ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗುತ್ತಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ (Petrol, Diesel )ಚಿಲ್ಲರೆ ಬೆಲೆಯಲ್ಲಿಯೂ ಬದಲಾವಣೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ನವೆಂಬರ್ 14) ಭಾರತದ ಹಲವು ನಗರಗಳಲ್ಲಿ ತೈಲ ಬೆಲೆಯಲ್ಲಿ ಏರಿಳಿತವಾಗಿದೆ. ಮಹಾರಾಷ್ಟ್ರ, ಬಿಹಾರ, ಹಿಮಾಚಲ ಪ್ರದೇಶ ಜಾರ್ಖಂಡ್, ಪಂಜಾಬ್ ಮತ್ತು ತಮಿಳುನಾಡಿನಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದರೆ, ಗುಜರಾತ್ ಮತ್ತು ಹರಿಯಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಇನ್ನು ನಮ್ಮ ಬೆಂಗಳೂರಿನಲ್ಲಿ ಇಂಧನ ಬೆಲೆ ಯಥಾಸ್ಥಿತಿ ಇದೆ.
ಮಹಾರಾಷ್ಟ್ರದಲ್ಲಿ ಪೆಟ್ರೋಲ್ 79 ಪೈಸೆ ಮತ್ತು ಡೀಸೆಲ್ 76 ಪೈಸೆ ಹೆಚ್ಚಾಗಿದೆ. ಬಿಹಾರದಲ್ಲಿ ಪೆಟ್ರೋಲ್ ಬೆಲೆ 52 ಪೈಸೆ ಮತ್ತು ಡೀಸೆಲ್ ಬೆಲೆ 48 ಪೈಸೆ ಹೆಚ್ಚಳವಾಗಿದೆ. ಇದಲ್ಲದೇ ಹಿಮಾಚಲ ಪ್ರದೇಶ, ಜಾರ್ಖಂಡ್, ಪಂಜಾಬ್ ಮತ್ತು ತಮಿಳುನಾಡಿನಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಮತ್ತೊಂದೆಡೆ, ಗುಜರಾತ್‌ನಲ್ಲಿ ಪೆಟ್ರೋಲ್ 38 ಪೈಸೆ ಮತ್ತು ಡೀಸೆಲ್ 41 ಪೈಸೆ ಅಗ್ಗವಾಗಿದೆ. ಹರಿಯಾಣದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಇದ್ದರೆ, ಡೀಸೆಲ್ 87.89ರೂಪಾಯಿ ಇದೆ.
ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳಿಗೆ ಜಗತ್ತಿನಾದ್ಯಂತ ಅಪಾರವಾದ ಬೇಡಿಕೆಯಿದೆ. ಜಗತ್ತಿನಾದ್ಯಂತ ಹಲವಾರು ವಿದ್ಯಮಾನಗಳು ಕಚ್ಚಾತೈಲದ ಬೆಲೆಯ ಮೇಲೆ ಪ್ರಭಾವ ಬೀರುತ್ತಲೇ ಇರುತ್ತವೆ. ಹಾಗಾಗಿ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಗಳ ಒಂದೇ ಸ್ಥಿರವಾದ ಬೆಲೆಯನ್ನು ನಿರೀಕ್ಷಿಸಲಾಗದು.
ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು (ಪ್ರತಿದಿನ ಡೀಸೆಲ್ ಪೆಟ್ರೋಲ್ ಬೆಲೆಯನ್ನು ಹೇಗೆ ಪರಿಶೀಲಿಸುವುದು). ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಬರೆಯುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.
Published On - 9:39 am, Tue, 14 November 23