ದೆಹಲಿ: ಇಂಧನ ದರ (Fuel Rate) ಏರಿಕೆಯಿಂದ ದೇಶದ ಜನರು ಕಂಗಾಲಾಗಿದ್ದರು. ಕೇಂದ್ರ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿಶಾಪ ಹಾಕಿದ್ದರು. ಇದಕೆಲ್ಲಾ ಕಾರಣ ರಷ್ಯಾ- ಉಕ್ರೇನ್ ನಡುವಿನ ಯುದ್ಧ. ಸುಮಾರು ಒಂದು ತಿಂಗಳಿಗೂ ಹೆಚ್ಚು ದಿನ ಏರಿಕೆಯಾಗಿದ್ದ ಪೆಟ್ರೋಲ್ (Petrol), ಡೀಸೆಲ್ (Diesel) ಬೆಲೆ ಸ್ಥಿರವಾಗಿತ್ತು. ಆದರೆ ಮೇ 21ಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ಜನರಿಗೆ ಸಿಹಿ ಸುದ್ದಿ ನೀಡಿದ್ದರು. ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರ್ಗೆ 8 ಮತ್ತು ಡೀಸೆಲ್ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು.
ಇಳಿಕೆಯಾಗಿರುವ ಇಂಧನ ದರ ಸದ್ಯ ಸ್ಥಿರವಾಗಿದೆ. ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್ಗೆ ರೂ 89.62 ದಾಖಲಾಗಿದೆ.
ಇದನ್ನೂ ಓದಿ: IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ನಲ್ಲಿನ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:25 am, Mon, 30 May 22