AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on April 29: ಬೆಂಗಳೂರು ಸೇರಿ ದೇಶದ ಬಹುತೇಕ ಕಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಏಪ್ರಿಲ್​ 29, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಹೆಚ್ಚಿನ ಬದಲಾವಣೆಗಳು ಕಂಡುಬಂದಿಲ್ಲ.

Petrol Diesel Price on April 29: ಬೆಂಗಳೂರು ಸೇರಿ ದೇಶದ ಬಹುತೇಕ ಕಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಪೆಟ್ರೋಲ್
ನಯನಾ ರಾಜೀವ್
|

Updated on: Apr 29, 2024 | 7:12 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ(Crude Oil) ಬೆಲೆಯಲ್ಲಿ ಯಾವುದೇ ಬದಲಾವಣೆ ಗೋಚರಿಸಿಲ್ಲ, ಸೋಮವಾರ ಬೆಳಗ್ಗೆ ಸುಮಾರು 7 ಗಂಟೆಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 83.85 ಡಾಲರ್​ಗೆ ಮಾರಾಟ ಮಾಡಲಾಗುತ್ತಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 89.50 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದವೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ 51 ಪೈಸೆ ಮತ್ತು ಡೀಸೆಲ್ 48 ಪೈಸೆ ಏರಿಕೆಯಾಗಿದೆ. ಹರ್ಯಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 21 ಪೈಸೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಪೆಟ್ರೋಲ್ ಬೆಲೆ 26 ಪೈಸೆ ಮತ್ತು ಡೀಸೆಲ್ 24 ಪೈಸೆ ಹೆಚ್ಚಾಗಿದೆ. ಇದಲ್ಲದೇ ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಮತ್ತೊಂದೆಡೆ, ಹಿಮಾಚಲ ಪ್ರದೇಶದಲ್ಲಿ ಪೆಟ್ರೋಲ್ 59 ಪೈಸೆ ಮತ್ತು ಡೀಸೆಲ್ 55 ಪೈಸೆ ಕಡಿಮೆಯಾಗಿದೆ. ಅಲ್ಲದೆ, ಕರ್ನಾಟಕ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 94.72 ರೂ. ಮತ್ತು ಡೀಸೆಲ್ ಲೀಟರ್‌ಗೆ 87.62ರೂ. – ಮುಂಬೈನಲ್ಲಿ ಪೆಟ್ರೋಲ್ 104.21 ರೂ. ಮತ್ತು ಡೀಸೆಲ್ 92.15 ರೂ. -ಬೆಂಗಳೂರು: ಪೆಟ್ರೋಲ್ 99.84 ರೂ. ಮತ್ತು ಡೀಸೆಲ್ 85.93 ರೂ ಇದೆ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 103.94 ರೂ. ಮತ್ತು ಡೀಸೆಲ್ ಲೀಟರ್‌ಗೆ 94.34 ರೂ. ಇದೆ.

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ ನೋಯ್ಡಾದಲ್ಲಿ, ಪೆಟ್ರೋಲ್ 94.94 ರೂ ಮತ್ತು ಡೀಸೆಲ್ 88.08 ರೂ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 94.65 ರೂ ಮತ್ತು ಡೀಸೆಲ್ ಲೀಟರ್‌ಗೆ 87.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 94.53 ರೂ ಮತ್ತು ಡೀಸೆಲ್ ರೂ 87.62 ಆಗಿದೆ. – ಪಾಟ್ನಾದಲ್ಲಿ, ಪೆಟ್ರೋಲ್ ಲೀಟರ್‌ಗೆ 106.06 ರೂ ಮತ್ತು ಡೀಸೆಲ್ ರೂ 92.87 ಆಗಿದೆ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ 84.10 ರೂ ಮತ್ತು ಡೀಸೆಲ್ ಲೀಟರ್‌ಗೆ 79.74 ರೂ.

ಮತ್ತಷ್ಟು ಓದಿ: Petrol Diesel Price on April 26: ಬೆಂಗಳೂರು ಸೇರಿ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ನಾವು ಪೆಟ್ರೋಲ್, ಡೀಸೆಲ್ ಅನ್ನು ದುಬಾರಿ ಬೆಲೆಗೆ ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಸ್​ಎಂಎಸ್​ ಮೂಲಕ ಇಂದಿನ ಬೆಲೆಗಳನ್ನು ತಿಳಿಯಿರಿ ಎಸ್‌ಎಂಎಸ್ ಮೂಲಕವೂ ತಿಳಿದುಕೊಳ್ಳಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ