Petrol Price Today: ಇಂದು ಸಹ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆಗಳಿಲ್ಲ; ಸತತ 8 ದಿನಗಳಿಂದ ಇಂಧನ ದರ ಸ್ಥಿರ

Petrol Rate Today: ಸದ್ಯಕ್ಕೆ ಇಂಧನ ದರ ಹೆಚ್ಚಳವಾಗದೇ ಸ್ಥಿರತೆ ಕಾಯ್ದುಕೊಂಡಿದೆ ಎಂಬುದು ಸ್ವಲ್ಪ ಸಮಾಧಾನ ತಂದಿರುವ ವಿಚಾರ. ಸರ್ಕಾರಿ ತೈಲ ಕಂಪನಿಗಳು ಇಂದು ತೈಲ ದರದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.

Petrol Price Today: ಇಂದು ಸಹ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆಗಳಿಲ್ಲ; ಸತತ 8 ದಿನಗಳಿಂದ ಇಂಧನ ದರ ಸ್ಥಿರ
ಪಿಟಿಐ ಚಿತ್ರ

Petrol Diesel Price Today| ದೆಹಲಿ: ಸತತ 8 ದಿನಗಳಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಏರುತ್ತಲೇ ಇರುವ ಪೆಟ್ರೋಲ್ (Petrol Price) ಡೀಸೆಲ್ ದರ ಗಮನಿಸುತ್ತಿದ್ದ ವಾಹನ ಸವಾರರು ಆಕ್ರೋಶ ಹೊರ ಹಾಕಿದ್ದರು. ಸದ್ಯಕ್ಕೆ ಇಂಧನ ದರ (Fuel Price) ಹೆಚ್ಚಳವಾಗದೇ ಸ್ಥಿರತೆ ಕಾಯ್ದುಕೊಂಡಿದೆ ಎಂಬುದು ಸ್ವಲ್ಪ ಸಮಾಧಾನ ತಂದಿರುವ ವಿಚಾರ. ಸರ್ಕಾರಿ ತೈಲ ಕಂಪನಿಗಳು ಇಂದು ತೈಲ ದರದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.

ರಾಷ್ಟ್ರ ರಾಜಧಾನಿ ಸೇರಿದಂತೆ ಎಲ್ಲಾ ಮಹಾನಗರಗಳಲ್ಲಿಯೂ ಇಂಧನ ದರ ಸ್ಥಿರವಾಗಿದೆ. ಈ ವಾರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿವೆ. ದೇಶೀಯ ಮಾರುಕಟ್ಟೆಯಲ್ಲಿ ಕಳೆದ 8 ದಿನಗಳಿಂದ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಇಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಕಳೆದ ಮೇ ತಿಂಗಳಿನಿಂದ ಪೆಟ್ರೋಲ್ ದರ ಹೆಚ್ಚಳವಾಗುತ್ತಲೇ ಇದೆ. 42 ದಿನಗಳಲ್ಲಿ ಲೀಟರ್ ಬೆಲೆ ಒಟ್ಟು 11.52 ರೂಪಾಯಿ ಏರಿಕೆ ಆಗಿದೆ.

ದೇಶಾದ್ಯಂತ 19 ರಾಜ್ಯಗಳಲ್ಲಿ ಪೆಟ್ರೋಲ್ ದರ 100 ಗಡಿ ದಾಟಿ ಮುನ್ನುಗ್ಗುತ್ತಿದೆ. ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್ ಈ ಪಟ್ಟಿಯಲ್ಲಿವೆ. ಅದೇ ರೀತಿ ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿಯೂ ಲೀಟರ್ ಪೆಟ್ರೋಲ್ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂ. ಇದೆ. ಮುಂಬೈನಲ್ಲಿ ಲೀ. ಪೆಟ್ರೋಲ್ ದರ 107.83 ರೂ. ಹಾಗೂ ಲೀ. ಡೀಸೆಲ್ ದರ 97.45 ರೂ. ಇದೆ. ಅದೇ ರೀತಿ ಚೆನ್ನೈನಲ್ಲಿ ಲೀ. ಪೆಟ್ರೋಲ್ ದರ 101.49 ರೂ. ಹಾಗೂ ಲೀ.ಡೀಸೆಲ್ ದರ 94.45 ರೂ. ಇದೆ.

ಕೋಲ್ಕತ್ತಾದಲ್ಲಿ ಲೀ. ಪೆಟ್ರೋಲ್ ದರ 110.20 ರೂ. ಹಾಗೂ ಲೀ. ಡೀಸೆಲ್ ದರ 93.02 ರೂ. ಇದೆ. ಬೆಂಗಳೂರಿನಲ್ಲಿ ಲೀ. ಪೆಟ್ರೋಲ್ ದರ 105.25 ರೂ. ಹಾಗೂ ಲೀಟರ್ ಡೀಸೆಲ್ ದರ 95.26 ರೂ. ಇದೆ. ಲಕ್ನೋದಲ್ಲಿ ಲೀ.ಪೆಟ್ರೋಲ್ ದರ 98.92 ರೂ. ಹಾಗೂ ಲೀಟರ್ ಡೀಸೆಲ್ ದರ ಲೀ. 90.26 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

Click on your DTH Provider to Add TV9 Kannada