AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ಕಚ್ಚಾ ತೈಲದ ಬೆಲೆಯಲ್ಲಿ ಮತ್ತೆ ಹೆಚ್ಚಳ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

Fuel Price Today: ರಾಜಸ್ಥಾನದಲ್ಲಿ ಪೆಟ್ರೋಲ್ ಬೆಲೆ 0.48 ರೂ. ಇಳಿಕೆಯಾಗಿದ್ದು, ಲೀಟರ್‌ಗೆ 108.62 ರೂ.ಗೆ ಮತ್ತು ಡೀಸೆಲ್ 0.43 ರೂ. ಇಳಿಕೆಯಾಗಿ 93.85 ರೂ.ಗೆ ತಲುಪಿದೆ. ಭಾರತದ ಪ್ರಮುಖ ನಗರಗಳಲ್ಲಿ 6 ತಿಂಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. OPEC ರಾಷ್ಟ್ರಗಳು ಕಚ್ಚಾ ಉತ್ಪಾದನೆಯಲ್ಲಿ ಕಡಿತದ ಘೋಷಣೆ ಮಾಡಿದ ನಂತರ ಕಚ್ಚಾ ತೈಲದಲ್ಲಿ ಏರಿಳಿತಗಳಾಗಿತ್ತು. ನವೆಂಬರ್ 1ರಿಂದ ತೈಲ ಕಂಪನಿಗಳು ಪ್ರತಿ ಲೀಟರ್ ತೈಲಕ್ಕೆ 40 ಪೈಸೆ ಪರಿಹಾರವನ್ನು ನೀಡುವ ನಿರೀಕ್ಷೆಯಿತ್ತು.

Petrol Diesel Price: ಕಚ್ಚಾ ತೈಲದ ಬೆಲೆಯಲ್ಲಿ ಮತ್ತೆ ಹೆಚ್ಚಳ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 05, 2026 | 10:22 AM

Share

Fuel Price on December 5: ಇಂದು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Fuel Price) ಬೆಲೆಯಲ್ಲಿ ಜಿಗಿತವಾಗಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 87.35 ಡಾಲರ್​ಗೆ ಮಾರಾಟವಾಗುತ್ತಿದೆ. ಇದು 1.78 ಡಾಲರ್​ಗೆ (ಶೇ. 2.08) ಹೆಚ್ಚಾಗಿದೆ. ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದೆ. ಹಲವು ರಾಜ್ಯಗಳಲ್ಲಿ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಬದಲಾವಣೆಯಾಗಿದೆ.

ರಾಜಸ್ಥಾನದಲ್ಲಿ ಪೆಟ್ರೋಲ್ ಬೆಲೆ 0.48 ರೂ. ಇಳಿಕೆಯಾಗಿದ್ದು, ಲೀಟರ್‌ಗೆ 108.62 ರೂ.ಗೆ ಮತ್ತು ಡೀಸೆಲ್ 0.43 ರೂ. ಇಳಿಕೆಯಾಗಿ 93.85 ರೂ.ಗೆ ತಲುಪಿದೆ. ಛತ್ತೀಸ್‌ಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 0.60 ರೂ.ನಿಂದ 102.98 ರೂ.ಗೆ ಇಳಿಕೆಯಾಗಿದ್ದು, ಡೀಸೆಲ್ 0.59 ರೂ.ನಿಂದ 95.96 ರೂ.ಗೆ ಇಳಿಕೆಯಾಗಿದೆ. ಮತ್ತೊಂದೆಡೆ, ಪಂಜಾಬ್‌ನಲ್ಲಿ, ಪೆಟ್ರೋಲ್ 96.89 ರೂ.ಗೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 87.24 ರೂ.ಗೆ 0.30 ರೂ. ಇದಲ್ಲದೆ ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಇಂಧನದ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ. ಆದರೆ, ದೇಶದ 4 ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇ 21ರಂದು ಪೆಟ್ರೋಲ್ ಮೇಲೆ ಲೀಟರ್​ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಅಬಕಾರಿ ಸುಂಕ ಕಡಿತ ಮಾಡುವುದಾಗಿ ಘೋಷಿಸಿದ್ದರು.ಸುಮಾರು 6 ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ ಮಾಡದೇ ಇರುವುದು ಇದೇ ಮೊದಲು. ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗುತ್ತದೆ. ಆ ದಿನದ ಹೊಸ ದರಗಳು ಬೆಳಿಗ್ಗೆ 6 ಗಂಟೆಯಿಂದಲೇ ಅನ್ವಯವಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳ ಸೇರ್ಪಡೆಯಿಂದಾಗಿ ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದರಿಂದಾಗಿ ಪೆಟ್ರೋಲ್ ಡೀಸೆಲ್ ಬೆಲೆ ತುಂಬಾ ಹೆಚ್ಚಾಗಿತ್ತು.

ಇದನ್ನೂ ಓದಿ: Petrol Price on December 3: ಉತ್ತರ ಕನ್ನಡದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕೊಂಚ ಕುಸಿತ; ನಿಮ್ಮ ಊರಿನ ಇಂಧನದ ಬೆಲೆ ಹೀಗಿದೆ

ಭಾರತದ ಪ್ರಮುಖ ನಗರಗಳಲ್ಲಿ 6 ತಿಂಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. OPEC ರಾಷ್ಟ್ರಗಳು ಕಚ್ಚಾ ಉತ್ಪಾದನೆಯಲ್ಲಿ ಕಡಿತದ ಘೋಷಣೆ ಮಾಡಿದ ನಂತರ ಕಚ್ಚಾ ತೈಲದಲ್ಲಿ ಏರಿಳಿತಗಳಾಗಿತ್ತು. ನವೆಂಬರ್ 1ರಿಂದ ತೈಲ ಕಂಪನಿಗಳು ಪ್ರತಿ ಲೀಟರ್ ತೈಲಕ್ಕೆ 40 ಪೈಸೆ ಪರಿಹಾರವನ್ನು ನೀಡುವ ನಿರೀಕ್ಷೆಯಿತ್ತು. ಆದರೆ, ಕಂಪನಿಗಳು ಇದನ್ನು ಮಾಡಲಿಲ್ಲ. ದೇಶಿಯ ಮಾರುಕಟ್ಟೆಯಲ್ಲಿ ಸುಮಾರು 6 ತಿಂಗಳಿನಿಂದ ಪೆಟ್ರೋಲ್ -ಡೀಸೆಲ್ ಬೆಲೆ ಸ್ಥಿರವಾಗಿದೆ. ಇದು ಜನಸಾಮಾನ್ಯರಿಗೆ ನೆಮ್ಮದಿ ತಂದಿದೆ.

ದೆಹಲಿಯಲ್ಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಲೀಟರ್‌ಗೆ 94.27 ರೂ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೊಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.58 ರೂ. ಮತ್ತು ಡೀಸೆಲ್ 89.75 ರೂ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.76 ರೂ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ. ತಿರುವನಂತಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಗುರುಗ್ರಾಮದಲ್ಲಿ 97.18 ರೂ. ಮತ್ತು ಡೀಸೆಲ್ ಲೀಟರ್‌ಗೆ 90.05 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ. ಭುವನೇಶ್ವರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.19 ರೂ. ಮತ್ತು ಡೀಸೆಲ್ 94.76 ರೂ. ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ 84.26 ರೂ. ಹೈದರಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ. ಆಗಿದೆ.

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMCಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಕಳುಹಿಸಬಹುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 am, Mon, 5 December 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ