Petrol Diesel Price on May 08: ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

|

Updated on: May 08, 2024 | 7:17 AM

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 08, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಆಂಧ್ರಪ್ರದೇಶ, ಛತ್ತೀಸ್‌ಗಢ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಿದೆ.

Petrol Diesel Price on May 08: ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ
ಪೆಟ್ರೋಲ್
Follow us on

ತೈಲ ಮಾರುಕಟ್ಟೆ ಕಂಪನಿಗಳು ದೇಶದ ಎಲ್ಲಾ ರಾಜ್ಯಗಳಿಗೆ ಪೆಟ್ರೋಲ್ ಮತ್ತು ಡೀಸೆಲ್​ನ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಅದರ ಪ್ರಕಾರ ಬಿಹಾರ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ.
ಇದಲ್ಲದೇ ಕೆಲವು ರಾಜ್ಯಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಮೆಟ್ರೋಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಆಗಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.15 ರೂ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.54 ರೂ.
ಬೆಂಗಳೂರಿನಲ್ಲಿ ಪೆಟ್ರೋಲ್ 99.84 ರೂ. ಡೀಸೆಲ್ 85.93 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರ ಸೇರಿದಂತೆ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ
ಬಿಹಾರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ. ಇಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 13 ಪೈಸೆ ಇಳಿಕೆಯಾಗಿ 107.17 ರೂ.ಗೆ ಮತ್ತು ಡೀಸೆಲ್ (ಬಿಹಾರದಲ್ಲಿ ಡೀಸೆಲ್ ಬೆಲೆ) ಲೀಟರ್‌ಗೆ 12 ಪೈಸೆ ಇಳಿಕೆಯಾಗಿ 93.89 ರೂ. ಇದಲ್ಲದೆ, ಆಂಧ್ರಪ್ರದೇಶ, ಛತ್ತೀಸ್‌ಗಢ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಿದೆ.

ಮತ್ತಷ್ಟು ಓದಿ: Petrol Diesel Price on May 07: ದೇಶದ ಬಹುತೇಕ ಕಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಲೋಕಸಭೆ ಚುನಾವಣೆ 2024 ರ ಮೊದಲು, ಮಾರ್ಚ್ 14, 2024 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು 2 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿತ್ತು. ಇತ್ತೀಚೆಗೆ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 90 ಡಾಲರ್‌ ದಾಟಿತ್ತು. ಆದರೆ, ಈಗ ಇಳಿಕೆ ಕಾಣುತ್ತಿದೆ. ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 83 ಡಾಲರ್​ಗಿಂತ ಹೆಚ್ಚಾಗುತ್ತಿದೆ.

 

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ