Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

| Updated By: shivaprasad.hs

Updated on: May 11, 2022 | 8:35 AM

Petrol Price | Diesel Price, 11.05.2022: ದೇಶದಲ್ಲಿ ಕಳೆದ ಒಂದು ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ.

Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
Follow us on

Petrol Diesel Price Today: ದೇಶದಲ್ಲಿ ಕಳೆದ ಒಂದು ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಇಂದು (ಬುಧವಾರ, ಮೇ 11, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ
USD Vs Rupee Value: ಅಮೆರಿಕದ ಡಾಲರ್ ವಿರುದ್ಧ ರೂಪಾಯಿ ನೆಲ ಕಚ್ಚಲು ಇಲ್ಲಿವೆ ಕಾರಣಗಳು
Google: ಇಂದಿನಿಂದ ಗೂಗಲ್ ಹೊಸ ನಿಯಮ ಜಾರಿ: ಇನ್ಮುಂದೆ ಕಾರ್ಯನಿರ್ವಹಿಸಲ್ಲ ಈ ಆ್ಯಪ್​ಗಳು
Gold Price Today: ಭಾರತದಲ್ಲಿ ಚಿನ್ನದ ಬೆಲೆ 430 ರೂ. ಕುಸಿತ; ಬೆಳ್ಳಿ ದರವೂ ಇಳಿಕೆ
Karnataka Rain: ಕರ್ನಾಟಕದಲ್ಲೂ ಅಸಾನಿ ಚಂಡಮಾರುತದ ಎಫೆಕ್ಟ್​; ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.