Petrol Diesel Price on September 03: ಬಿಹಾರ, ಉತ್ತರ ಪ್ರದೇಶದಲ್ಲಿ ಇಂಧನ ದರ ಏರಿಕೆ

|

Updated on: Sep 03, 2024 | 7:09 AM

ದೇಶದ ಬಹುತೇಕ ಕಡೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಕೊಂಚ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಗಳು ಮತ್ತೊಮ್ಮೆ ಕುಸಿಯಲಾರಂಭಿಸಿದೆ. ಬ್ರೆಂಟ್ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 76.64 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on September 03: ಬಿಹಾರ, ಉತ್ತರ ಪ್ರದೇಶದಲ್ಲಿ ಇಂಧನ ದರ ಏರಿಕೆ
ಪೆಟ್ರೋಲ್
Image Credit source: Daily Excelsior
Follow us on

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಗಳು ಮತ್ತೊಮ್ಮೆ ಕುಸಿಯಲಾರಂಭಿಸಿದೆ. ಬ್ರೆಂಟ್ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 76.64 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 73.30 ಡಾಲರ್​ಗೆ ವಹಿವಾಟು ನಡೆಸುತ್ತಿದೆ. ಭಾರತದಲ್ಲಿ ಇಂಧನ ದರ ಸ್ಥಿರವಾಗಿದೆ. ಕೆಲವೆಡೆ ಕೊಂಚ ಏರಿಳಿತ ಕಂಡಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ಬೆಲೆಗಳು
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ.
ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.85 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.44 ರೂ.

ಬಿಹಾರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ. ಬಿಹಾರದಲ್ಲಿ ಪೆಟ್ರೋಲ್ ಬೆಲೆ 73 ಪೈಸೆ ಏರಿಕೆಯಾಗಿ 107.60 ರೂ. ಆಗಿದೆ. ಡೀಸೆಲ್​ ಬೆಲೆ 68ಪೈಸೆ ಹೆಚ್ಚಾಗಿ 94.29 ರೂ. ಆಗಿದೆ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ 26 ಪೈಸೆ ಹೆಚ್ಚಾಗಿ 94.77 ರೂ., ಡೀಸೆಲ್ 30 ಪೈಸೆ ಹೆಚ್ಚಾಗಿ 87.87 ರೂ.ನಲ್ಲಿ ವಹಿವಾಟು ನಡೆಸುತ್ತಿದೆ.

ಮತ್ತಷ್ಟು ಓದಿ: Petrol Diesel Price on September 02: ಕಚ್ಚಾತೈಲ ಬೆಲೆ ಇಳಿಕೆ, ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಅದೇ ಸಮಯದಲ್ಲಿ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 59 ಪೈಸೆ ಏರಿಕೆಯಾಗಿ 104.83 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 57 ಪೈಸೆ ಏರಿಕೆಯಾಗಿ 91.34 ರೂ.ಗೆ ತಲುಪಿದೆ.

ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96

ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.

ಚಂಡೀಗಢ: ಲೀಟರ್‌ಗೆ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್‌ಗೆ 82.40 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಪರಿಶೀಲಿಸುವುದು ಹೇಗೆ
ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ದರಗಳನ್ನು ನೀವು SMS ಮೂಲಕ ತಿಳಿದುಕೊಳ್ಳಬಹುದು. ನೀವು ಫೋನ್‌ನಲ್ಲಿ RSP ಸ್ಪೇಸ್ ಪೆಟ್ರೋಲ್ ಪಂಪ್‌ನ ಡೀಲರ್ ಕೋಡ್ ಅನ್ನು ಟೈಪ್ ಮಾಡಬಹುದು ಮತ್ತು ಸಂದೇಶವನ್ನು 92249 92249 ಗೆ ಕಳುಹಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ