Petrol Diesel Price on February 19: ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ದರ ಇಳಿಕೆ

|

Updated on: Feb 19, 2024 | 7:16 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗಿದೆ. ಸೋಮವಾರ ಬೆಳಗ್ಗೆ ಸುಮಾರು 7 ಗಂಟೆಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 79.19 ಡಾಲರ್‌ಗೆ ಮಾರಾಟ ಮಾಡಲಾಗುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ.

Petrol Diesel Price on February 19: ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ದರ ಇಳಿಕೆ
ಪೆಟ್ರೋಲ್
Image Credit source: Zee Business
Follow us on

ತೈಲ ಕಂಪನಿಗಳು ಫೆಬ್ರವರಿ 19ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿವೆ. ಸೋಮವಾರವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಕೊನೆಯ ಬದಲಾವಣೆಯು 22 ಮೇ 2022 ರಂದು ನಡೆದಿತ್ತು ಮತ್ತು ಅಂದಿನಿಂದ ಯಾವುದೇ ಬದಲಾವಣೆಯಾಗಿಲ್ಲ ಆದರೆ, ಲೋಕಸಭೆ ಚುನಾವಣೆಗೂ ಮುನ್ನ ತೈಲ ಬೆಲೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಬಹುದು ಎನ್ನಲಾಗಿದೆ.

ಯಾವ್ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ದೆಹಲಿಯಲ್ಲಿ ಪೆಟ್ರೋಲ್ 96.72ರೂ. ಡೀಸೆಲ್ 89.62 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಡೀಸೆಲ್ 92.76 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ., ಡೀಸೆಲ್, 94.27 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಡೀಸೆಲೆ 87.89 ರೂ., ಲಕ್ನೋದಲ್ಲಿ ಪೆಟ್ರೋಲ್ 96.57 ರೂ., ಡೀಸೆಲ್ 89.76 ರೂ., ನೋಯ್ಡಾದಲ್ಲಿ ಪೆಟ್ರೋಲ್ 96.79 ರೂ., ಡೀಸೆಲ್ 89.96 ರೂ., ಪಾಟ್ನಾದಲ್ಲಿ ಪೆಟ್ರೋಲ್ 107.24 ರೂ., ಡೀಸೆಲ್ 94.04 ರೂ. ಇದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಇಳಿಕೆ
ಮಧ್ಯಪ್ರದೇಶದಲ್ಲಿ ಪೆಟ್ರೋಲ್ ಬೆಲೆ 40 ಪೈಸೆ ಮತ್ತು ಡೀಸೆಲ್ ಬೆಲೆ 38 ಪೈಸೆ ಇಳಿಕೆಯಾಗಿದೆ. ಮಹಾರಾಷ್ಟ್ರದಲ್ಲೂ ಪೆಟ್ರೋಲ್ 40 ಪೈಸೆ ಮತ್ತು ಡೀಸೆಲ್ 38 ಪೈಸೆ ಕಡಿಮೆಯಾಗಿದೆ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ 31 ಪೈಸೆಗಳಷ್ಟು ಅಗ್ಗವಾಗಿದೆ. ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ. ಅದೇ ಸಮಯದಲ್ಲಿ, ಹರಿಯಾಣ, ಜಮ್ಮು-ಕಾಶ್ಮೀರ ಮತ್ತು ಪಂಜಾಬ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚುತ್ತಿದೆ.

ಮತ್ತಷ್ಟು ಓದಿ: Petrol Diesel Price on February 18: ಛತ್ತೀಸ್​ಗಢದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ದೇಶದಲ್ಲಿ ಉತ್ಪಾದನೆಯಾಗುವ ಕಚ್ಚಾ ತೈಲದ ಮೇಲಿನ ವಿಂಡ್ ಫಾಲ್ ಟ್ಯಾಕ್ಸ್ ಅಂದರೆ ವಿಂಡ್ ಫಾಲ್ ಟ್ಯಾಕ್ಸ್ ಅನ್ನು ಪ್ರತಿ ಟನ್ ಗೆ 3,200 ರೂ.ನಿಂದ 3,300 ರೂ.ಗೆ ಸರ್ಕಾರ ಹೆಚ್ಚಿಸಿದೆ.

ಅಧಿಕೃತ ಅಧಿಸೂಚನೆಯ ಪ್ರಕಾರ, ಡೀಸೆಲ್ ರಫ್ತಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ಶೂನ್ಯದಿಂದ 1.50 ರೂ.ಗೆ ಹೆಚ್ಚಿಸಲಾಗಿದೆ. ಪೆಟ್ರೋಲ್ ಮತ್ತು ವಿಮಾನ ಇಂಧನ (ಎಟಿಎಫ್) ಮೇಲಿನ ಸುಂಕವು ಶೂನ್ಯ ಮಟ್ಟದಲ್ಲಿ ಉಳಿಯುತ್ತದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಲಿದೆಯೇ?
ಕಚ್ಚಾತೈಲದ ಬೆಲೆ 80 ಡಾಲರ್‌ಗಿಂತ ಕಡಿಮೆಯಿದ್ದರೆ, ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗುವುದು ಎಂದು ಕೇಂದ್ರ ಸರ್ಕಾರದಿಂದ ಹೇಳಿಕೆ ಬಂದಿದೆ. ಆದರೆ, ಇದು ಸ್ಪಷ್ಟವಾಗುವ ಯಾವುದೇ ದಿನಾಂಕವನ್ನು ಸರ್ಕಾರ ನೀಡಿಲ್ಲ. ಲೋಕಸಭೆ ಚುನಾವಣೆಗೂ ಮುನ್ನ ತೈಲ ಬೆಲೆ ಪರಿಷ್ಕರಣೆ ಆಗಬಹುದು ಎಂದು ನಂಬಲಾಗಿದೆ.

OMC ಗಳು ಬೆಲೆಗಳನ್ನು ಬಿಡುಗಡೆ ಮಾಡುತ್ತವೆ
ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ . ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಂತಾದ ಕಂಪನಿಗಳು ತಮ್ಮ ವೆಬ್‌ಸೈಟ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ. ಮನೆಯಲ್ಲಿ ಕುಳಿತು ತೈಲ ಬೆಲೆಯನ್ನು ಪರಿಶೀಲಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ