AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಕಳೆದ 22 ದಿನಗಳಿಂದ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?

Petrol Price | Diesel Price Today, 28-04-2022: ದೇಶದಲ್ಲಿ ಕಳೆದ 22 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ.

Petrol Price Today: ಕಳೆದ 22 ದಿನಗಳಿಂದ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 28, 2022 | 8:48 AM

Share

Petrol Diesel Price Today: ದೇಶದಲ್ಲಿ ಕಳೆದ 22 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಆದರೆ ಕಳೆದ 22 ದಿನಗಳಿಂದ ದರ ಸ್ಥಿರವಾಗಿದೆ. ಇಂದು (ಗುರುವಾರ, ಏಪ್ರಿಲ್ 28, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ.

ಬೆಂಗಳೂರಿನಲ್ಲಿ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್