Petrol Diesel Price on December 13: ಅಸ್ಸಾಂ, ಗೋವಾದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 13, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಸ್ಸಾಂನಲ್ಲಿ ಪೆಟ್ರೋಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿ 98.89 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿ 90.09 ರೂ.ಗೆ ತಲುಪಿದೆ. ಗೋವಾದಲ್ಲಿ, ಪೆಟ್ರೋಲ್ ಲೀಟರ್‌ಗೆ 15 ಪೈಸೆ ಕಡಿಮೆಯಾಗಿ 96.56 ರೂಪಾಯಿಗಳಿಗೆ ಮತ್ತು ಡೀಸೆಲ್ ಲೀಟರ್‌ಗೆ 14 ಪೈಸೆ ಕಡಿಮೆಯಾಗಿ 88.33 ರೂಪಾಯಿಗಳಿಗೆ ಲಭ್ಯವಿದೆ.
ಪೆಟ್ರೋಲ್, ಡೀಸೆಲ್ ಬೆಲೆಗಳು ಕಾಲ ಕಾಲಕ್ಕೆ ಬದಲಾಗುತ್ತಲೇ ಇರುತ್ತವೆ. ಡಿಸೆಂಬರ್ 13ರಂದು ನಿಮ್ಮ ನಗರದಲ್ಲಿ ಇಂಧನ ಬೆಲೆ ಎಷ್ಟಿದೆ ತಿಳಿಯಿರಿ. ಅಸ್ಸಾಂನಲ್ಲಿ ಪೆಟ್ರೋಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿ 98.89 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿ 90.09 ರೂ.ಗೆ ತಲುಪಿದೆ.
ಗೋವಾದಲ್ಲಿ, ಪೆಟ್ರೋಲ್ ಲೀಟರ್‌ಗೆ 15 ಪೈಸೆ ಕಡಿಮೆಯಾಗಿ 96.56 ರೂಪಾಯಿಗಳಿಗೆ ಮತ್ತು ಡೀಸೆಲ್ ಲೀಟರ್‌ಗೆ 14 ಪೈಸೆ ಕಡಿಮೆಯಾಗಿ 88.33 ರೂಪಾಯಿಗಳಿಗೆ ಲಭ್ಯವಿದೆ. ಮಧ್ಯಪ್ರದೇಶದಲ್ಲಿ ಪೆಟ್ರೋಲ್ 21 ಪೈಸೆ ಇಳಿಕೆಯ ನಂತರ ಲೀಟರ್‌ಗೆ 107.49 ರೂ.ಗೆ ಮತ್ತು ಡೀಸೆಲ್ 18 ಪೈಸೆ ಇಳಿಕೆಯ ನಂತರ ಲೀಟರ್‌ಗೆ 92.80 ರೂ.ಗೆ ಲಭ್ಯವಿದೆ.
ಮಹಾರಾಷ್ಟ್ರದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 2 ಪೈಸೆ ಇಳಿಕೆಯಾಗಿ 104.60 ರೂ.ಗೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 2 ಪೈಸೆ ಇಳಿಕೆಯಾಗಿ 91.12 ರೂ.ಗೆ ತಲುಪಿದೆ. ಯುಪಿಯಲ್ಲಿ, ಪೆಟ್ರೋಲ್ 24 ಪೈಸೆ ಇಳಿಕೆಯ ನಂತರ ಲೀಟರ್‌ಗೆ 94.37 ರೂ.ಗೆ ಮತ್ತು ಡೀಸೆಲ್ 29 ಪೈಸೆ ಇಳಿಕೆಯ ನಂತರ ಲೀಟರ್‌ಗೆ 87.41 ರೂ.ಗೆ ಲಭ್ಯವಿದೆ.
ಮತ್ತಷ್ಟು ಓದಿ: ಕಚ್ಚಾತೈಲ ಬೆಲೆಯಲ್ಲಿ ಮತ್ತಷ್ಟು ಏರಿಕೆ, ಇಂಧನ ದರದಲ್ಲಿ ವ್ಯತ್ಯಾಸವಾಗಿದೆಯೇ?
ಇಂದು ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ಜಾರ್ಖಂಡ್, ಕೇರಳ, ಮಿಜೋರಾಂ, ಒಡಿಶಾ ಮತ್ತು ಪಂಜಾಬ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.50 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ., ಬೆಂಗಳೂರು ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 105.01 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.80 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ.
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 73.52 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ, ಆದರೆ ಡಬ್ಲ್ಯೂಟಿಐಕಚ್ಚಾ ಪ್ರತಿ ಬ್ಯಾರೆಲ್‌ಗೆ 70.41 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ.
ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:10 am, Fri, 13 December 24