Petrol Diesel Price on September 20: ಚೆನ್ನೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

|

Updated on: Sep 20, 2024 | 7:13 AM

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 20, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಚೆನ್ನೈನಲ್ಲಿ ಇಂಧನ ದರ ಹೆಚ್ಚಳವಾಗಿದೆ. ಉಳಿದೆಡೆ ಸ್ಥಿರತೆ ಕಾಯ್ದುಕೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 72 ಡಾಲರ್‌ಗಿಂತ ಹೆಚ್ಚಿದೆ. ಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 72.98 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 70.18ನಂತೆ ವಹಿವಾಟು ನಡೆಸುತ್ತಿದೆ.

Petrol Diesel Price on September 20: ಚೆನ್ನೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್
Image Credit source: Actewagel evhub
Follow us on

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮುಂದುವರೆದಿದೆ. ಇದರ ಆಧಾರದ ಮೇಲೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರ್ಧರಿಸಲಾಗುತ್ತದೆ. ದೀರ್ಘಕಾಲದಿಂದ ರಾಷ್ಟ್ರಮಟ್ಟದಲ್ಲಿ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಕರ್ನಾಟಕ, ಗೋವಾದಲ್ಲಿ ಮಾತ್ರ ಲೋಕಸಭಾ ಚುನಾವಣೆ ಮುಗಿದ ಬಳಿಕ ಇಂಧನ ದರ ಹೆಚ್ಚಳ ಮಾಡಲಾಗಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 72 ಡಾಲರ್‌ಗಿಂತ ಹೆಚ್ಚಿದೆ. ಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 72.98 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 70.18ನಂತೆ ವಹಿವಾಟು ನಡೆಸುತ್ತಿದೆ.
ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ.

ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದ್ದು, ಕೆಲವು ನಗರಗಳಲ್ಲಿ ಅವುಗಳ ಬೆಲೆ ಹೆಚ್ಚಾಗಿದೆ. ಇಂದು ಕೂಡ ದೇಶದ ಪ್ರಮುಖ ನಗರಗಳಾದ ದೆಹಲಿ, ಮುಂಬೈ ಮತ್ತು ಕೋಲ್ಕತ್ತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ, ಚೆನ್ನೈನಲ್ಲಿ ಪೆಟ್ರೋಲ್ 10 ಪೈಸೆ ಮತ್ತು ಡೀಸೆಲ್ 9 ಪೈಸೆ ಹೆಚ್ಚಾಗಿದೆ.ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಮತ್ತಷ್ಟು ಓದಿ: Petrol Diesel Price on September 19: ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

ಇಂಡಿಯನ್ ಆಯಿಲ್ ಸಂಖ್ಯೆ 9224992249 ಗೆ RSP ಸ್ಪೇಸ್ ಮತ್ತು ಸಿಟಿ ಪಿನ್ ಕೋಡ್ ಅನ್ನು ಸಂದೇಶ ಕಳುಹಿಸಿ. ಭಾರತ್ ಪೆಟ್ರೋಲಿಯಂ ಸಂಖ್ಯೆ 9223112222 ಗೆ RSP ಸ್ಪೇಸ್ ಮತ್ತು ಸಿಟಿ ಪಿನ್ ಕೋಡ್ ಅನ್ನು ಸಂದೇಶ ಕಳುಹಿಸಿ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಹಿಂದೂಸ್ತಾನ್ ಪೆಟ್ರೋಲಿಯಂ ಸಂಖ್ಯೆ 9222201122 ಗೆ HPPrice ಸ್ಪೇಸ್ ಮತ್ತು ಸಿಟಿ ಪಿನ್ ಕೋಡ್ ಅನ್ನು ಸಂದೇಶ ಕಳುಹಿಸಿ.
ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ವಿವಿಧ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ