Petrol- Diesel Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

Petrol Price | Diesel Price Today, 29-04-2022: ಇಂದು ಕೂಡ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ.

Petrol- Diesel Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Digi Tech Desk

Updated on:Apr 29, 2022 | 4:26 PM

Petrol Diesel Price Today: ದೇಶದಲ್ಲಿ ಕಳೆದ 23 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಆದರೆ ಕಳೆದ 23 ದಿನಗಳಿಂದ ದರ ಸ್ಥಿರವಾಗಿದೆ. ಇಂದು (ಶುಕ್ರವಾರ, ಏಪ್ರಿಲ್ 29, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:36 am, Fri, 29 April 22

ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ