AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on December 21: ಇಂದಿನ ಪೆಟ್ರೋಲ್‌, ಡೀಸೆಲ್‌ ದರ ಹೀಗಿದೆ

ಪ್ರತಿ ನಗರದಲ್ಲಿ ಪೆಟ್ರೋಲ್ ದರಗಳು ವಿಭಿನ್ನವಾಗಿರಲು ಕಾರಣ ತೆರಿಗೆ. ಅದೇ ಸಮಯದಲ್ಲಿ, ರಾಜ್ಯ ಸರ್ಕಾರಗಳು ವಿವಿಧ ರಾಜ್ಯಗಳಲ್ಲಿ ವಿವಿಧ ದರಗಳಲ್ಲಿ ತೆರಿಗೆಗಳನ್ನು ಸಂಗ್ರಹಿಸುತ್ತವೆ. ಅದೇ ರೀತಿ ಮುನ್ಸಿಪಲ್ ಕಾರ್ಪೊರೇಶನ್‌ಗಳು ಮತ್ತು ಪುರಸಭೆಗಳು ಸಹ ಪ್ರತಿ ನಗರಕ್ಕೆ ಅನುಗುಣವಾಗಿ ತೆರಿಗೆಗಳನ್ನು ಹೊಂದಿವೆ.

Petrol Diesel Price on December 21: ಇಂದಿನ ಪೆಟ್ರೋಲ್‌, ಡೀಸೆಲ್‌ ದರ ಹೀಗಿದೆ
ಪೆಟ್ರೋಲ್Image Credit source: kalinga TV
ಆಯೇಷಾ ಬಾನು
|

Updated on: Dec 21, 2023 | 6:38 AM

Share

2023 ಡಿಸೆಂಬರ್ 21ರ ಪೆಟ್ರೋಲ್-ಡೀಸೆಲ್ ದರ: ಡಿಸೆಂಬರ್ 21ನೇ ಗುರುವಾರದಂದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗಿದೆ (Petrol Diesel Price). ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು ಅನೇಕ ರಾಜ್ಯಗಳಲ್ಲಿ ದರ ಬದಲಾವಣೆಯಾಗಿಲ್ಲ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಯಾವ ನಗರದಲ್ಲಿ ಇಂಧನದ ಬೆಲೆ ಎಷ್ಟಿದೆ ಇಲ್ಲಿ ತಿಳಿಯಿರಿ.

ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ?

  • ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಇದೆ.
  • ಲಕ್ನೋ ಪೆಟ್ರೋಲ್ 96.36 ರೂ. ಮತ್ತು ಡೀಸೆಲ್ 89.76 ರೂ. ಇದೆ.
  • ನೋಯ್ಡಾ ಪೆಟ್ರೋಲ್ 96.59 ರೂ. ಮತ್ತು ಡೀಸೆಲ್ 90.14 ರೂ.ಇದೆ.
  • ಜೈಪುರ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ. ಇದೆ.
  • ಗಾಜಿಯಾಬಾದ್ ಪೆಟ್ರೋಲ್ 96.44 ರೂ. ಮತ್ತು ಡೀಸೆಲ್ 89.75ರೂ. ಇದೆ
  • ಪಾಟ್ನಾ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಇದೆ.
  • ಬೆಂಗಳೂರು ಪೆಟ್ರೋಲ್ 101.94 ರೂ ಮತ್ತು ಡೀಸೆಲ್ 87.89 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ನಗರದಲ್ಲಿ ವಿಭಿನ್ನ ದರಗಳು ಏಕೆ?

ಪ್ರತಿ ನಗರದಲ್ಲಿ ಪೆಟ್ರೋಲ್ ದರಗಳು ವಿಭಿನ್ನವಾಗಿರಲು ಕಾರಣ ತೆರಿಗೆ. ಅದೇ ಸಮಯದಲ್ಲಿ, ರಾಜ್ಯ ಸರ್ಕಾರಗಳು ವಿವಿಧ ರಾಜ್ಯಗಳಲ್ಲಿ ವಿವಿಧ ದರಗಳಲ್ಲಿ ತೆರಿಗೆಗಳನ್ನು ಸಂಗ್ರಹಿಸುತ್ತವೆ. ಅದೇ ರೀತಿ ಮುನ್ಸಿಪಲ್ ಕಾರ್ಪೊರೇಶನ್‌ಗಳು ಮತ್ತು ಪುರಸಭೆಗಳು ಸಹ ಪ್ರತಿ ನಗರಕ್ಕೆ ಅನುಗುಣವಾಗಿ ತೆರಿಗೆಗಳನ್ನು ಹೊಂದಿವೆ. ಇವು ನಗರಕ್ಕೆ ಅನುಗುಣವಾಗಿ ಬದಲಾಗುತ್ತವೆ, ಇದನ್ನು ಸ್ಥಳೀಯ ಸಂಸ್ಥೆ ತೆರಿಗೆ ಎಂದೂ ಕರೆಯುತ್ತಾರೆ. ಪ್ರತಿ ಮುನ್ಸಿಪಲ್ ಕಾರ್ಪೊರೇಷನ್ ಆಧಾರದ ಮೇಲೆ ವಿಭಿನ್ನ ತೆರಿಗೆಗಳನ್ನು ವಿಧಿಸಲಾಗುತ್ತದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಬದಲಾಗುವುದೇಕೆ?

ಪ್ರತಿದಿನ ಬೆಳಿಗ್ಗೆ ಇಂಧನ ಬೆಲೆಗಳು ಬದಲಾಗುತ್ತವೆ. ವಾಸ್ತವವಾಗಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿದೇಶಿ ವಿನಿಮಯ ದರಗಳೊಂದಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ