Petrol Price Today: ಇಂದೂ ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಬೆಂಗಳೂರಿನಲ್ಲಿ ಇಂಧನ ದರ ಹೀಗಿದೆ

Petrol Price | Diesel Price, 15.05.2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

Petrol Price Today: ಇಂದೂ ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಬೆಂಗಳೂರಿನಲ್ಲಿ ಇಂಧನ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
| Updated By: sandhya thejappa

Updated on: May 15, 2022 | 8:13 AM

ಏರಿಕೆಯಾಗಿರುವ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಸದ್ಯ ಸ್ಥಿರವಾಗಿದೆ. ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಮಾರ್ಚ್ 22ರಿಂದ ನಿರಂತರವಾಗಿ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಇಂದು (ಶನಿವಾರ, ಮೇ 14, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ? ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ
Image
ಬೆಂಗಳೂರಲ್ಲಿ ಹಲ್ಲೆಗೊಳಗಾಗಿದ್ದ ಮಂಗಳಮುಖಿ ಆಸ್ಪತ್ರೆಯಲ್ಲಿ ಸಾವು; ಗದಗದಲ್ಲಿ ಚಾಕುವಿನಿಂದ ಇರಿದು ತಂದೆಯ ಬರ್ಬರ ಹತ್ಯೆ
Image
ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರ: ಬಿಜೆಪಿ ರಾಜ್ಯ ಕೋರ್ ಕಮಿಟಿಯಿಂದ 20 ಹೆಸರುಗಳು ಶಿಫಾರಸು
Image
ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ರಾಹುಲ್ ಗಾಂಧಿ ಪಾದಯತ್ರೆ: ಬಲವರ್ಧನೆಗೆ ಕಾಂಗ್ರೆಸ್ ಯತ್ನ
Image
Andrew Symonds: ಕ್ರಿಕೆಟ್ ಲೋಕಕ್ಕೆ ಮತ್ತೊಂದು ಆಘಾತ: ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಆ್ಯಂಡ್ರ್ಯೂ ಸೈಮಂಡ್ಸ್‌ ನಿಧನ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.