ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Rate) ಯಾವುದೇ ಬದಲಾವಣೆ ಇಲ್ಲ. ನವದೆಹಲಿ, ಕೋಲ್ಕತ್ತಾ, ಮುಂಬೈ ಮತ್ತು ಬೆಂಗಳೂರು (Bangalore) ಸೇರಿದಂತೆ ಪ್ರಮುಖ ನಗರಗಳಲ್ಲಿನ ಏಪ್ರಿಲ್ 17 ಸೋಮವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ರೂ 96.72 ಆಗಿದ್ದು ಡೀಸೆಲ್ ದರ ಪ್ರತಿ ಲೀಟರ್‌ಗೆ ರೂ 89.62 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 101.94 ರೂ ಆಗಿದ್ದು ಡೀಸೆಲ್ ದರ ಲೀಟರ್‌ಗೆ 87.89 ರೂ. ಆಗಿದೆ.
ಆದಾಗ್ಯೂ, ದೇಶಾದ್ಯಂತದ ನಗರಗಳಲ್ಲಿ ಇಂಧನ ಬೆಲೆಗಳಲ್ಲಿ ಏರಿಳಿತಗಳನ್ನು ಕಂಡಿವೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 23 ಪೈಸೆಯಿಂದ 102.86 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಪ್ರತಿ ಲೀಟರ್‌ಗೆ 0.22 ಪೈಸೆ ಹೆಚ್ಚಳವಾಗಿ 94.46 ರೂ.ಗೆ ತಲುಪಿದೆ. ಪೆಟ್ರೋಲ್ ಬೆಲೆ ಗುರುಗ್ರಾಮ್‌ನಲ್ಲಿ ಲೀಟರ್‌ಗೆ 23 ಪೈಸೆ ಇಳಿದಿದ್ದು 96.66 ರೂ ತಲುಪಿದೆ. ಜೈಪುರದಲ್ಲಿ ಪೆಟ್ರೋಲ್ ಲೀಟರ್‌ಗೆ 32 ಪೈಸೆ ಇಳಿದು 108.16 ರೂ.ಗೆ ತಲುಪಿದೆ. ಆದರೆ ಡೀಸೆಲ್ ಬೆಲೆ ಕ್ರಮವಾಗಿ 22 ಪೈಸೆ ಮತ್ತು 29 ಪೈಸೆ ಇಳಿಕೆಯಾಗಿದೆ.
ಚಂಡೀಗಢದಲ್ಲಿ ಪೆಟ್ರೋಲ್ ದರ ರೂ 96.20, ಡೀಸೆಲ್ ದರ ರೂ 84.2, ಚೆನ್ನೈನಲ್ಲಿ ಪೆಟ್ರೋಲ್ ದರ ರೂ 102.86, ಡೀಸೆಲ್ ದರ ಪ್ರತಿ ಲೀಟರ್‌ಗೆ ರೂ 94.46 ಆಗಿದೆ. ಗುರುಗ್ರಾಮದಲ್ಲಿ ಪೆಟ್ರೋಲ್ ಲೀಟರ್‌ಗೆ ರೂ 96.66 ಆಗಿದ್ದುಡೀಸೆಲ್ ದರ: ಪ್ರತಿ ಲೀಟರ್‌ಗೆ ರೂ 89.54 ಆಗಿದೆ. ಇನ್ನುಳಿದ ನಗರಗಳಾದ ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ ರೂ 106.03, ಡೀಸೆಲ್ ದರ ಪ್ರತಿ ಲೀಟರ್‌ಗೆ ರೂ 92.76, ಲಕ್ನೋದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ರೂ 96.54, ಡೀಸೆಲ್ ದರ ಪ್ರತಿ ಲೀಟರ್‌ಗೆ ರೂ 89.81, ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 106.31 ರೂ, ಡೀಸೆಲ್ ದರ ಪ್ರತಿ ಲೀಟರ್‌ಗೆ ರೂ 94.2, ನೋಯ್ಡಾದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ರೂ 96.76, ಡೀಸೆಲ್ ದರ ಪ್ರತಿ ಲೀಟರ್‌ಗೆ ರೂ 89.93 ಆಗಿದೆ.
ಮೌಲ್ಯವರ್ಧಿತ ತೆರಿಗೆ (ವ್ಯಾಟ್), ಸರಕು ಸಾಗಣೆ ಶುಲ್ಕಗಳು, ಸ್ಥಳೀಯ ತೆರಿಗೆಗಳು ಇತ್ಯಾದಿಗಳಂತಹ ವಿವಿಧ ಮಾನದಂಡಗಳನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಕಳೆದ ವರ್ಷ ಮೇ 21 ರಂದು ಇಂಧನ ದರಗಳಲ್ಲಿ ದೇಶಾದ್ಯಂತ ಕೊನೆಯ ಬದಲಾವಣೆಯಾಗಿತ್ತು. ಸಚಿವೆ ನಿರ್ಮಲಾ ಸೀತಾರಾಮನ್ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸಿದ್ದಾರೆ.
ನಿಮ್ಮ ನಗರದಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಿಳಿಯಿರಿ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ ಮತ್ತು ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ. ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ದರವನ್ನು ಸಹ ನೀವು ತಿಳಿದುಕೊಳ್ಳಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಅನ್ನು ಸಿಟಿ ಕೋಡ್ ಜೊತೆಗೆ 9224992249 ಗೆ ಕಳುಹಿಸಬಹುದು ಮತ್ತು BPCL ಗ್ರಾಹಕರು RSP ಅನ್ನು 9223112222 ಗೆ ಕಳುಹಿಸಬಹುದು. ಆದರೆ, HPCL ಗ್ರಾಹಕರು HP ಬೆಲೆಯನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿಯಬಹುದು.
ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ