Petrol Price Today: ಯಥಾಸ್ಥಿತಿ ಕಾಪಾಡಿಕೊಂಡ ಪೆಟ್ರೋಲ್, ಡೀಸೆಲ್ ಬೆಲೆ, ಬೆಂಗಳೂರಿನ ಧಾರಣೆ ವಿವರ ಇಲ್ಲಿದೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 24, 2022 | 8:07 AM

ಸತತ ಏರಿಕೆ ಕಂಡಿರುವ ಪೆಟ್ರೋಲ್ (Petrol Price), ಡೀಸೆಲ್ ಬೆಲೆ ಕಡಿಮೆಯಾಗುತ್ತಿಲ್ಲ.

Petrol Price Today: ಯಥಾಸ್ಥಿತಿ ಕಾಪಾಡಿಕೊಂಡ ಪೆಟ್ರೋಲ್, ಡೀಸೆಲ್ ಬೆಲೆ, ಬೆಂಗಳೂರಿನ ಧಾರಣೆ ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us on

Fuel Price: ಉಕ್ರೇನ್ ಮೇಲಿನ ರಷ್ಯಾ ದಾಳಿಯ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗುತ್ತಲೇ ಇದೆ. ಇದರ ಪರಿಣಾಮಗಳು ಭಾರತದಲ್ಲಿಯೂ ಗೋಚರಿಸುತ್ತಿವೆ. ಸತತ ಏರಿಕೆ ಕಂಡಿರುವ ಪೆಟ್ರೋಲ್ (Petrol Price), ಡೀಸೆಲ್ ಬೆಲೆ ಕಡಿಮೆಯಾಗುತ್ತಿಲ್ಲ. ದಿನವೂ ಕೆಲವು ಪೈಸೆಗಳ ಏರಿಳಿತ ಬಿಟ್ಟರೆ ಭಾರತದ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ (Diesel Price) ಹೆಚ್ಚೇನೂ ಬದಲಾವಣೆ ಆಗುತ್ತಿಲ್ಲ. ಸತತ 33ನೇ ದಿನವಾದ ಇಂದು (ಜೂನ್ 24) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕೇಂದ್ರ ಸರ್ಕಾರವು ಮೇ 21ರಂದು ಅಬಕಾರಿ ಸುಂಕ ಕಡಿತಗೊಳಿಸಿದ ನಂತರ ಕೊನೆಯ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿತ್ತು.

ಮೇ 21ರಂದು 1 ಲೀಟರ್‌ ಪೆಟ್ರೋಲ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ಸುಂಕವನ್ನು ಕಡಿಮೆ ಮಾಡಿತ್ತು. ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ₹ 101.99, ಡೀಸೆಲ್ ₹ 87.94 ಇದೆ. ಕರ್ನಾಟಕದ ಇತರೆಡೆ ಒಂದು ಲೀಟರ್ ಪೆಟ್ರೋಲ್​ಗೆ ₹ 102.25, ಡೀಸೆಲ್​ಗೆ ₹ 88.17 ಬೆಲೆಯಿದೆ. ದೆಹಲಿಯಲ್ಲಿ ಪೆಟ್ರೋಲ್ ದರವು ಈ ಹಿಂದೆ 105.41 ರೂ.ಗೆ ಹೋಲಿಸಿದರೆ ಈಗ ಲೀಟರ್‌ಗೆ 96.72 ರೂ. ಆಗಿದೆ. ಮತ್ತು ಡೀಸೆಲ್ ದರಗಳು ಲೀಟರ್‌ಗೆ 96.67 ರೂ.ನಿಂದ 89.62 ರೂ.ಗೆ ಇಳಿದಿದೆ.

ಒಂದು ತಿಂಗಳಿನಿಂದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ದೆಹಲಿಯಲ್ಲಿ ಇಂದು 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ. ಆಗಿದ್ದರೆ, ಡೀಸೆಲ್ ದರ ಲೀಟರ್‌ಗೆ 89.62 ರೂ. ಆಗಿದೆ.

ಮುಂಬೈನಲ್ಲಿ ಪ್ರಸ್ತುತ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಬೆಲೆ 97.28 ರೂ.ಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಈಗ ಪೆಟ್ರೋಲ್ ಬೆಲೆ 102.63 ರೂ. ಆಗಿದ್ದರೆ, ಡೀಸೆಲ್ ಬೆಲೆ 94.24 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಬೆಲೆ 92.76 ರೂ.ಗೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.94 ರೂ. ಆಗಿದ್ದರೆ ಡೀಸೆಲ್ ಬೆಲೆ 87.89 ರೂ. ಆಗಿದೆ.

ಎಲ್ಲಾ 4 ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಇಂಧನ ಬೆಲೆಗಳು ಅತ್ಯಧಿಕವಾಗಿದೆ. ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಾರಣದಿಂದಾಗಿ ರಾಜ್ಯಗಳಾದ್ಯಂತ ದರಗಳು ಬದಲಾಗುತ್ತವೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ಚಾಲಿತ ತೈಲ ಸಂಸ್ಕರಣಾಗಾರಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಕಚ್ಚಾ ತೈಲ ಬೆಲೆಗಳು ಮತ್ತು ರೂಪಾಯಿ-ಡಾಲರ್ ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಂಡು ಪ್ರತಿದಿನ ಇಂಧನ ದರಗಳನ್ನು ಪರಿಷ್ಕರಿಸುತ್ತವೆ.

ಭಾರತವು ತನ್ನ ಕಚ್ಚಾ ತೈಲದ ಶೇ. 85ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ದೇಶೀಯ ಇಂಧನ ದರಗಳು ಅಂತಾರಾಷ್ಟ್ರೀಯ ದರಗಳಿಗೆ ಸಂಬಂಧಿಸಿವೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Published On - 8:06 am, Fri, 24 June 22