ಸರ್ಕಾರಿ ತೈಲ ಕಂಪನಿಗಳು ಜೂನ್ 28, ಶುಕ್ರವಾರದ ಪೆಟ್ರೋಲ್ ಮತ್ತು ಡೀಸೆಲ್ (Petro, Diesel) ದರಗಳನ್ನು ಪರಿಷ್ಕರಿಸಿವೆ. ರಾಜ್ಯ ಸರ್ಕಾರ ವಿಧಿಸಿರುವ ವ್ಯಾಟ್‌ನಿಂದಾಗಿ ಪ್ರತಿ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.ತಿದಿನದಂತೆ ತೈಲ ಮಾರುಕಟ್ಟೆ ಕಂಪನಿಗಳು ಇಂದು ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನವೀಕರಿಸಿವೆ.
ಮೆಟ್ರೋ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ
ದೇಶದ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಇದೆ. ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.21 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.15 ರೂ. ಇದ್ದರೇ ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 90.76 ರೂ. ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.43 ರೂ.
ಇದನ್ನೂ ಓದಿ: ಕರ್ನಾಟಕದಲ್ಲಿ ಇಂಧನ ಬೆಲೆ ಏರಿಕೆ, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹರ್ದೀಪ್ ಸಿಂಗ್ ಪುರಿ
ನೋಯ್ಡಾ ಸೇರಿದಂತೆ ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ
ನೋಯ್ಡಾ: ಪೆಟ್ರೋಲ್ ಲೀಟರ್‌ಗೆ 94.66 ರೂ. ಮತ್ತು ಡೀಸೆಲ್ ಲೀಟರ್‌ಗೆ 87.83 ರೂ.
ಗುರುಗ್ರಾಮ: ಪೆಟ್ರೋಲ್ ಪ್ರತಿ ಲೀಟರ್‌ಗೆ 95.17 ರೂ. ಮತ್ತು ಡೀಸೆಲ್ ಲೀಟರ್‌ಗೆ 88.03 ರೂ.
ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ರೂ ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.
ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.22 ರೂ., ಡೀಸೆಲ್ ಲೀಟರ್ ಗೆ 82.38 ರೂ.
ಹೈದರಾಬಾದ್: ಪ್ರತಿ ಲೀಟರ್ ಪೆಟ್ರೋಲ್ 107.41 ರೂ., ಡೀಸೆಲ್ ಲೀಟರ್ ಗೆ 95.65 ರೂ.
ಜೈಪುರ: ಪ್ರತಿ ಲೀಟರ್ ಪೆಟ್ರೋಲ್ 105.71 ರೂ., ಡೀಸೆಲ್ ಲೀಟರ್ ಗೆ 91.10 ರೂ.
ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ರೂ. ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.
ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.65 ರೂ., ಡೀಸೆಲ್ ಲೀಟರ್ ಗೆ 87.76 ರೂ.
ಮಾರ್ಚ್ 2024 ರಿಂದ ಕೇಂದ್ರ ಸರ್ಕಾರವು ಪೆಟ್ರೋಲ್ ಬೆಲೆಯನ್ನು ರೂ 2 ರಷ್ಟು ಕಡಿತಗೊಳಿಸಿದಾಗಿನಿಂದ ದೇಶದ ಹೆಚ್ಚಿನ ಭಾಗಗಳಲ್ಲಿ ಬೆಲೆಗಳು ಬದಲಾಗದೆ ಉಳಿದಿವೆ.
ಕೇಂದ್ರ ಸರ್ಕಾರ ಮತ್ತು ಹಲವಾರು ರಾಜ್ಯಗಳು ಇಂಧನ ತೆರಿಗೆಗಳನ್ನು ಕಡಿತಗೊಳಿಸಿದ ನಂತರ ಮೇ 2022 ರಿಂದ ಇಂಧನ ಬೆಲೆಗಳು ಸ್ಥಿರವಾಗಿವೆ.
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಎಸ್ಎಂಎಸ್ ಮೂಲಕ ಇಂಧನ ಬೆಲೆ ತಿಳಿಯಿರಿ
ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸಹ ನೀವು ಪರಿಶೀಲಿಸಬಹುದು. ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಿ ಅಥವಾ SMS ಕಳುಹಿಸಿ. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು ನಗರ ಕೋಡ್ ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಅನ್ನು ನಮೂದಿಸುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.
Published On - 8:42 am, Fri, 28 June 24