AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಕಳೆದ ಒಂದು ತಿಂಗಳಿಂದ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಷ್ಟಿದೆ?

Petrol Price | Diesel Price Today, 06-05-2022: ದೇಶದಲ್ಲಿ ಕಳೆದ ಒಂದು ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ದೆಹಲಿ, ಮುಂಬೈ ಹಾಗೂ ಇತರ ನಗರಗಳಲ್ಲಿ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ.

Petrol Price Today: ಕಳೆದ ಒಂದು ತಿಂಗಳಿಂದ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಷ್ಟಿದೆ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 06, 2022 | 9:12 AM

Share

Petrol Diesel Price Today: ದೇಶದಲ್ಲಿ ಕಳೆದ 1 ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಆದರೆ ಕಳೆದ 30 ದಿನಗಳಿಂದ ದರ ಸ್ಥಿರವಾಗಿದೆ. ಇಂದು (ಶುಕ್ರವಾರ, ಮೇ 06, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ
Image
Gold Price Today: 4 ದಿನಗಳ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರ 1,100 ರೂ. ಹೆಚ್ಚಳ
Image
Karnataka Rain: ಬೆಂಗಳೂರು, ಮಲೆನಾಡು, ಕರಾವಳಿಯಲ್ಲಿಂದು ವ್ಯಾಪಕ ಮಳೆ; ಉತ್ತರ ಒಳನಾಡಿನಲ್ಲಿ ಬಿಸಿ ಗಾಳಿ ಸಾಧ್ಯತೆ
Image
Indian Rupee Value: ಭಾರತದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಗೊತ್ತೆ?
Image
Inauspicious Day: ಚಿನ್ನ ಮತ್ತು ಕಬ್ಬಿಣವನ್ನು ಯಾವ ದಿನ ಖರೀದಿ ಮಾಡಬಾರದು, ಇಲ್ಲಿದೆ ನಿಖರ ಮಾಹಿತಿ ನೋಡಿ

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Follow Us
TV9 Web
TV9 Web

TV9 Kannada

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ