Petrol Price on December 06: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಡಿಸೆಂಬರ್ 6 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಕೊಂಚ ಇಳಿಕೆ ಕಾಣುತ್ತಿದೆ. ಬುಧವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 72.18 ಡಾಲರ್​ನಂತೆ ಮಾರಾಟ ಮಾಡಲಾಗುತ್ತಿತ್ತು ಮತ್ತು ಕೆಂಪು ಬಣ್ಣದಲ್ಲಿ ಉಳಿದಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲ ಕೂಡ ಕುಸಿಯುತ್ತಿದೆ ಮತ್ತು ಪ್ರತಿ ಬ್ಯಾರೆಲ್‌ಗೆ 77.20 ಡಾಲರ್​ಗನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

Petrol Price on December 06: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಡಿಸೆಂಬರ್ 6 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್
Image Credit source: CNBCTV18.COM

Updated on: Dec 06, 2023 | 7:06 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಕೊಂಚ ಇಳಿಕೆ ಕಾಣುತ್ತಿದೆ. ಬುಧವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 72.18 ಡಾಲರ್​ನಂತೆ ಮಾರಾಟ ಮಾಡಲಾಗುತ್ತಿತ್ತು ಮತ್ತು ಕೆಂಪು ಬಣ್ಣದಲ್ಲಿ ಉಳಿದಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲ ಕೂಡ ಕುಸಿಯುತ್ತಿದೆ ಮತ್ತು ಪ್ರತಿ ಬ್ಯಾರೆಲ್‌ಗೆ 77.20 ಡಾಲರ್​ಗನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 38 ಪೈಸೆ ಮತ್ತು ಡೀಸೆಲ್ ಬೆಲೆ 37 ಪೈಸೆ ಇಳಿಕೆಯಾಗಿದೆ. ಹರಿಯಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ 28 ಪೈಸೆಗಳಷ್ಟು ಅಗ್ಗವಾಗಿದೆ. ಇದಲ್ಲದೇ ಹಿಮಾಚಲ ಪ್ರದೇಶದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಮತ್ತೊಂದೆಡೆ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ 28 ಪೈಸೆ ಮತ್ತು ಡೀಸೆಲ್ 25 ಪೈಸೆ ಹೆಚ್ಚಾಗಿದೆ. ಪಂಜಾಬ್, ಗೋವಾ ಮತ್ತು ಗುಜರಾತ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ
– ದೆಹಲಿಯಲ್ಲಿ ಪೆಟ್ರೋಲ್ 96.72ರೂ. ಮತ್ತು ಡೀಸೆಲ್ ಲೀಟರ್‌ಗೆ 90.08 ರೂ.
– ಮುಂಬೈನಲ್ಲಿ ಪೆಟ್ರೋಲ್ 106.31ರೂ. ಮತ್ತು ಡೀಸೆಲ್ 94.27 ರೂ.
– ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.37 ರೂ.

ಈ ನಗರಗಳಲ್ಲಿ ಬೆಲೆ ಎಷ್ಟು ಬದಲಾಗಿದೆ
ನೋಯ್ಡಾದಲ್ಲಿ ಪೆಟ್ರೋಲ್ 97 ರೂ ಮತ್ತು ಡೀಸೆಲ್ ಲೀಟರ್‌ಗೆ 90.14 ರೂ ಆಗಿದೆ.
– ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.75 ರೂ ಆಗಿದೆ.
– ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.47 ರೂ ಮತ್ತು ಡೀಸೆಲ್ ರೂ 89.66 ಆಗಿದೆ.
– ಪಾಟ್ನಾದಲ್ಲಿ, ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ ರೂ 94.04 ಆಗಿದೆ.
– ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.

ಮತ್ತಷ್ಟು ಓದಿ: Petrol Price on December 05: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಡಿಸೆಂಬರ್ 5 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ
ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು
ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:06 am, Wed, 6 December 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us