AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on November 27: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 27ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸ್ಥಿರವಾಗಿಯೇ ಇದೆ. ಸೋಮವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 76.52 ಡಾಲರ್‌ಗೆ ಮಾರಾಟ ಮಾಡಲಾಗಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 80.69ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

Petrol Price on November 27: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 27ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: Spinny
ನಯನಾ ರಾಜೀವ್
|

Updated on: Nov 27, 2023 | 7:05 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸ್ಥಿರವಾಗಿಯೇ ಇದೆ. ಸೋಮವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 76.52 ಡಾಲರ್‌ಗೆ ಮಾರಾಟ ಮಾಡಲಾಗಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 80.69ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಛತ್ತೀಸ್‌ಗಢದಲ್ಲಿ ಪೆಟ್ರೋಲ್ 50 ಪೈಸೆ ಮತ್ತು ಡೀಸೆಲ್ 49 ಪೈಸೆ ಕಡಿಮೆಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 55 ಪೈಸೆ ಮತ್ತು ಡೀಸೆಲ್ ಬೆಲೆ 49 ಪೈಸೆ ಇಳಿಕೆಯಾಗಿದೆ. ಇನ್ನು ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 27 ಪೈಸೆ ಇಳಿಕೆಯಾಗಿದೆ. ಮತ್ತೊಂದೆಡೆ, ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಬೆಲೆ 70 ಪೈಸೆ ಮತ್ತು ಡೀಸೆಲ್ 65 ಪೈಸೆ ಹೆಚ್ಚಾಗಿದೆ. ರಾಜಸ್ಥಾನದಲ್ಲಿ ಪೆಟ್ರೋಲ್ ಬೆಲೆ 30 ಪೈಸೆ ಮತ್ತು ಡೀಸೆಲ್ 27 ಪೈಸೆ ಹೆಚ್ಚಾಗಿದೆ. ಇದಲ್ಲದೇ ಮಹಾರಾಷ್ಟ್ರ, ಕೇರಳ ಮತ್ತು ಜಾರ್ಖಂಡ್‌ನಲ್ಲಿಯೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72ರೂ. ಮತ್ತು ಡೀಸೆಲ್ ಲೀಟರ್‌ಗೆ 90.08 ರೂ. – ಮುಂಬೈನಲ್ಲಿ ಪೆಟ್ರೋಲ್ 106.31ರೂ. ಮತ್ತು ಡೀಸೆಲ್ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.34 ರೂ.

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ – ನೋಯ್ಡಾದಲ್ಲಿ ಪೆಟ್ರೋಲ್ 96.59ರೂ. ಮತ್ತು ಡೀಸೆಲ್ ಲೀಟರ್‌ಗೆ 89.76 ರೂ. ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ. ಮತ್ತು ಡೀಸೆಲ್ ಲೀಟರ್‌ಗೆ 89.75 ರೂ. ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ. ಮತ್ತು ಡೀಸೆಲ್ 89.76 ರೂ. ಆಗಿದೆ. -ಬೆಂಗಳೂರು, ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ. ಇದೆ. -ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.59 ರೂ. ಮತ್ತು ಡೀಸೆಲ್ 94.36 ರೂ. ಆಗಿದೆ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ. ಮತ್ತು ಡೀಸೆಲ್ 79.74 ರೂ. ಆಗಿದೆ.

ಮತ್ತಷ್ಟು ಓದಿ: Petrol Price on November 26: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 26ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಇತ್ತೀಚಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ