾತಿನಿಧಿಕ ಚಿತ್ರ
sandhya thejappa
sandhya thejappa|

Updated on:May 30, 2022 | 9:26 AM

Share

ದೆಹಲಿ: ಇಂಧನ ದರ (Fuel Rate) ಏರಿಕೆಯಿಂದ ದೇಶದ ಜನರು ಕಂಗಾಲಾಗಿದ್ದರು. ಕೇಂದ್ರ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿಶಾಪ ಹಾಕಿದ್ದರು. ಇದಕೆಲ್ಲಾ ಕಾರಣ ರಷ್ಯಾ- ಉಕ್ರೇನ್ ನಡುವಿನ ಯುದ್ಧ. ಸುಮಾರು ಒಂದು ತಿಂಗಳಿಗೂ ಹೆಚ್ಚು ದಿನ ಏರಿಕೆಯಾಗಿದ್ದ ಪೆಟ್ರೋಲ್ (Petrol), ಡೀಸೆಲ್ (Diesel) ಬೆಲೆ ಸ್ಥಿರವಾಗಿತ್ತು. ಆದರೆ ಮೇ 21ಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ಜನರಿಗೆ ಸಿಹಿ ಸುದ್ದಿ ನೀಡಿದ್ದರು. ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರ್​ಗೆ 8 ಮತ್ತು ಡೀಸೆಲ್​ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು.

ಇಳಿಕೆಯಾಗಿರುವ ಇಂಧನ ದರ ಸದ್ಯ ಸ್ಥಿರವಾಗಿದೆ. ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್​ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್​ಗೆ ರೂ 89.62 ದಾಖಲಾಗಿದೆ.

ಇದನ್ನೂ ಓದಿ: IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿನ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ
Image
ಕಬ್ಬಿನ ಗದ್ದೆಗೆ ತೆರಳಿದ್ದ ರೈತನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ರೈತ ಪಾರು
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿನ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
PM CARES: ಕೊವಿಡ್ ಸಂತ್ರಸ್ತ ಮಕ್ಕಳಿಗೆ ಇಂದು ಪಿಎಂ ಕೇರ್ಸ್ ನಿಧಿನಿಂದ ಹಲವು ಸೌಲಭ್ಯ ಬಿಡುಗಡೆ
Image
ದಾಸ್ತಾನು ಮಳಿಗೆಗಳ ಮೇಲೆ ಕೃಷಿ ಅಧಿಕಾರಿಗಳ ದಾಳಿ, 30 ಲಕ್ಷ ಮೌಲ್ಯದ ನಕಲಿ ಬಿತ್ತನೆ ಬೀಜಗಳು ಜಪ್ತಿ!

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:25 am, Mon, 30 May 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು