Petrol Diesel Price Hike: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಕಳೆದ ಶುಕ್ರವಾರವಷ್ಟೇ 3 ರೂಪಾಯಿ ಹೆಚ್ಚಳವಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ, ಇಂದು ಮುಂಜಾನೆ ಮತ್ತೊಮ್ಮೆ ಪ್ರತಿ ಲೀಟರ್‌ಗೆ 90 ಪೈಸೆಯಷ್ಟು ದುಬಾರಿಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಈ ಸರಣಿ ಬೆಲೆ ಏರಿಕೆಯು ಗ್ರಾಹಕರಿಗೆ ದೊಡ್ಡ ಶಾಕ್ ನೀಡಿದ್ದು, ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಂತಾಗಿದೆ.

ಬೆಂಗಳೂರು, ಮೇ 19: ದೇಶಾದ್ಯಂತ ಗ್ರಾಹಕರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಶುಕ್ರವಾರದಂದು (ಮೇ 15) ಇಂಧನ ದರ 3 ರೂ.ನಷ್ಟು ಏರಿಕೆಯಾಗಿತ್ತು. ಇಂದು ಬೆಳ್ಳಂಬೆಳಗ್ಗೆ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ (Petrol, Diesel) ದರ ಪ್ರತಿ ಲೀಟರ್‌ಗೆ ಸರಾಸರಿ 90 ಪೈಸೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಂತಾಗಿದೆ.
ಮುಖ್ಯಾಂಶಗಳು
- ದೇಶದಲ್ಲಿ ಒಂದೇ ವಾರದಲ್ಲಿ ಎರಡನೇ ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ
- ಪ್ರತಿ ಲೀಟರ್‌ಗೆ ಸರಾಸರಿ 90 ಪೈಸೆ ದರ ಏರಿಕೆ
- ತೈಲ ದರ ಏರಿಕೆಯಿಂದ ವಾಹನ ಸಾಗಣೆ ವೆಚ್ಚ ದುಬಾರಿ ಸಾಧ್ಯತೆ
ಪೆಟ್ರೋಲ್, ಡೀಸೆಲ್ ದರ ಯಾವ ನಗರದಲ್ಲಿ ಎಷ್ಟಿದೆ?
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 97.77 ರೂ.ನಿಂದ 98.64 ರೂ.ಗೆ ಏರಿಕೆಯಾಗಿದೆ. ಹಾಗೆಯೇ ಡೀಸೆಲ್ ದರ 90.67ರೂ.ನಿಂದ 91.58 ರೂ.ಗೆ ತಲುಪಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ 91 ಪೈಸೆ ಹೆಚ್ಚಳವಾಗುವುದರೊಂದಿಗೆ 107.59ರೂ.ಗೆ ತಲುಪಿದ್ದರೆ, ಡೀಸೆಲ್ ದರ 94 ಪೈಸೆ ಏರಿಕೆಯಾಗಿ 94.08 ರೂ. ತಲುಪಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ದರದಲ್ಲಿ ಗರಿಷ್ಠ 96 ಪೈಸೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಬೆಲೆ 109.70 ರೂ. ಮುಟ್ಟಿದೆ. ಇನ್ನು ಡೀಸೆಲ್ ದರ 94 ಪೈಸೆ ಹೆಚ್ಚಳದೊಂದಿಗೆ 96.07 ರೂ.ಗೆ ಜಿಗಿದಿದೆ. ತಮಿಳುನಾಡಿನ ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 82 ಪೈಸೆ ಹೆಚ್ಚಳವಾಗಿ 104.49 ರೂ. ಹಾಗೂ ಡೀಸೆಲ್ ಬೆಲೆ 86 ಪೈಸೆ ಏರಿಕೆಯಾಗಿ 96.11 ರೂ.ಗೆ ತಲುಪಿದೆ.
ಕೇವಲ ಐದು ದಿನಗಳ ಅಂತರದಲ್ಲಿ ಎರಡು ಬಾರಿ ಇಂಧನ ದರ ಹೆಚ್ಚಳವಾಗಿರುವುದು ಸಾರ್ವಜನಿಕರ ಜೇಬಿಗೆ ಭಾರಿ ಕತ್ತರಿ ಹಾಕಿದೆ. ಸತತ ದರ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುವ ಆತಂಕ ಎದುರಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಮಹಾನಗರಗಳಲ್ಲಿ ತೈಲ ದರ ವಿವರ
RSPs of four Metro cities for 19.05.26 are as follows:
MS (petrol) prices
Delhi Rs 98.64 (+0.87) Kolkata Rs 109.70 (+0.96 ) Mumbai Rs 107.59 (+0.91 ) Chennai Rs 104.49 (+0.82)
High Speed Diesel prices
Delhi Rs 91.58 (+0.91) Kolkata…
— ANI (@ANI) May 19, 2026
ದೈನಂದಿನ ಅಗತ್ಯ ವಸ್ತುಗಳ ಮೇಲೆ ಇಂಧನ ದರ ಏರಿಕೆಯ ನೇರ ಪರಿಣಾಮ
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯು ದೈನಂದಿನ ಬಳಕೆಯ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಸಣ್ಣ ವ್ಯಾಪಾರಿಗಳು, ಸಾರಿಗೆ ಉದ್ಯಮದಲ್ಲಿ ತೊಡಗಿರುವವರು, ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವವರು ಮತ್ತು ಪ್ರತಿದಿನ ಸ್ವಂತ ವಾಹನಗಳನ್ನು ಬಳಸುವ ಜನಸಾಮಾನ್ಯರು ಈ ಬೆಲೆ ಏರಿಕೆಯ ನೇರ ಹೊಡೆತವನ್ನು ಅನುಭವಿಸಬೇಕಾಗುತ್ತದೆ.
ಇದನ್ನೂ ಓದಿ ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ
ಇಂಧನವು ಹೆಚ್ಚು ದುಬಾರಿಯಾಗುತ್ತಿದ್ದಂತೆ ಬಸ್‌ಗಳು, ಟ್ಯಾಕ್ಸಿಗಳು ಮತ್ತು ಸರಕು ಸಾಗಣೆ ವೆಚ್ಚಗಳು ಹೆಚ್ಚಾಗುತ್ತವೆ. ಇದು ಸಹಜವಾಗಿಯೇ ಇತರ ಅಗತ್ಯ ವಸ್ತುಗಳ ಬೆಲೆಗಳೂ ಸಹ ಗಗನಕ್ಕೇರಲು ಕಾರಣವಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಹೀಗೆಯೇ ನಿರಂತರವಾಗಿ ಏರುತ್ತಿದ್ದರೆ, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮತ್ತಷ್ಟು ದುಬಾರಿಯಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದು ದೇಶದಲ್ಲಿ ಹಣದುಬ್ಬರ (ಬೆಲೆ ಏರಿಕೆ) ಮತ್ತಷ್ಟು ಹೆಚ್ಚಾಗುವ ಆತಂಕವನ್ನು ಮೂಡಿಸಿದೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 6:50 am, Tue, 19 May 26

