AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on November 28: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 28ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸ್ಥಿರವಾಗಿಯೇ ಇದೆ. ಮಂಗಳವಾರ ಬೆಳಗ್ಗೆ 6 ಗಂಟೆಯ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 75.22 ಡಾಲರ್‌ಗೆ ಮಾರಾಟ ಮಾಡಲಾಗಿದ್ದು, ಹಸಿರು ಮಾರ್ಕ್‌ನಲ್ಲಿ ಉಳಿದಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 79.98ಡಾಲರ್​ನಲ್ಲಿ ಸ್ವಲ್ಪ ಕುಸಿತದೊಂದಿಗೆ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

Petrol Price on November 28: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 28ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: kalinga TV
ನಯನಾ ರಾಜೀವ್
|

Updated on: Nov 28, 2023 | 7:03 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸ್ಥಿರವಾಗಿಯೇ ಇದೆ. ಮಂಗಳವಾರ ಬೆಳಗ್ಗೆ 6 ಗಂಟೆಯ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 75.22 ಡಾಲರ್‌ಗೆ ಮಾರಾಟ ಮಾಡಲಾಗಿದ್ದು, ಹಸಿರು ಮಾರ್ಕ್‌ನಲ್ಲಿ ಉಳಿದಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 79.98ಡಾಲರ್​ನಲ್ಲಿ ಸ್ವಲ್ಪ ಕುಸಿತದೊಂದಿಗೆ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಛತ್ತೀಸ್‌ಗಢದಲ್ಲಿ ಪೆಟ್ರೋಲ್ 50 ಪೈಸೆ ಮತ್ತು ಡೀಸೆಲ್ 49 ಪೈಸೆ ಹೆಚ್ಚಾಗಿದೆ. ಹಿಮಾಚಲ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 55 ಪೈಸೆ ಮತ್ತು ಡೀಸೆಲ್ ಬೆಲೆ 49 ಪೈಸೆ ಏರಿಕೆಯಾಗಿದೆ. ಇನ್ನು ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 27 ಪೈಸೆ ಏರಿಕೆಯಾಗಿದೆ. ಅದೇ ರೀತಿ, ಉತ್ತರಾಖಂಡ, ತಮಿಳುನಾಡು ಮತ್ತು ಮಧ್ಯಪ್ರದೇಶ ಸೇರಿದಂತೆ ಇತರ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಿದೆ. ಮತ್ತೊಂದೆಡೆ, ರಾಜಸ್ಥಾನದಲ್ಲಿ ಪೆಟ್ರೋಲ್ 30 ಪೈಸೆ ಮತ್ತು ಡೀಸೆಲ್ 27 ಪೈಸೆ ಕಡಿಮೆಯಾಗಿದೆ. ಇದಲ್ಲದೆ ಮಹಾರಾಷ್ಟ್ರ, ಬಿಹಾರ ಮತ್ತು ತೆಲಂಗಾಣದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ.

ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 90.08 ರೂ. -ಬೆಂಗಳೂರು, ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ. ಇದೆ. – ಮುಂಬೈನಲ್ಲಿ ಪೆಟ್ರೋಲ್ ರೂ 106.31 ಮತ್ತು ಡೀಸೆಲ್ ರೂ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.34 ರೂ.

ಮತ್ತಷ್ಟು ಓದಿ: Petrol Price on November 27: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 27ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಈ ನಗರಗಳಲ್ಲಿ ಬೆಲೆ ಎಷ್ಟು ಬದಲಾಗಿದೆ ನೋಯ್ಡಾದಲ್ಲಿ ಪೆಟ್ರೋಲ್ 97 ರೂ. ಮತ್ತು ಡೀಸೆಲ್ ಲೀಟರ್‌ಗೆ 90.14 ರೂ. ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ. ಮತ್ತು ಡೀಸೆಲ್ ಲೀಟರ್‌ಗೆ 89.75 ರೂ. ಆಗಿದೆ. – ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.62 ರೂ ಮತ್ತು ಡೀಸೆಲ್ 89.81 ರೂ ಆಗಿದೆ. – ಪಾಟ್ನಾದಲ್ಲಿ, ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಆಗಿದೆ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಇಂದಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ