AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಆಗಸ್ಟ್ ತಿಂಗಳ ಮೊದಲನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಿಲ್ಲ! ಸತತ 15 ದಿನಗಳಿಂದ ಇಂಧನ ದರ ಸ್ಥಿರ

Petrol Rate Today: ಮೇ ತಿಂಗಳಿನಿಮದ ತೈಲ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಕಂಡಿತ್ತು. ಸುಮಾರು 42 ದಿನಗಳಲ್ಲಿ ಲೀಟರ್ ಪೆಟ್ರೋಲ್ ಬೆಲೆ 11.52 ರೂಪಾಯಿ ಏರಿಕೆ ಆಗಿದೆ. ಏತನ್ಮಧ್ಯೆ ಜುಲೈ ತಿಂಗಳಿನಲ್ಲಿ ಎರೆಡು ಬಾರಿ ಡೀಸೆಲ್ ದರವನ್ನು ಇಳಿಕೆ ಮಾಡಲಾಯಿತು.

Petrol Price Today: ಆಗಸ್ಟ್ ತಿಂಗಳ ಮೊದಲನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಿಲ್ಲ! ಸತತ 15 ದಿನಗಳಿಂದ ಇಂಧನ ದರ ಸ್ಥಿರ
ಪಿಟಿಐ ಚಿತ್ರ
TV9 Web
| Edited By: |

Updated on:Aug 01, 2021 | 8:18 AM

Share

Petrol Diesel Price Today | ದೆಹಲಿ: ಸರ್ಕಾರಿ ತೈಲ ಕಂಪನಿಗಳು ಸತತ 15ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದೇಶದ ರಾಜಧಾನಿ ಸೇರಿದಂತೆ ಎಲ್ಲಾ ಮಹಾನಗರಗಳಲ್ಲಿಯೂ ಇಂಧನ ದರ(Fuel Price) ಸ್ಥಿರತೆಯಲ್ಲಿದೆ. ಜುಲೈ 18ನೇ ತಾರೀಕಿನಿಂದ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆ (Diesel Price) ಬದಲಾಗಿಲ್ಲ. ಆ ಮೂಲಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಇದಲ್ಲದೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗಿದೆ.

ಮೇ ತಿಂಗಳಿನಿಮದ ತೈಲ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಕಂಡಿತ್ತು. ಸುಮಾರು 42 ದಿನಗಳಲ್ಲಿ ಲೀಟರ್ ಪೆಟ್ರೋಲ್ ಬೆಲೆ 11.52 ರೂಪಾಯಿ ಏರಿಕೆ ಆಗಿದೆ. ಏತನ್ಮಧ್ಯೆ ಜುಲೈ ತಿಂಗಳಿನಲ್ಲಿ ಎರೆಡು ಬಾರಿ ಡೀಸೆಲ್ ದರವನ್ನು ಇಳಿಕೆ ಮಾಡಲಾಯಿತು.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.83 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.45 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.39 ರೂಪಾಯಿ ಇದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.67 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ.

ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.57 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ. ಎಲ್ಲಾ ಮಹಾನಗರಗಳಲ್ಲಿಯೂ ಸಹ ಸತತ 15 ದಿನಗಳ ಕಾಲ ಇದೇ ದರದಲ್ಲಿ ವಾಹನ ಸವಾರರು ಖರೀದಿಸುತ್ತಿದ್ದಾರೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:14 am, Sun, 1 August 21

Follow Us
TV9 Web
TV9 Web

TV9 Kannada

Read More
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್