Petrol Diesel Price on July 1st: ದೇಶಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜುಲೈ 01, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೇಶಾದ್ಯಂತ ಇಂಧನ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ. ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆ ಏರಿಳಿತವನ್ನು ಆಧರಿಸಿದೆ.

Petrol Diesel Price on July 1st: ದೇಶಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ
ಪೆಟ್ರೋಲ್Image Credit source: The Economic Times
Follow us
|

Updated on: Jul 01, 2024 | 8:59 AM

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇದೀಗ ಮತ್ತಷ್ಟು ಏರಿಕೆಯನ್ನು ಕಂಡಿದೆ. ಪ್ರಮುಖ ಜಾಗತಿಕ ತೈಲ ಮಾಪನಗಳಾದ ಡಬ್ಲ್ಯೂಟಿಐ, ಬ್ರೆಂಟ್‌ ಕಚ್ಚಾ ತೈಲದ ಬೆಲೆ ಏರಿಕೆ ಮಾಡಿವೆ. ಹೀಗಾಗಿ ಭಾರತ ಸೇರಿದಂತೆ ಆಮದುದಾರ ದೇಶಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಸರ್ಕಾರಿ ತೈಲ ಕಂಪನಿಗಳು ಜುಲೈ 01ರ, ಸೋಮವಾರದ ಪೆಟ್ರೋಲ್ (Petrol) ಮತ್ತು ಡೀಸೆಲ್(Diesel) ದರಗಳನ್ನು ಪರಿಷ್ಕರಿಸಿವೆ. ರಾಜ್ಯ ಸರ್ಕಾರ ವಿಧಿಸಿರುವ ವ್ಯಾಟ್‌ನಿಂದಾಗಿ ಪ್ರತಿ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಪ್ರತಿದಿನದಂತೆ ತೈಲ ಮಾರುಕಟ್ಟೆ ಕಂಪನಿಗಳು ಇಂದು ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನವೀಕರಿಸಿವೆ.

ಡಬ್ಲ್ಯೂಟಿಐ ಕಚ್ಚಾ ತೈಲವು ಶೇಕಡಾ 0.33 ರಷ್ಟು ಏರಿಕೆಯಾಗಿದೆ. ಬ್ಯಾರೆಲ್‌ $81.81 ಆಗಿದೆ. ಬ್ರೆಂಟ್‌ ಕಚ್ಚಾ ತೈಲವು ಶೇಕಡಾ 0.25 ಹೆಚ್ಚಾಗಿದ್ದು, ಬ್ಯಾರೆಲ್‌ಗೆ $85.25 ಡಾಲರ್ ತಲುಪಿದೆ. ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆ ಏರಿಳಿತವನ್ನು ಆಧರಿಸಿದೆ.

ಮೆಟ್ರೋ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ

  • ದೇಶದ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ.ಇದೆ.
  • ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.44ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.15 ರೂ.ಇದೆ.
  • ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 90.76 ರೂ. ಇದೆ.
  • ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.85 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ

ಮತ್ತಷ್ಟು ಓದಿ: ಮಹಾರಾಷ್ಟ್ರ ಸರ್ಕಾರದಿಂದ ಜನರಿಗೆ ಭರ್ಜರಿ ಗಿಫ್ಟ್: ಮಾಸಿಕ 1,500 ರೂ ಸಹಾಯಧನ, 3 ಉಚಿತ ಎಲ್​ಪಿಜಿ, ಪೆಟ್ರೋಲ್ ಬೆಲೆ ಇಳಿಕೆ ಇತ್ಯಾದಿ ಇತ್ಯಾದಿ

ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ

  • ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ರೂ ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.
  • ನೋಯ್ಡಾ: ಪೆಟ್ರೋಲ್ ಲೀಟರ್‌ಗೆ 94.81 ರೂ. ಮತ್ತು ಡೀಸೆಲ್ ಲೀಟರ್‌ಗೆ 88.10 ರೂ.
  • ಗುರುಗ್ರಾಮ: ಪೆಟ್ರೋಲ್ ಪ್ರತಿ ಲೀಟರ್‌ಗೆ 94.11 ರೂ. ಮತ್ತು ಡೀಸೆಲ್ ಲೀಟರ್‌ಗೆ 87.97 ರೂ.
  • ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24ರೂ., ಡೀಸೆಲ್ ಲೀಟರ್ ಗೆ 82.40 ರೂ.
  • ಹೈದರಾಬಾದ್: ಪ್ರತಿ ಲೀಟರ್ ಪೆಟ್ರೋಲ್ 107.41 ರೂ., ಡೀಸೆಲ್ ಲೀಟರ್ ಗೆ 95.65 ರೂ.
  • ಜೈಪುರ: ಪ್ರತಿ ಲೀಟರ್ ಪೆಟ್ರೋಲ್ 104.88 ರೂ., ಡೀಸೆಲ್ ಲೀಟರ್ ಗೆ 90.36 ರೂ.
  • ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ರೂ. ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.
  • ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.65 ರೂ., ಡೀಸೆಲ್ ಲೀಟರ್ ಗೆ 87.76 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಸ್​ಎಂಎಸ್​ ಮೂಲಕ ಇಂಧನ ಬೆಲೆ ತಿಳಿಯಿರಿ ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸಹ ನೀವು ಪರಿಶೀಲಿಸಬಹುದು. ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಿ ಅಥವಾ SMS ಕಳುಹಿಸಿ. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು ನಗರ ಕೋಡ್ ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಅನ್ನು ನಮೂದಿಸುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್