AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on February 16: ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಬಿಹಾರದಲ್ಲಿ ಇಳಿಕೆ

ಕಳೆದ ಒಂದೂವರೆ ವರ್ಷಕ್ಕೂ ಅಧಿಕ ದಿನಗಳಿಂದ ದೇಶಾದ್ಯಂತ ಪೆಟ್ರೋಲ್ ಬೆಲೆ ಅಷ್ಟೊಂದು ಏರಿಳಿತ ಕಂಡಿಲ್ಲ. ಸರ್ಕಾರಿ ಕಂಪನಿಗಳು ಫೆಬ್ರವರಿ 16ರ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದರೆ ಬಿಹಾರದಲ್ಲಿ ಇಳಿಕೆ ಕಂಡಿದೆ. ಇಂದು ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟಿದೆ ಎಂಬುದನ್ನು ಈ ಸುದ್ದಿಯಲ್ಲಿ ತಿಳಿಯಿರಿ.

Petrol Diesel Price on February 16: ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಬಿಹಾರದಲ್ಲಿ ಇಳಿಕೆ
ಪೆಟ್ರೋಲ್Image Credit source: Indian Express
ನಯನಾ ರಾಜೀವ್
|

Updated on: Feb 16, 2024 | 7:13 AM

Share

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿದ್ದು, ಶುಕ್ರವಾರ ಬೆಳಗ್ಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ತೈಲ ದರದಲ್ಲಿ ಬದಲಾವಣೆಯಾಗಿದೆ. ಸರ್ಕಾರಿ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ದರಗಳನ್ನು ಬಿಡುಗಡೆ ಮಾಡಿದ್ದು, ಉತ್ತರ ಪ್ರದೇಶ ಹಾಗೂ ಬಿಹಾರದ ನಗರಗಳಲ್ಲಿ ಬದಲಾವಣೆಗಳು ಗೋಚರಿಸುತ್ತವೆ. ಏತನ್ಮಧ್ಯೆ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಸುಮಾರು 1ಡಾಲರ್​ನಷ್ಟು ಕುಸಿದಿದೆ. ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಇಂದು ಗೌತಮ್ ಬುದ್ಧ ನಗರದಲ್ಲಿ (ನೋಯ್ಡಾ-ಗ್ರೇಟರ್ ನೋಯ್ಡಾ) ಪೆಟ್ರೋಲ್ ಬೆಲೆ 42 ಪೈಸೆಯಿಂದ ಲೀಟರ್‌ಗೆ 97.00 ರೂ. ಇಲ್ಲಿ ಡೀಸೆಲ್ ಕೂಡ 39 ಪೈಸೆ ಹೆಚ್ಚಳವಾಗಿದ್ದು, ಲೀಟರ್‌ಗೆ 90.14 ರೂ.ಗೆ ಮಾರಾಟವಾಗುತ್ತಿದೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 10 ಪೈಸೆ ಕಡಿಮೆಯಾಗಿ 96.47 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 10 ಪೈಸೆ ಇಳಿಕೆಯಾಗಿ 89.66 ರೂ.ಗೆ ತಲುಪಿದೆ. ಇದಲ್ಲದೆ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ, ಪೆಟ್ರೋಲ್ 56 ಪೈಸೆಯಷ್ಟು ಅಗ್ಗವಾಗಿದೆ ಮತ್ತು ಲೀಟರ್‌ಗೆ 107.24 ರೂ ತಲುಪಿದೆ, ಆದರೆ ಡೀಸೆಲ್ 52 ಪೈಸೆ ಕುಸಿತದೊಂದಿಗೆ ಲೀಟರ್‌ಗೆ 94.04 ರೂ.ಗೆ ಮಾರಾಟವಾಗುತ್ತಿದೆ.

ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಜಾಗತಿಕ ಮಾರುಕಟ್ಟೆಯಲ್ಲಿ ನಿರಂತರವಾಗಿ ದುಬಾರಿಯಾಗುತ್ತಿರುವ ಕಚ್ಚಾ ತೈಲದ ಬೆಲೆ ಇಂದು ಇಳಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು 1 ಡಾಲರ್​ನಿಂದ 81.60 ಡಾಲರ್​ಗೆ ಇಳಿದಿದೆ. ಡಬ್ಲ್ಯುಟಿಐ ದರ ಕೂಡ ಇಂದು ಪ್ರತಿ ಬ್ಯಾರೆಲ್‌ಗೆ 76.43 ಡಾಲರ್​ಗೆ ಇಳಿಕೆಯಾಗಿದೆ.

ಮತ್ತಷ್ಟು ಓದಿ: Petrol Diesel Price on February 15: ಪಂಜಾಬ್, ಹರ್ಯಾಣ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ದುಬಾರಿ

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ 89.62 ರೂ. – ಮುಂಬೈ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ. – ಚೆನ್ನೈ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ. -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ.

ಈ ನಗರಗಳಲ್ಲಿ ಬಿಡುಗಡೆಯಾದ ಹೊಸ ಬೆಲೆಗಳು – ನೋಯ್ಡಾದಲ್ಲಿ ಪೆಟ್ರೋಲ್ 97.00 ರೂ. ಮತ್ತು ಡೀಸೆಲ್ ಲೀಟರ್‌ಗೆ 90.14 ರೂ. ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.47 ರೂ. ಮತ್ತು ಡೀಸೆಲ್ 89.66 ರೂ. ಆಗಿದೆ. – ಪಾಟ್ನಾದಲ್ಲಿ, ಪೆಟ್ರೋಲ್ ಲೀಟರ್‌ಗೆ 107.24 ರೂ ಮತ್ತು ಡೀಸೆಲ್ 90.04 ರೂ. ಆಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ