ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ!

| Updated By: ಗಂಗಾಧರ​ ಬ. ಸಾಬೋಜಿ

Updated on: Oct 31, 2022 | 10:37 PM

ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಅನ್ವಯವಾಗಲಿದೆ.

ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ!
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಪೆಟ್ರೋಲ್‌ (Petrol), ಡೀಸೆಲ್ (diesel) ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.72 ರೂ. ಇದ್ದು, ಡೀಸೆಲ್ ದರ ಲೀಟರ್‌ಗೆ 89.62 ರೂ. ಇದೆ. ಕಳೆದ 5 ತಿಂಗಳಿಂದ ರಾಷ್ಟ್ರ ರಾಜಧಾನಿ ನವದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತಾ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನದ ದರ ಒಂದೇ ರೀತಿಯಲ್ಲಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 1 ಲೀಟರ್​ಗೆ 101.94 ರೂ, ಡೀಸೆಲ್​ಗೆ 87.89 ರೂ. ಇದೆ. ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.03 ರೂ., 1 ಲೀಟರ್ ಡೀಸೆಲ್ ಲೀಟರ್‌ಗೆ 92.76 ರೂ. ಇದೆ. ಹೈದರಾಬಾದ್​​ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​ಗೆ 109.66 ರೂ., ಡೀಸೆಲ್ ಬೆಲೆ 1 ಲೀಟರ್​ಗೆ 97.82 ರೂ. ಇದೆ.

ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.31 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102.63 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 94.24 ರೂ. ಇದೆ. ತಿರುವನಂತಪುರಂನಲ್ಲಿ ಪೆಟ್ರೋಲ್ ಬೆಲೆ 107.71 ರೂ., ಡೀಸೆಲ್ ಬೆಲೆ 96.52 ರೂ. ಇದೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಅನ್ನು ಕಳುಹಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:28 pm, Mon, 31 October 22