AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on November 28: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 28, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 73.25 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 69.19 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on November 28: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಸ್ಥಿರ
ಪೆಟ್ರೋಲ್ Image Credit source: HT Auto
ನಯನಾ ರಾಜೀವ್
|

Updated on: Nov 28, 2024 | 7:09 AM

Share

ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 73.25 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 69.19 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.90 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.49 ರೂ. ಇದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ವಿವಿಧ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮಾಹಿತಿಯನ್ನು ನವೀಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪ್ರಭಾವ ಬೀರುವಲ್ಲಿ ಕಚ್ಚಾ ತೈಲ ಬೆಲೆಗಳು ಪ್ರಮುಖ ಪಾತ್ರವಹಿಸುತ್ತವೆ. ಕಚ್ಚಾ ತೈಲವು ಪೆಟ್ರೋಲ್ ಮತ್ತು ಡೀಸೆಲ್‌ನ ಮುಖ್ಯ ಕಚ್ಚಾ ವಸ್ತುವಾಗಿದೆ. ಅದರ ಬೆಲೆಯಲ್ಲಿ ಹೆಚ್ಚಳ ಅಥವಾ ಇಳಿಕೆಯಿಂದಾಗಿ ಇಂಧನದ ಬೆಲೆಯೂ ಬದಲಾಗುತ್ತದೆ.

ಮತ್ತಷ್ಟು ಓದಿ: Petrol Diesel Price on November 26: ಆಂಧ್ರ, ಅಸ್ಸಾಂನಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ಭಾರತವು ಕಚ್ಚಾ ತೈಲದ ದೊಡ್ಡ ಆಮದುದಾರನಾಗಿರುವುದರಿಂದ ರೂಪಾಯಿ ಮತ್ತು ಡಾಲರ್ ಮೌಲ್ಯದಲ್ಲಿನ ಬದಲಾವಣೆಗಳು ಪರಿಣಾಮ ಬೀರುತ್ತವೆ. ಕೇಂದ್ರ ಸರ್ಕಾರದೊಂದಿಗೆ, ರಾಜ್ಯ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆಯನ್ನು ವಿಧಿಸುತ್ತದೆ, ಇದರಿಂದಾಗಿ ಪ್ರತಿ ರಾಜ್ಯದಲ್ಲಿ ಬೆಲೆಗಳು ವಿಭಿನ್ನವಾಗಿವೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ. ಡೀಸೆಲ್ 88.94 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಚಂಡೀಗಢ: ಪೆಟ್ರೋಲ್ ಬೆಲೆ: ಲೀಟರ್‌ಗೆ 94.30 ರೂ, ಡೀಸೆಲ್ ಬೆಲೆ: 82.45 ರೂ.

ಇಂದೋರ್: ಪೆಟ್ರೋಲ್ ಬೆಲೆ : ಪ್ರತಿ ಲೀಟರ್‌ಗೆ ರೂ 106.57, ಡೀಸೆಲ್ ಬೆಲೆ: ಪ್ರತಿ ಲೀಟರ್‌ಗೆ ರೂ 91.97

ಮುಂಬೈ: ಪೆಟ್ರೋಲ್ ಬೆಲೆ: ಲೀಟರ್‌ಗೆ 103.44 ರೂ, ಡೀಸೆಲ್ ಬೆಲೆ: ಲೀಟರ್‌ಗೆ 89.97 ರೂ.

ನವದೆಹಲಿ: ಪೆಟ್ರೋಲ್ ಬೆಲೆ: ಲೀಟರ್‌ಗೆ 94.77 ರೂ, ಡೀಸೆಲ್ ಬೆಲೆ: ಲೀಟರ್‌ಗೆ 87.67 ರೂ.

ಲಕ್ನೋ: ಪೆಟ್ರೋಲ್ ಬೆಲೆ: ಲೀಟರ್‌ಗೆ 94.61 ರೂ, ಡೀಸೆಲ್ ಬೆಲೆ: ಲೀಟರ್‌ಗೆ 87.72 ರೂ.

ರಾಂಚಿ: ಪೆಟ್ರೋಲ್ ಬೆಲೆ: ಲೀಟರ್‌ಗೆ 98.38 ರೂ, ಡೀಸೆಲ್ ಬೆಲೆ: 93.14 ರೂ.

ಗಾಜಿಯಾಬಾದ್: ಪೆಟ್ರೋಲ್ ಬೆಲೆ: ರೂ 94.45 ಲೀಟರ್, ಡೀಸೆಲ್ ಬೆಲೆ: ರೂ 87.52 ಪ್ರತಿ ಲೀಟರ್

ಭೋಪಾಲ್: ಪೆಟ್ರೋಲ್ ಬೆಲೆ: ಪ್ರತಿ ಲೀಟರ್‌ಗೆ ರೂ 106.17, ಡೀಸೆಲ್ ಬೆಲೆ: ಪ್ರತಿ ಲೀಟರ್‌ಗೆ ರೂ 91.73

ಚೆನ್ನೈ: ಪೆಟ್ರೋಲ್ ಬೆಲೆ: ಲೀಟರ್‌ಗೆ 100.90 ರೂ, ಡೀಸೆಲ್ ಬೆಲೆ: ಲೀಟರ್‌ಗೆ 92.49 ರೂ.

ಕೋಲ್ಕತ್ತಾ: ಪೆಟ್ರೋಲ್ ಬೆಲೆ: ಲೀಟರ್‌ಗೆ 104.95 ರೂ, ಡೀಸೆಲ್ ಬೆಲೆ: ಲೀಟರ್‌ಗೆ 91.76 ರೂ.

ಫರಿದಾಬಾದ್: ಪೆಟ್ರೋಲ್ ಬೆಲೆ: ಲೀಟರ್‌ಗೆ 95.56 ರೂ, ಡೀಸೆಲ್ ಬೆಲೆ: ಲೀಟರ್‌ಗೆ 88.40 ರೂ.

ಜೈಪುರ: ಪೆಟ್ರೋಲ್ ಬೆಲೆ: ಲೀಟರ್‌ಗೆ 104.72 ರೂ, ಡೀಸೆಲ್ ಬೆಲೆ: 90.21 ರೂ. ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ