Petrol Diesel Price on December 06: 72 ಡಾಲರ್​ ದಾಟಿದ ಕಚ್ಚಾತೈಲ ಬೆಲೆ, ದೇಶದಲ್ಲಿ ಇಂಧನ ದರ ಎಷ್ಟಿದೆ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 06, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 72 ಡಾಲರ್ ದಾಟಿದೆ. ಬ್ರೆಂಟ್ ಕ್ರೂಡ್ ಇಂದು ಪ್ರತಿ ಬ್ಯಾರೆಲ್‌ಗೆ 72.45 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 68.71ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on December 06: 72 ಡಾಲರ್​ ದಾಟಿದ ಕಚ್ಚಾತೈಲ ಬೆಲೆ, ದೇಶದಲ್ಲಿ ಇಂಧನ ದರ ಎಷ್ಟಿದೆ?
ಪೆಟ್ರೋಲ್
Image Credit source: The Financial Express

Updated on: Dec 06, 2024 | 7:13 AM

ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 72 ಡಾಲರ್ ದಾಟಿದೆ. ಬ್ರೆಂಟ್ ಕ್ರೂಡ್ ಇಂದು ಪ್ರತಿ ಬ್ಯಾರೆಲ್‌ಗೆ 72.45 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 68.71ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಮತ್ತಷ್ಟು ಓದಿ: ಜಾರ್ಖಂಡ್​, ಹರ್ಯಾಣ, ಆಂಧ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

ಇಂದು ಆಂಧ್ರಪ್ರದೇಶ, ಹರಿಯಾಣ, ಜಾರ್ಖಂಡ್, ಒಡಿಶಾ, ತಮಿಳುನಾಡು, ತ್ರಿಪುರ ಮತ್ತು ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ. ಅದೇ ಸಮಯದಲ್ಲಿ, ಗೋವಾ, ಹಿಮಾಚಲ ಪ್ರದೇಶ, ಕೇರಳ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗಿವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕಚ್ಚಾ ತೈಲದ ಜಾಗತಿಕ ಬೆಲೆ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳ ಏರಿಳಿತವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ನೇರ ಪರಿಣಾಮ ಬೀರುತ್ತದೆ.

 

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us