ವಾಹನ ಸವಾರರಿಗೆ ಗುಡ್ನ್ಯೂಸ್: ಪೆಟ್ರೋಲ್-ಡೀಸೆಲ್ ದರ ಇಳಿಕೆ, ಎಷ್ಟು ಗೊತ್ತಾ?
Petrol and Diesel price: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ವಾಹನಸ ಸವಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಹಲವು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ. ಹಾಗಾದ್ರೆ, ಪೆಟ್ರೀಲ್ ಎಷ್ಟು? ಡೀಸೆಲ್ ಬೆಲೆ ಎಷ್ಟು ಇಳಿಕೆಯಾಗಿದೆ? ಯಾವಾಗಿನಿಂದ ಜಾರಿ ಎನ್ನುವ ವಿವರ ಈ ಕೆಳಗಿನಂತಿದೆ.
ನವದೆಹಲಿ, (ಮಾರ್ಚ್ 14): ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಪೆಟ್ರೋಲ್, ಡೀಸೆಲ್ (Petrol and Diesel) ದರ ಇಳಿಕೆಯಾಗಿದೆ. ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ 2 ರೂಪಾಯಿ ಇಳಿಕೆಯಾಗಿದ್ದು, ಪರಿಷ್ಕೃತ ದರ ನಾಳೆ ಅಂದರೆ ಮಾರ್ಚ್ 15ರ ಬೆಳಗ್ಗೆ 6ರಿಂದ ಜಾರಿಗೆ ಬರಲಿದೆ ಎಂದು ವರದಿಯಾಗಿದೆ. ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿತ ಮಾಡಿದ್ದರು. ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸಲಾಗಿದೆ. ಇದರೊಂದಿಗೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ.
Petrol and Diesel prices reduced by Rs 2 per litre: Sources pic.twitter.com/EsKRPQLp4i
— ANI (@ANI) March 14, 2024
ಬೆಂಗಳೂರಿನಲ್ಲಿ ಇಂದು (ಮಾರ್ಚ್ 14) ಪ್ರತಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಡೀಸೆಲ್ ಬೆಲೆ 87.89 ರೂಪಾಯಿ ಇದ್ದು. ನಾಳೆ(ಮಾರ್ಚ್ 15) ಬೆಳಗ್ಗೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 2 ರೂಪಾಯಿ ಇಳಿಕೆಯಾಗಲಿದೆ. ಪೆಟ್ರೋಲ್ ಬೆಲೆ 99.94 ರೂಪಾಯಿ ಹಾಗೂ ಡೀಸೆಲ್ ಬೆಲೆ 85.89 ರೂಪಾಯಿಗೆ ಇಳಿಕೆ ಆಗಲಿದೆ.
ಇದನ್ನೂ ಓದಿ: WPI Inflation: ಹೋಲ್ಸೇಲ್ ಹಣದುಬ್ಬರ ಶೇ. 0.27ರಿಂದ ಶೇ. 0.20ಕ್ಕೆ ಇಳಿಕೆ
ಇತ್ತೀಚೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿತ್ತು. ಅಲ್ಲದೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ಹಾಗೂ ಸಿಎನ್‌ಜಿ ಬೆಲೆಯಲ್ಲಿ ಕಡಿತವಾಗಿತ್ತು. ಇದೀಗ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನೂ ಕಡಿತಗೊಳಿಸಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಮತ್ತು ಅನಿಲ ಬೆಲೆಗಳು ಮೃದುವಾಗುತ್ತಿರುವ ಪರಿಣಾಮವು ದೇಶೀಯ ಚಿಲ್ಲರೆ ಮಾರುಕಟ್ಟೆಯ ಮೇಲೂ ಗೋಚರಿಸುತ್ತದೆ. ಗುರುವಾರ ಬೆಳಗ್ಗೆ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಸಿಎನ್‌ಜಿ ಅಗ್ಗವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಹ ಇಳಿಮುಖವಾಗಿವೆ. ಇಂದು ಯುಪಿ ಮತ್ತು ಬಿಹಾರದ ಹಲವು ನಗರಗಳಲ್ಲೂ ತೈಲ ಬೆಲೆ ಕುಸಿದಿದೆ. ಏತನ್ಮಧ್ಯೆ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಮತ್ತೆ 83 ಡಾಲರ್‌ಗಿಂತ ಕಡಿಮೆಯಾಗಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.
ದೆಹಲಿ ಪೆಟ್ರೋಲ್ ಬೆಲೆ: ಮಾರ್ಚ್ 14 ರ ಹೊತ್ತಿಗೆ, ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.72 ರೂ. ಡೀಸೆಲ್ ಬೆಲೆ ಲೀಟರ್‌ಗೆ 89.62 ರೂ.. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ., ಡೀಸೆಲ್ 87.89 ರೂ. ಇದೆ. ತಿರುವನಂತಪುರಂನಲ್ಲಿ ಪೆಟ್ರೋಲ್ 109.73 ರೂ. ಡೀಸೆಲ್ 98.53 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ., ಡೀಸೆಲ್ 94.24 ರೂ. ಇದೆ.
ಕಚ್ಚಾ ತೈಲ ಬೆಲೆ: ಪೆಟ್ರೋಲ್ ಮತ್ತು ಡೀಸೆಲ್ ಉತ್ಪಾದನೆಗೆ ಪ್ರಾಥಮಿಕ ಕಚ್ಚಾ ವಸ್ತು ಕಚ್ಚಾ ತೈಲ, ಮತ್ತು ಅದರ ಬೆಲೆ ನೇರವಾಗಿ ಈ ಇಂಧನಗಳ ಅಂತಿಮ ವೆಚ್ಚದ ಮೇಲೆ ಪ್ರಭಾವ ಬೀರುತ್ತದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ವಿವಿಧ ತೆರಿಗೆಗಳನ್ನು ವಿಧಿಸುತ್ತವೆ. ಈ ತೆರಿಗೆಗಳು ರಾಜ್ಯಗಳಾದ್ಯಂತ ಭಿನ್ನವಾಗಿರಬಹುದು, ಪೆಟ್ರೋಲ್ ಮತ್ತು ಡೀಸೆಲ್‌ನ ಅಂತಿಮ ಬೆಲೆಗಳ ಮೇಲೆ ಗಮನಾರ್ಹ ಪ್ರಭಾವವನ್ನು ಬೀರುತ್ತವೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 9:42 pm, Thu, 14 March 24