AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on June 25: ದೆಹಲಿ, ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಎಷ್ಟಿದೆ? ಇಲ್ಲಿದೆ ಓದಿ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜೂನ್ 28, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೇಶಾದ್ಯಂತ ಇಂಧನ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ. ಕರ್ನಾಟಕ ಹಾಗೂ ಗೋವಾದಲ್ಲಿ ಮಾತ್ರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ.

Petrol Diesel Price on June 25: ದೆಹಲಿ, ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಎಷ್ಟಿದೆ? ಇಲ್ಲಿದೆ ಓದಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 28, 2024 | 8:42 AM

Share

ಸರ್ಕಾರಿ ತೈಲ ಕಂಪನಿಗಳು ಜೂನ್ 28, ಶುಕ್ರವಾರದ ಪೆಟ್ರೋಲ್ ಮತ್ತು ಡೀಸೆಲ್ (Petro, Diesel) ದರಗಳನ್ನು ಪರಿಷ್ಕರಿಸಿವೆ. ರಾಜ್ಯ ಸರ್ಕಾರ ವಿಧಿಸಿರುವ ವ್ಯಾಟ್‌ನಿಂದಾಗಿ ಪ್ರತಿ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.ತಿದಿನದಂತೆ ತೈಲ ಮಾರುಕಟ್ಟೆ ಕಂಪನಿಗಳು ಇಂದು ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನವೀಕರಿಸಿವೆ.

ಮೆಟ್ರೋ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದೇಶದ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಇದೆ. ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.21 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.15 ರೂ. ಇದ್ದರೇ ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 90.76 ರೂ. ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.43 ರೂ.

ಇದನ್ನೂ ಓದಿ:  ಕರ್ನಾಟಕದಲ್ಲಿ ಇಂಧನ ಬೆಲೆ ಏರಿಕೆ, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹರ್ದೀಪ್ ಸಿಂಗ್ ಪುರಿ

ನೋಯ್ಡಾ ಸೇರಿದಂತೆ ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ

ನೋಯ್ಡಾ: ಪೆಟ್ರೋಲ್ ಲೀಟರ್‌ಗೆ 94.66 ರೂ. ಮತ್ತು ಡೀಸೆಲ್ ಲೀಟರ್‌ಗೆ 87.83 ರೂ. ಗುರುಗ್ರಾಮ: ಪೆಟ್ರೋಲ್ ಪ್ರತಿ ಲೀಟರ್‌ಗೆ 95.17 ರೂ. ಮತ್ತು ಡೀಸೆಲ್ ಲೀಟರ್‌ಗೆ 88.03 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ರೂ ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.22 ರೂ., ಡೀಸೆಲ್ ಲೀಟರ್ ಗೆ 82.38 ರೂ.

ಹೈದರಾಬಾದ್: ಪ್ರತಿ ಲೀಟರ್ ಪೆಟ್ರೋಲ್ 107.41 ರೂ., ಡೀಸೆಲ್ ಲೀಟರ್ ಗೆ 95.65 ರೂ.

ಜೈಪುರ: ಪ್ರತಿ ಲೀಟರ್ ಪೆಟ್ರೋಲ್ 105.71 ರೂ., ಡೀಸೆಲ್ ಲೀಟರ್ ಗೆ 91.10 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ರೂ. ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.65 ರೂ., ಡೀಸೆಲ್ ಲೀಟರ್ ಗೆ 87.76 ರೂ.

ಮಾರ್ಚ್ 2024 ರಿಂದ ಕೇಂದ್ರ ಸರ್ಕಾರವು ಪೆಟ್ರೋಲ್ ಬೆಲೆಯನ್ನು ರೂ 2 ರಷ್ಟು ಕಡಿತಗೊಳಿಸಿದಾಗಿನಿಂದ ದೇಶದ ಹೆಚ್ಚಿನ ಭಾಗಗಳಲ್ಲಿ ಬೆಲೆಗಳು ಬದಲಾಗದೆ ಉಳಿದಿವೆ. ಕೇಂದ್ರ ಸರ್ಕಾರ ಮತ್ತು ಹಲವಾರು ರಾಜ್ಯಗಳು ಇಂಧನ ತೆರಿಗೆಗಳನ್ನು ಕಡಿತಗೊಳಿಸಿದ ನಂತರ ಮೇ 2022 ರಿಂದ ಇಂಧನ ಬೆಲೆಗಳು ಸ್ಥಿರವಾಗಿವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಸ್​ಎಂಎಸ್​ ಮೂಲಕ ಇಂಧನ ಬೆಲೆ ತಿಳಿಯಿರಿ ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸಹ ನೀವು ಪರಿಶೀಲಿಸಬಹುದು. ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಿ ಅಥವಾ SMS ಕಳುಹಿಸಿ. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು ನಗರ ಕೋಡ್ ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಅನ್ನು ನಮೂದಿಸುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.

Published On - 8:42 am, Fri, 28 June 24

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್