Petrol Diesel Price on October O3: ಬಿಹಾರ, ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಬೆಲೆ ಅಗ್ಗ

|

Updated on: Oct 03, 2024 | 7:13 AM

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಅಕ್ಟೋಬರ್ 03, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 74 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 74.39 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಆದರೆ ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 70.73 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on October O3: ಬಿಹಾರ, ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಬೆಲೆ ಅಗ್ಗ
ಪೆಟ್ರೋಲ್
Image Credit source: Indian Express
Follow us on

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮುಂದುವರೆದಿದೆ. ಇದರ ಆಧಾರದ ಮೇಲೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಸುಮಾರು 71 ಡಾಲರ್ ಇದ್ದ ಕಚ್ಚಾ ತೈಲ ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 74 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 74.39 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಆದರೆ ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 70.73 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ. ಡೀಸೆಲ್ 88.94 ರೂ. ಇದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಮತ್ತಷ್ಟು ಓದಿ: Petrol Diesel Price on October O2: ಮಹಾರಾಷ್ಟ್ರ, ಚೆನ್ನೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಗುಜರಾತ್ ರಾಜಧಾನಿ ಅಹಮದಾಬಾದ್‌ನಲ್ಲಿ ಪೆಟ್ರೋಲ್ ಅನ್ನು 50 ಪೈಸೆ ಅಗ್ಗವಾಗಿ ಲೀಟರ್‌ಗೆ 94.50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಡೀಸೆಲ್ ಕೂಡ 50 ಪೈಸೆ ಕುಸಿದು ಲೀಟರ್‌ಗೆ 90.17 ರೂ.ಗೆ ತಲುಪಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪೆಟ್ರೋಲ್ 32 ಪೈಸೆ ಅಗ್ಗವಾಗಿದ್ದು, ಲೀಟರ್‌ಗೆ 105.74 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 30 ಪೈಸೆ ಕುಸಿದು ಲೀಟರ್‌ಗೆ 92.57 ರೂ.ಗೆ ಮಾರಾಟವಾಗುತ್ತಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಇಂದು ಪೆಟ್ರೋಲ್ ಬೆಲೆ 72 ಪೈಸೆಯಷ್ಟು ಕಡಿಮೆಯಾಗಿದೆ ಮತ್ತು ಲೀಟರ್‌ಗೆ 104.66 ರೂ.ಗೆ ಮಾರಾಟವಾಗುತ್ತಿದೆ, ಆದರೆ ಡೀಸೆಲ್ 68 ಪೈಸೆಯಷ್ಟು ಕುಸಿದು ಲೀಟರ್‌ಗೆ 91.48 ರೂ.ಗೆ ಮಾರಾಟವಾಗುತ್ತಿದೆ.

ಅಹಮದಾಬಾದ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ ರೂ 94.50 ಮತ್ತು ಡೀಸೆಲ್ ರೂ 90.17 ಆಗಿದೆ., ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 105.44 ರೂ ಮತ್ತು ಡೀಸೆಲ್ 92.57 ರೂ., ಜಲ್ಪೈಗುರಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 104.66 ರೂ ಮತ್ತು ಡೀಸೆಲ್ 91.48 ರೂ ಆಗಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ